ಯಶ್ 'ಟಾಕ್ಸಿಕ್' ಮೇಕಿಂಗ್ ವೀಡಿಯೋ ಲೀಕ್; ರಾಕಿಂಗ್ ಸ್ಟಾರ್ ಸಿಕ್ಸ್‌ಪ್ಯಾಕ್ ನೋಡಿ ಫ್ಯಾನ್ಸ್ ಫಿದಾ

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಮುಂದಿನ ವರ್ಷ ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರ್ತಿದೆ. ಈ ಬಾರಿ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಾರ್ಕೆಟ್ ಮೇಲೆ ರಾಕಿಂಗ್ ಸ್ಟಾರ್ ಕಣ್ಣಿಟ್ಟಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ.

'ಟಾಕ್ಸಿಕ್' ಚಿತ್ರದ ಕೊನೆ ಹಂತದ ಚಿತ್ರೀಕರಣ ಸಾಗುತ್ತಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಮುಂದಾಗಿದೆ. ಆದರೆ ಯಾವುದೇ ಸುಳಿವು ಬಿಟ್ಟುಕೊಡುತ್ತಿಲ್ಲ. ಚಿತ್ರದ ಕಲಾವಿದರು, ತಂತ್ರಜ್ಞರು ಎಲ್ಲರ ಬಗ್ಗೆಯೂ ಗುಟ್ಟು ಕಾಯ್ದುಕೊಂಡಿದ್ದಾರೆ. ಚಿತ್ರದ ಮೇಕಿಂಗ್ ಫೋಟೊ, ವೀಡಿಯೋ ಹೊರ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೂ ತಂಡದ ಕಣ್ತಪ್ಪಿಸಿ ವೀಡಿಯೋವೊಂದು ವೈರಲ್ ಆಗ್ತಿದೆ.

Yash s Toxic Making Video Leaked Online Fans Go Wild Over Viral Shirtless Clip Ahead of March 2026 Release

ನಟ ಯಶ್ ಶರ್ಟ್‌ಲೆಸ್ ಆಗಿ ಮನೆಯ ಬಾಲ್ಕನಿಯಲ್ಲಿ ಸಿಗರೇಟ್ ಸೇದುತ್ತಾ ನಿಂತಿರುವ ಸಣ್ಣ ವೀಡಿಯೋ ಝಲಕ್ ರಿವೀಲ್ ಆಗಿದೆ. ದೂರದಿಂದ ಅದನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿರುವುದು ಗೊತ್ತಾಗ್ತಿದೆ. ಸಿಕ್ಸ್‌ಪ್ಯಾಕ್‌ನಲ್ಲಿ ರಾಕಿಂಗ್ ಸ್ಟಾರ್ ಖದರ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ಯಶ್ ತಮ್ಮ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ 'ಟಾಕ್ಸಿಕ್' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ವಿದೇಶದ ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ. ದೇಶ ವಿದೇಶದ ಭಾಷೆಗಳಿಗೆ ಸಿನಿಮಾ ಡಬ್ ಮಾಡಿ ಬಿಡುಗಡೆ ಮಾಡುವ ಪ್ರಯತ್ನ ನಡೀತಿದೆ. ನಯನತಾರಾ, ಕಿಯಾರಾ ಅದ್ವಾನಿ, ರುಕ್ಮಿಣಿ ವಸಂತ್, ಹುಮಾ ಖುರೇಶಿ ಸೇರಿದಂತೆ ಘಟಾನುಘಟಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರಕ್ಕೆ ಗೀತು ಮೋಹನ್ ದಾಸ್ ಪತಿ ರಾಜೀವ್ ರವಿ ಛಾಯಾಗ್ರಾಹಕರಾಗಿದ್ದಾರೆ. ಕಾಲಿವುಡ್ ರಾಕ್‌ಸ್ಟರ್ ಅನಿರುದ್ಧ್ ರವಿಚಂದರ್ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ. 70-80ರ ದಶಕದ ಗ್ಯಾಂಗ್‌ಸ್ಟರ್ ಕಹಾನಿಯನ್ನು ಚಿತ್ರದಲ್ಲಿ ಹೇಳಲಾಗ್ತಿದೆ. ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿ ಆವರಣದಲ್ಲಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿತ್ತು. ಅದೇ ಸೆಟ್‌ನಲ್ಲಿ ಸೆರೆ ಹಿಡಿದಿರುವ ದೃಶ್ಯ ಈಗ ಲೀಕ್ ಆಗಿರುವಂತೆ ಕಾಣ್ತಿದೆ.

ಡ್ರಗ್ಸ್ ಮಾಫಿಯಾ ಸುತ್ತಾ 'ಟಾಕ್ಸಿಕ್' ಸಿನಿಮಾ ಕಥೆ ಸಾಗಲಿದ್ದು ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಸಣ್ಣ ಟೀಸರ್ ಬಂದಿದ್ದು ಬಿಟ್ಟರೆ ಚಿತ್ರದ ಯಾವುದೇ ಪೋಸ್ಟರ್ ಅಥವಾ ಗ್ಲಿಂಪ್ಸ್ ಹೊರಬಂದಿಲ್ಲ. ಸಿನಿಮಾ ಬಿಡುಗಡೆಗೆ ಇನ್ನು 5 ತಿಂಗಳು ಬಾಕಿಯಿದೆ. ಶೀಘ್ರದಲ್ಲೇ ಸಿನಿಮಾ ಪ್ರಚಾರ ಆರಂಭಿಸುವ ಸಾಧ್ಯತೆಯಿದೆ.

'KGF- 2' ಸಿನಿಮಾ ಬಂದೋಗಿ 3 ವರ್ಷಗಳ ಕಳೆದರು ಯಶ್ ಹೊಸ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ಕಾದು ಕಾದು ಸುಸ್ತಾಗಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಈ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಚಿತ್ರೀಕರಣ ತಡವಾಗಿ ಹೆಚ್ಚು ಕಮ್ಮಿ 1 ವರ್ಷ ತಡವಾಗಿ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಕನ್ನಡ ಸಿನಿರಸಿಕರು ಮಾತ್ರವಲ್ಲ ಪರಭಾಷಾ ಪ್ರೇಕ್ಷಕರು 'ಟಾಕ್ಸಿಕ್' ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಸಿನಿಮಾ 1000 ಕೋಟಿ ರೂ. ಕಲೆಕ್ಷನ್ ಮಾಡುವುದು ಗ್ಯಾರಂಟಿ ಎಂದು ಕೆಲವರು ಭವಿಷ್ಯ ನುಡಿಯುತ್ತಿದ್ದಾರೆ. ಸಿನಿಮಾ ಕೂಡ ಅಷ್ಟರಮಟ್ಟಿಗೆ ನಿರೀಕ್ಷೆ ಹುಟ್ಟಾಕ್ಕಿದೆ.

More from Filmibeat

English summary
Massive Buzz for Yash’s ‘Toxic’ as Leaked Making Video Trends Across Social Media
Read more about: yash toxic kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X