For Quick Alerts
  ALLOW NOTIFICATIONS  
  For Daily Alerts

  3 ಸಾವಿರ ಸಿನಿ ಕುಟುಂಬಗಳಿಗೆ ತಲಾ 5 ಸಾವಿರ ನೆರವು ಘೋಷಿಸಿದ ಯಶ್

  |

  ಕೊರೊನಾ ವೈರಸ್‌ ಕಾರಣದಿಂದ ಸಿನಿಮಾ ಇಂಡಸ್ಟ್ರಿ ಸಂಕಷ್ಟಕ್ಕೆ ಸಿಲುಕಿದೆ. ಶೂಟಿಂಗ್ ಇಲ್ಲದೇ ಸಾವಿರಾರು ಕಾರ್ಮಿಕರು, ತಂತ್ರಜ್ಞರು ಮನೆಯಲ್ಲಿ ಕುಳಿತಿದ್ದಾರೆ. ಇಂತಹ ಕುಟುಂಬಗಳಿಗೆ ಹಲವರು ನೆರವು ನೀಡಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್ ಸಹಾಯ ಮಾಡಲು ನಿರ್ಧರಿಸಿದ್ದಾರೆ.

  ತನ್ನವರಿಗೆ 'ಆಸರೆ'ಯಾದ ಕ್ರೇಜಿಸ್ಟಾರ್ ಪುತ್ರ: ಮುಗಿಲ್‌ಪೇಟೆ ಸದಸ್ಯರಿಗೆ ತಲಾ 5 ಸಾವಿರತನ್ನವರಿಗೆ 'ಆಸರೆ'ಯಾದ ಕ್ರೇಜಿಸ್ಟಾರ್ ಪುತ್ರ: ಮುಗಿಲ್‌ಪೇಟೆ ಸದಸ್ಯರಿಗೆ ತಲಾ 5 ಸಾವಿರ

  ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಯಶ್ ''ಸಂಕಷ್ಟದಲ್ಲಿರುವ 3 ಸಾವಿರಕ್ಕೂ ಹೆಚ್ಚು ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಕುಟುಂಬಗಳಿಗೆ ನಾನು ಸಂಪಾದನೆ ಮಾಡಿರುವ ಸ್ವಂತ ಹಣದಿಂದ ತಲಾ 5 ಸಾವಿರ ರೂಪಾಯಿ ನೀಡುತ್ತಿರುವುದಾಗಿ'' ತಿಳಿಸಿದ್ದಾರೆ.

  ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದ ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ.

  ಹಾಗಾಗಿ, ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ ಎಂದು ಯಶ್ ಟ್ವೀಟ್ ಮಾಡಿದ್ದಾರೆ.

  ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ. ನಮ್ಮ ಕಲಾವಿದರು, ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ.

  Chiru ಜೊತೆ ತೆಗೆಸಿಕೊಂಡ ಕೊನೆಯ ಫೋಟೋ ಇದು | Pannaga Bharana | Filmibeat Kannada

  ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ...ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ ಎಂದು ಯಶ್ ಮನವಿ ಮಾಡಿದ್ದಾರೆ.

  English summary
  Covid-19: Rocking star Yash to deposit Rs 5000 to each kannada film industry workers bank account.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X