ಪಿಎ ಪ್ರೊಡಕ್ಷನ್ಸ್ ಹೊಸ ಸಾಹಸ; ತೆಲುಗು ಚಿತ್ರ ತೆರೆಗೆ ತರ್ತಿದ್ದಾರೆ ನಿರ್ಮಾಪಕಿ ಪುಷ್ಪಾ

ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ತಮ್ಮ ಪಿಎ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ 'ಕೊತ್ತಲವಾಡಿ' ಸಿನಿಮಾ ನಿರ್ಮಿಸಿ ತೆರೆಗೆ ತಂದಿದ್ದರು. ಸಿನಿಮಾ ಗೆಲ್ಲದೇ ಇದ್ದರೂ ಸಂಸ್ಥೆ ಭರವಸೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ದೊಡ್ಡ ದೊಡ್ಡ ಚಿತ್ರ ನಿರ್ಮಾಣಕ್ಕೆ ಸಂಸ್ಥೆ ಮುಂದಾಗಿದೆ.

ಮಾನ್‌ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈಗಾಗಲೇ ಯಶ್ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. 'ರಾಮಾಯಣ' ಚಿತ್ರಕ್ಕೂ ಹಣ ಹೂಡುತ್ತಿದ್ದಾರೆ. ಮತ್ತೊಂದು ಕಡೆ ಪಿಎ ಪ್ರೊಡಕ್ಷನ್ಸ್ ಅಡಿಯಲ್ಲಿ ಅವರ ತಾಯಿ ಚಿತ್ರ ನಿರ್ಮಾಣ ಆರಂಭಿಸಿದ್ದಾರೆ. 'ಕೊತ್ತಲವಾಡಿ' ಬಳಿಕ ಶೀಘ್ರದಲ್ಲೇ ಮತ್ತೊಂದು ಚಿತ್ರಕ್ಕೆ ತಯಾರಿ ನಡೀತಿದೆ. ಶರಣ್ ಹೀರೊ ಆಗಿ ನಟಿಸಲಿದ್ದಾರೆ. ಇದೆಲ್ಲದರ ನಡುವೆ ಸಂಸ್ಥೆ ಮತ್ತೊಂದು ಸಾಹಸಕ್ಕೆ ಮುಂದಾಗಿದೆ.

Yash s Mother Pushpa to Distribute Anushka Shetty s Ghaati in Karnataka Through PA Productions

ತೆಲುಗಿನ 'ಘಾಟಿ' ಚಿತ್ರವನ್ನು ತಮ್ಮ ಬ್ಯಾನರ್‌ನಲ್ಲಿ ವಿತರಣೆ ಮಾಡಲು ಪುಷ್ಪಾ ಮುಂದಾಗಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಬೇಕಿದೆ. ಅನುಷ್ಕಾ ಶೆಟ್ಟಿ ನಟನೆಯ 'ಘಾಟಿ' ಸಿನಿಮಾ ಬಹಳ ನಿರೀಕ್ಷೆ ಹುಟ್ಟಾಕ್ಕಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಕನ್ನಡಕ್ಕೂ ಡಬ್ ಆಗಿ ತೆರೆಗೆ ಬರಲಿದೆ. ಕ್ರಿಶ್ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಚಿತ್ರ ಸೆಪ್ಟೆಂಬರ್ 5ಕ್ಕೆ ತೆರೆಗೆ ಬರಲಿದೆ.

ತಮ್ಮ 'ಕೊತ್ತಲವಾಡಿ' ಚಿತ್ರಕ್ಕೆ ಸರಿಯಾಗಿ ಥಿಯೇಟರ್ ಕೊಡದೇ ಸಮಸ್ಯೆ ಮಾಡಿದ್ದರು ಎಂದು ಪುಷ್ಪಾ ಸಂದರ್ಶನವೊಂದರಲ್ಲಿ ಹೇಳಿದ್ದರು. ಕಾರ್ತಿಕ್ ನಮ್ಮ ಚಿತ್ರಕ್ಕೆ ಥಿಯೇಟರ್ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಕೆಲವರು ಹೀಗೆ ಸಿನಿಮಾ ನಿರ್ಮಾಪಕರಿಗೆ ತೊಂದರೆ ಕೊಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಮಾಡ್ತೀನಿ ಎಂದು ನಿರ್ಮಾಪಕಿ ಪುಷ್ಪಾ ಹೇಳಿದ್ದಾರೆ. ಇದೀಗ 'ಘಾಟಿ' ಚಿತ್ರದ ಮೂಲಕ ವಿತರಕಿಯಾಗುತ್ತಿದ್ದಾರೆ.

Yash s Mother Pushpa to Distribute Anushka Shetty s Ghaati in Karnataka Through PA Productions

ಕೆಲವೇ ವಿತರಕರು ಕರ್ನಾಟಕದಲ್ಲಿರುವ ಚಿತ್ರಮಂದಿರಗಳ ಮೇಲೆ ಹಿಡಿತ ಹೊಂದಿದ್ದಾರೆ. ಯಾರೇ ಸಿನಿಮಾ ಮಾಡಿ ಬಿಡುಗಡೆ ಮಾಡಬೇಕು ಅಂದರೂ ಇವರ ಅನುಮತಿ ಬೇಕು, ಒಪ್ಪದಿದ್ದರೆ ಅಂತ ಸಿನಿಮಾಗಳು ಬಿಡುಗಡೆ ಆಗಲು ಸಮಸ್ಯೆ ಎದುರಾಗುತ್ತದೆ ಎನ್ನುವ ಆರೋಪಗಳು ಕೇಳಿಬರುತ್ತಿರುತ್ತದೆ. ಹಾಗಾಗಿ ಸಿನಿಮಾ ವಿತರಣೆ ವಿಭಾಗದಲ್ಲಿ ನಿರ್ಮಾಪಕ ಪುಷ್ಪಾ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ಸಿನಿಮಾ ತುಳಿಯಲು ಯತ್ನಿಸಿದವರಿಗೆ ತಿರುಗೇಟು ನೀಡಲು ಮುಂದಾಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗ್ತಿದೆ.

ಮೊದಲಿನಿಂದಲೂ ಪರಭಾಷಾ ಚಿತ್ರಗಳು ಕರ್ನಾಟಕದಲ್ಲಿ ದೊಡ್ಡಮಟ್ಟದಲ್ಲಿ ಬಿಡುಗಡೆ ಆಗುತ್ತವೆ. ಕನ್ನಡ ಚಿತ್ರ ನಿರ್ಮಾಣ ಸಂಸ್ಥೆಗಳೇ ಅಂತಹ ಸಿನಿಮಾಗಳನ್ನು ವಿತರಣೆ ಮಾಡಲು ಮುಗಿಬೀಳುತ್ತವೆ. ಹೊಂಬಾಳೆ ಫಿಲ್ಮ್ಸ್, ಕೆವಿಎನ್ ಪ್ರೊಡಕ್ಷನ್ಸ್, ಜಯಣ್ಣ ಫಿಲ್ಮ್ಸ್, ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ಸೇರಿ ದೊಡ್ಡ ಸಂಸ್ಥೆಗಳೇ ಸಿನಿಮಾಗಳನ್ನು ವಿತರಣೆ ಸಹ ಮಾಡುತ್ತಿವೆ. ಇದಿಘ ಪಿಎ ಪ್ರೊಡಕ್ಷನ್ಸ್ ಮೂಲಕ ಯಶ್ ತಾಯಿ ಪುಷ್ಪಾ ಕೂಡ ಚಿತ್ರ ವಿತರಣೆಗೆ ಮನಸ್ಸು ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ.

'ಘಾಟಿ' ಚಿತ್ರದಲ್ಲಿ ಬಹಳ ಪವರ್‌ಫುಲ್ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ವಿಕ್ರಂ ಪ್ರಭು, ಚೈತನ್ಯಾ ರಾವ್, ಜಗಪತಿ ಬಾಬು, ರವೀಂದ್ರ ವಿಜಯ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಫಸ್ಟ್ ಫ್ರೇಮ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಚಿತ್ರ ನಿರ್ಮಿಸಿದೆ. ಈಗಾಗಲೇ ಟೀಸರ್, ಸಾಂಗ್ಸ್ ರಿಲೀಸ್ ಆಗಿ ಗಮನ ಸೆಳೆದಿದೆ. ಪಿಎ ಪ್ರೊಡಕ್ಷನ್ಸ್ ಮೂಲಕ ಶ್ರೀಧರ್ ಕೃಪಾ ಕಂಬೈನ್ಸ್ ಸಂಸ್ಥೆ ಕರ್ನಾಟಕದಾದ್ಯಂತ ಚಿತ್ರವನ್ನು ತೆರೆಗೆ ತರಲಿದೆ.

More from Filmibeat

English summary
Rocking Star Yash’s mother Pushpa Arun Kumar, who earlier produced Kotthalavadi, is now turning distributor with Anushka Shetty’s action thriller Ghaati.
Read more about: anushka shetty yash tollywood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X