ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ: ಫೋಟೊ ವೈರಲ್

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ (ಫೆಬ್ರವರಿ 12) ಮೋದಿ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದರು. ಇಲ್ಲಿಂದ ನೇರೆವಾಗಿ ರಾಜಭವನಕ್ಕೆ ತೆರಳಿದ್ದರು.

ಇಂದು (ಫೆಬ್ರವರಿ 13) ಏರೋ ಇಂಡಿಯಾ 2023 ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಏರೋ ಇಂಡಿಯಾ ಶೋವನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಈ ಸಂಬಂಧ ಒಂದು ದಿನ ಮುಂಚಿತವಾಗಿಯೇ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂಬಂಧ ಚಿತ್ರರಂಗ, ಉದ್ಯಮ ಹಾಗೂ ಕ್ರಿಕೆಟ್ ಕ್ಷೇತ್ರದ ಗಣ್ಯರಿಗೆ ಔತಣಕೂಟ ಆಹ್ವಾನ ನೀಡಿದ್ದರು ಎನ್ನಲಾಗಿದೆ.

Yash, Rishab Shetty Dinner With PM Narendra Modi In Rajabhavan Bengaluru

ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಚಿತ್ರರಂಗ, ಉದ್ಯಮ ಹಾಗೂ ಕ್ರಿಕೆಟ್ ಕ್ಷೇತ್ರದ ಔತಣಕೂಟದಲ್ಲಿ ಭಾಗಿಯಾಗಿದ್ದರು ಅನ್ನೋ ಸುದ್ದಿ ಓಡಾಡುತ್ತಿದೆ. ಪ್ಯಾನ್‌ ಇಂಡಿಯಾ ಸ್ಟಾರ್‌ಗಳಾ ನಟ ಯಶ್‌, ರಿಷಬ್‌ ಶೆಟ್ಟಿ ಔತಣಕೂಟದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಹಾಗೇ ನಿರ್ಮಾಪಕ ವಿಜಯ್‌ ಕಿರಗಂದೂರು, ಶ್ರದ್ಧಾ ಜೈನ್‌, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ನಿರ್ದೇಶಕ ಪ್ರಶಾಂತ್‌ ನೀಲ್‌, ಕ್ರಿಕೆಟ್ ಆಟಗಾರರಾದ ಅನಿಲ್‌ ಕುಂಬ್ಳೆ , ವೆಂಕಟೇಶ್‌ ಪ್ರಸಾದ್‌, ಜಾವಗಲ್‌ ಶ್ರೀನಾಥ್‌, ಮನೀಶ್‌ ಪಾಂಡೆ, ಮಯಾಂಕ್‌ ಅಗರ್ವಾಲ್‌, ಉದ್ಯಮಿ ನಿತಿನ್‌ ಕಾಮತ್‌, ತರುಣ್‌ ಮೆಹ್ತಾ ಅವರಿಗೂ ಔತಣಕೂಟಕ್ಕೆ ಆಹ್ವಾನ ನೀಡಲಾಗಿತ್ತು ಎಂದು ವರದಿಯಾಗಿದೆ.

ಎಚ್‌ಎಚ್‌ಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಸ್ವಾಗತಿಸಿದ್ದರು.

Yash, Rishab Shetty Dinner With PM Narendra Modi In Rajabhavan Bengaluru

ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ಮೋದಿಯೊಂದಿಗೆ ರಾಕಿಂಗ್ ಸ್ಟಾರ್ ಯಶ್, ರಿಷಬ್ ಶೆಟ್ಟಿ, ಅಶ್ವಿನಿ ಪುನೀತ್ ರಾಜ್‌ಕುಮಾರ್, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್ ಅಯ್ಯೋ ಶ್ರದ್ಧ ನಿಂತಿರುವ ಫೋಟೊ ವೈರಲ್ ಆಗಿದೆ.

ಇದೇ ವೇಳೆ ಯಶ್ ಪ್ರಧಾನ ಮಂತ್ರಿ ಬಳಿ ಕರ್ನಾಟಕದಲ್ಲಿ ಫಿಲ್ಮಿ ಸಿಟಿಯನ್ನು ನಿರ್ಮಾಣ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆಂದು ಕೆಲವೆಡೆ ವರದಿಯಾಗಿದೆ.

More from Filmibeat

English summary
Yash, Rishab Shetty Dinner With PM Narendra Modi In Rajabhavan Bengaluru, Know More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X