'ಟಾಕ್ಸಿಕ್' ಬಗ್ಗೆ ಸುಳ್ಳು ಸುದ್ದಿ; ಯಶ್ ಸಿನಿಮಾ ಟಾರ್ಗೆಟ್ ಮಾಡ್ತಿರೋದ್ಯಾರು?

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಚಿತ್ರದ ಕೆಲಸಗಳು ಭರದಿಂದ ಸಾಗ್ತಿದೆ. ಬರ್ತ್‌ಡೇ ಟೀಸರ್ ಬಿಟ್ಟರೆ ಚಿತ್ರದ ಬಗ್ಗೆ ಯಾವುದೇ ಅಪ್‌ಡೇಟ್ ಸಿಗಲಿಲ್ಲ. ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಸಿನಿಮಾ ಮುಂದಿನ ವರ್ಷ ಮಾರ್ಚ್ 19ಕ್ಕೆ ಬಿಡುಗಡೆ ಆಗುತ್ತದೆ ಎಂದು ಕೊನೆಯದಾಗಿ ಚಿತ್ರದ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿತ್ತು.

'ಟಾಕ್ಸಿಕ್' ಜೊತೆಗೆ 'ರಾಮಾಯಣ' ಚಿತ್ರದಲ್ಲಿ ಕೂಡ ಯಶ್ ನಟಿಸುತ್ತಿದ್ದಾರೆ. ಎರಡೂ ಸಿನಿಮಾಗಳ ನಿರ್ಮಾಣದಲ್ಲಿ ಕೂಡ ಕೈ ಜೋಡಿಸಿದ್ದಾರೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಎರಡೂ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರಲಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಗ್ಯಾಂಗ್‌ಸ್ಟರ್ ಸಿನಿಮಾ 'ಟಾಕ್ಸಿಕ್' ಇನ್ನಿಲ್ಲದ ನಿರೀಕ್ಷೆ ಹುಟ್ಟಾಕ್ಕಿದೆ.

Yash s Toxic to Release on March 19 2026 Makers Deny Postponement Rumors

ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಶಿ, ಕಿಯಾರಾ ಅದ್ವಾನಿ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಕೆವಿಎನ್ ಸಂಸ್ಥೆ ಜೊತೆಗೆ ಯಶ್ ಒಡೆತನದ ಮಾನ್‌ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್ ಸಂಸ್ಥೆ ಚಿತ್ರ ನಿರ್ಮಣಕ್ಕೆ ಕೈಜೋಡಿಸಿದೆ. ಸಿನಿಮಾ ಬಿಡುಗಡೆಗೆ 5 ತಿಂಗಳು ಬಾಕಿಯಿದೆ. ಇಂತಹ ಸಮಯದಲ್ಲಿ ಸಿನಿಮಾ ರಿಲೀಸ್ ಪೋಸ್ಟ್‌ಪೋನ್ ಆಗ್ತಿದೆ ಎನ್ನುವ ವದಂತಿ ಹರಿದಾಡುತ್ತಿದೆ. ಇದು ಸಹಜವಾಗಿಯೇ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಯಶ್ ನಟಿಸಿದ್ದ 'KGF'-2 ಸಿನಿಮಾ ತೆರೆಕಂಡು 3 ವರ್ಷಗಳ ಕಳೆದಿದೆ. ಆ ಬಳಿಯ ಯಾವುದೇ ಸಿನಿಮಾ ಬರಲಿಲ್ಲ. ಈ ವರ್ಷ ಏಪ್ರಿಲ್ 10ಕ್ಕೆ ಬರಬೇಕಿದ್ದ ಸಿನಿಮಾ ಕಾರಣಾಂತರಗಳಿಂದ ಹೆಚ್ಚು ಕಮ್ಮಿ 1 ವರ್ಷ ತಡವಾಗಿ ತೆರೆಗೆ ಬರುವಂತಾಗಿದೆ. ಮತ್ತೆ ಪೋಸ್ಟ್‌ಪೋನ್ ಅಂದರೆ ಸಹಜವಾಗಿಯೇ ಬೇಸರ ಮೂಡುತ್ತದೆ. ಆದರೆ ಇದೆಲ್ಲ ಸುಳ್ಳು ವದಂತಿ ಎನ್ನುವುದು ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಸಿನಿಮಾ ರಿಲಿಸ್ ಡೇಟ್ ಮುಂದಕ್ಕೆ ಹೋಗಲಿದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ಅಭಿಮಾನಿಗಳೇ ತಿರುಗೇಟು ಕೊಡುತ್ತಿದ್ದಾರೆ. ಸುಳ್ಳು ವದಂತಿ ಯಾರು ಹರಡಬೇಡಿ, ಇಂತಹ ವದಂತಿ ನಂಬಬೇಡಿ ಎಂದು ಮನವಿ ಮಾಡುತ್ತಿದ್ದಾರೆ.

Yash s Toxic to Release on March 19 2026 Makers Deny Postponement Rumors

ಕೆಲ ದಿನಗಳ ಹಿಂದೆ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್ ದಾಸ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ಇದೇ ರೀತಿ ಊಹಾಪೋಹ ಹರಡಿದ್ದರು. ಅದೆಲ್ಲಾ ಸುಳ್ಳು ಎನ್ನುವುದು ಬಳಿಕ ಗೊತ್ತಾಗಿತ್ತು. ಇದೀಗ ಸಿನಿಮಾ ರೀ- ಶೂಟ್ ಮಾಡುತ್ತಿದ್ದಾರೆ, ಯಶ್‌ಗೆ ಕೆಲ ಸನ್ನಿವೇಶಗಳು ಇಷ್ಟವಾಗಿಲ್ಲ, ಹಾಗಾಗಿ ಮತ್ತೆ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಿನಿಮಾ ರಿಲೀಸ್ ಡೇಟ್ ಮುಂದೆಕ್ಕೆ ಹೋಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಂತೆಕಂತೆ ಸುದ್ದಿ ಪೋಸ್ಟ್ ಮಾಡುತ್ತಿದ್ದಾರೆ. ಈ ಬಗ್ಗೆ ಕೆವಿಎನ್ ಸಂಸ್ಥೆ ಸುಪ್ರೀತ್ ಫಿಲ್ಮಿಬೀಟ್ ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

"ಅಧಿಕೃತವಾಗಿ ಚಿತ್ರತಂಡ ಹೇಳುವವರೆಗೂ ಯಾವುದೇ ಸುದ್ದಿಯನ್ನು ನಂಬಬೇಡಿ, ಮಾರ್ಚ್ 19ಕ್ಕೆ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಆಗಲಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದು ಸುಪ್ರೀತ್ ಸ್ಪಷ್ಟನೆ ನೀಡಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಬಹಳ ಅದ್ಧೂರಿಯಾಗಿ ಈ ಸಿನಿಮಾ ತಯಾರಾಗುತ್ತಿದೆ. ದೇಶ ವಿದೇಶದ ಕಲಾವಿದರು, ತಂತ್ರಜ್ಞರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

ಚಿತ್ರದ ಕಥೆ, ಕಲಾವಿದರ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ. ಡ್ರಗ್ಸ್ ಮಾಫಿಯಾ ಹಿನ್ನೆಲೆಯ ಕಥೆ ಚಿತ್ರದಲ್ಲಿದೆ ಎಂದು ಹೇಳಲಾಗ್ತಿದೆ. ಇನ್ನು 'ಪೆದ್ದಿ' ಸೇರಿದಂತೆ ಸಾಕಷ್ಟು ಸಿನಿಮಾಗಳು 'ಟಾಕ್ಸಿಕ್' ಎದುರು ಬಾಕ್ಸಾಫೀಸ್ ಅಖಾಡಕ್ಕೆ ಇಳಿಯುತ್ತಿವೆ. ಏಕಕಾಲಕ್ಕೆ ದೇಶ ವಿದೇಶಗಳಲ್ಲಿ ದೊಡ್ಡದಾಗಿ ಸಿನಿಮಾ ರಿಲೀಸ್ ಪ್ಲ್ಯಾನ್ ನಡೀತಿದ್ದು 1000 ಕೋಟಿ ರೂ. ಕಲೆಕ್ಷನ್ ಲೆಕ್ಕಾಚಾರ ಶುರುವಾಗಿದೆ.

More from Filmibeat

Read more about: yash toxic kvn productions
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X