Just In
Don't Miss!
- Education
DFCCIL Recruitment 2021: 1099 ಜ್ಯೂನಿಯರ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- News
ಕೆಜಿಎಫ್ನಲ್ಲಿ ಮಹದೇವಪುರ ಸಬ್ ಇನ್ಸ್ಪೆಕ್ಟರ್ಗೆ ಚಾಕು ಇರಿತ
- Sports
ಭಾರತ vs ಇಂಗ್ಲೆಂಡ್: ಧೋನಿ ದಾಖಲೆ ಸರಿದೂಗಿಸಿದ ವಿರಾಟ್ ಕೊಹ್ಲಿ
- Lifestyle
ಈ 7 ಬಗೆಯ ಆಹಾರಗಳು ಕೂದಲು ಉದುರುವ ಸಮಸ್ಯೆ ಹೆಚ್ಚಿಸುವುದು
- Automobiles
ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
- Finance
ಚಿನ್ನದ ಬೆಲೆ ಇಳಿಕೆ: ಗರಿಷ್ಠ ಮಟ್ಟಕ್ಕಿಂತ 11,500 ರೂ. ಕಡಿಮೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಗ್‌ಬಾಸ್ 08 ಗೆ ರಾಕಿಂಗ್ ಸ್ಟಾರ್ ಯಶ್ ತಾಯಿ?
ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಾ ಅವರು ಕನ್ನಡ ಬಿಗ್‌ಬಾಸ್ 8 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆ.
ಪುಷ್ಪಾ ಅವರು ಕೆಲವು ದಿನಗಳ ಹಿಂದೆಯಷ್ಟೆ ಸಿಹಿ ಕಹಿ ಚಂದ್ರು ನಡೆಸಿಕೊಡುವ ಅಡುಗೆ ಕಾರ್ಯಕ್ರಮ 'ಬೊಂಬಾಟ್ ಭೋಜನ'ದಲ್ಲಿ ಭಾಗವಹಿಸಿದ್ದರು. ಅದಾದ ನಂತರ ಪುಷ್ಪಾ ಅವರು ಬಿಗ್‌ಬಾಸ್ ಗೆ ಬರಲಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡಲು ಆರಂಭವಾಯಿತು.
ಆದರೆ ಯಶ್ ಅಭಿಮಾನಿಗಳು ಇದನ್ನು ಅಲ್ಲಗಳೆದಿದ್ದಾರೆ. ಯಶ್ ಗೆ ಹತ್ತಿರದವರೂ ಸಹ 'ಯಶ್ ತಾಯಿ ಬಿಗ್‌ಬಾಸ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ' ಎಂದು ಹೇಳಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ.
ಅಡುಗೆ ಕಾರ್ಯಕ್ರಮದಲ್ಲಿ ಪುಷ್ಪಾ ಅವರು ಭಾಗವಹಿಸಿದ್ದಾಗ ಆ ಕಾರ್ಯಕ್ರಮವು ಹಲವರ ಗಮನ ಸೆಳೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಸಹ ಅಡುಗೆ ಕಾರ್ಯಕ್ರಮದ ವಿಡಿಯೋಗಳು ಹರಿದಾಡಿದ್ದವು. ಆ ಕಾರ್ಯಕ್ರಮದಲ್ಲಿ ಯಶ್, ರಾಧಿಕಾ ಅವರುಗಳು ಮೆಚ್ಚಿನ ಅಡುಗೆಯನ್ನು ಪುಷ್ಪಾ ಮಾಡಿದ್ದರು.
ಯಶ್ ಅಭಿಮಾನಿಗಳ ಫ್ಯಾನ್ ಪೇಜ್‌ಗಳು, ಯಶ್ ತಾಯಿ ಬಿಗ್‌ಬಾಸ್ ಗೆ ಹೋಗುತ್ತಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿವೆ. ವದಂತಿಗಳನ್ನು ನಂಬಬೇಡಿ ಎಂದು ಮನವಿ ಮಾಡಿವೆ.
ಸುದೀಪ್ ನಡೆಸಿಕೊಡುವ ಬಿಗ್‌ಬಾಸ್ 8 ರಿಯಾಲಿಟಿ ಶೋ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಬಿಗ್‌ಬಾಸ್ ಪ್ರೋಮೊ ಈಗಾಗಲೇ ಬಡುಗಡೆ ಆಗಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಶೋ ಪ್ರಸಾರವಾಗುವ ನಿರೀಕ್ಷೆ ಇದೆ.