ಈ ವರ್ಷವೇ ಯಶ್ 'ಟಾಕ್ಸಿಕ್' ರಿಲೀಸ್ ಕನ್ಫರ್ಮ್; ಹೊಸ ಡೇಟ್ ಘೋಷಿಸಿದ ಟೀಂ

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಯಾವಾಗ ರಿಲೀಸ್ ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ವರ್ಷ ಸಿನಿಮಾ ತೆರೆಗೆ ಬರೋದೆ ಇಲ್ಲ ಎಂದುಕೊಂಡಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ದಿನಾಂಕ ಪದೇ ಪದೆ ಬದಲಾಗಿ ಅಭಿಮಾನಿಗಳು ಬೇಸರಗೊಂಡಿದ್ದರು. ಕಳೆದ ವರ್ಷ ಏಪ್ರಿಲ್ 10ರಂದು ಬರಬೇಕಿದ್ದ ಸಿನಿಮಾ ಈ ವರ್ಷ ಜೂನ್ ಬಂದರೂ ತೆರೆಗೆ ಬರಲಿದೆ. 3 ಬಾರಿ ರಿಲೀಸ್ ಡೇಟ್ ಬದಲಿಸಿದ್ದರು. ಅಂತಿಮವಾಗಿ ಆಗಸ್ಟ್ 26ಕ್ಕೆ ಸಿನಿಮಾ ತೆರೆಗಪ್ಪಳಿಸುತ್ತದೆ ಎನ್ನುವ ಗುಡ್ ನ್ಯೂಸ್ ಸಿಕ್ಕಿದೆ. ಈ ಸುದ್ದಿ ಕೇಳಿ ರಾಕಿಂಗ್ ಫ್ಯಾನ್ಸ್ ಖುಷಿಯಾಗಿದ್ದಾರೆ.

Yash s Toxic Locks New Release Date Set for Grand Theatrical Release This Year

ವಿಶ್ವ ಅಪ್ಪಂದಿರ ದಿನದ ವಿಶೇಷವಾಗಿ 'ಟಾಕ್ಸಿಕ್' ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡಿದ್ದಾರೆ. ರಾಯ ಹಾಗೂ ಟಿಕೆಟ್ ಆಗಿ ತಂದೆ ಮಗನ ಹೊಸ ಪೋಸ್ಟರ್ ಸಮೇತ ಅಪ್‌ಡೇಟ್ ಸಿಕ್ಕಿದೆ. ಸಾಮಾನ್ಯವಾಗಿ ಶುಕ್ರವಾರ ಸಿನಿಮಾಗಳು ಬಿಡುಗಡೆ ಆಗುತ್ತವೆ. ಆದರೆ 'ಟಾಕ್ಸಿಕ್' ಚಿತ್ರವನ್ನು ಎರಡು ದಿನ ಮುನ್ನ ಬುಧವಾರ ತೆರೆಗೆ ತರಲಾಗ್ತಿದೆ. ಪ್ಯಾನ್ ಇಂಡಿಯಾ ಅಲ್ಲ ಗ್ಲೋಬಲ್ ಮಟ್ಟದಲ್ಲಿ ಏಕಕಾಲಕ್ಕೆ ಸಿನಿಮಾ ರಿಲೀಸ್ ಎಂದು ಪದೇ ಪದೆ ಚಿತ್ರತಂಡ ಹೇಳ್ತಿದೆ. ಓಣಂ, ಈದ್, ವರಮಹಾಲಕ್ಷ್ಮಿ ಮತ್ತು ರಕ್ಷಾಬಂಧನ ಹಬ್ಬಗಳ ಸಾಲು ಸಾಲು ರಜೆಗಳ ಲಾಭ ಪಡೆಯಲು ಬುಧವಾರವೇ ಚಿತ್ರವನ್ನು ತೆರೆಗೆ ತರ್ತಿದ್ದಾರೆ.

ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ತಮ್ಮ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ 'ಟಾಕ್ಸಿಕ್' ಸಿನಿಮಾ ನಿರ್ಮಿಸಿ ನಟಿಸಿದ್ದಾರೆ. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಜೂನ್ 4ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ವಿದೇಶಗಳಲ್ಲಿ ಏಕಕಾಲಕ್ಕೆ ಸಿನಿಮಾ ರಿಲೀಸ್ ಮಾಡಬೇಕು ಎನ್ನುವ ಕಾರಣಕ್ಕೆ ಎರಡೂವರೆ ತಿಂಗಳ ಸಮಯಾವಕಾಶ ತೆಗೆದುಕೊಂಡಿದ್ದರು. ಹಾಲಿವುಡ್ ತಂತ್ರಜ್ಞರು ಕೂಡ ಚಿತ್ರಕ್ಕಾಗಿ ಕೆಲಸ ಮಾಡಿದ್ದಾರೆ.

ಯಶ್ ಜೊತೆ ನಯನತಾರಾ, ಹುಮಾ ಖುರೇಶಿ, ಕಿಯಾರಾ ಅದ್ವಾನಿ, ರುಕ್ಮಿಣಿ ವಸಂತ್ ನಟಿಸಿದ್ದಾರೆ. ಸಿನಿಮಾ ಬಜೆಟ್ 500 ಕೋಟಿ ರೂ. ದಾಟಿದೆ ಎನ್ನಲಾಗ್ತಿದೆ. ಇದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಆಗಿದ್ದು ತಂದೆ ಹಾಗೂ ಮಗನಾಗಿ ದ್ವಿಪಾತ್ರದಲ್ಲಿ ಯಶ್ ನಟಿಸಿರುವುದು ವಿಶೇಷ. ಐತಿಹಾಸಿಕ ಹಿನ್ನೆಲೆಯೊಂದಿಗೆ ಒಂದು ಕಾಲ್ಪನಿಕ ಕಥೆಯನ್ನು ಚಿತ್ರದಲ್ಲಿ ಕಟ್ಟಿಕೊಟ್ಟಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಈ ಸಿನಿಮಾ ಮೂಲಕ ಕನ್ನಡಕ್ಕೆ ಬಂದಿದ್ದಾರೆ.

ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಏಕಕಾಲಕ್ಕೆ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಇನ್ನುಳಿದಂತೆ ದೇಶ ವಿದೇಶದ ಹಲವು ಭಾಷೆಗಳಿಗೆ ಡಬ್ ಮಾಡಿ ರಿಲೀಸ್ ಮಾಡುವ ಪ್ರಯತ್ನ ನಡೀತಿದೆ. ರಾಜೀವ್ ರವಿ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ಚಿತ್ರದಲ್ಲಿದೆ. ಈಗಾಗಲೇ 'ತಬಾಹಿ' ಸಾಂಗ್ ರಿಲೀಸ್ ಆಗಿ ಗಮನ ಸೆಳೆದಿದೆ. ಇನ್ನು 4 ಹಾಡುಗಳು ಚಿತ್ರದಲ್ಲಿವೆ.

ಇತ್ತೀಚೆಗೆ ಸಿನಿಮಾಕಾನ್ ಸಮಾವೇಶದಲ್ಲಿ ನಟ ಯಶ್ ಭಾಗಿ ಆಗಿದ್ದರು. ಈ ವೇಳೆ 'ರಾಮಾಯಣ' ಹಾಗೂ 'ಟಾಕ್ಸಿಕ್' ಚಿತ್ರಗಳ ಬಗ್ಗೆ ಹಾಲಿವುಡ್ ವೇದಿಕೆಗಳಲ್ಲಿ ಮಾತನಾಡಿದ್ದರು. ಸಿನಿಮಾ ಕಥೆ, ಪಾತ್ರವರ್ಗ ಎಲ್ಲದರ ಬಗ್ಗೆ ಮಾಹಿತಿ ನೀಡಿದ್ದರು. ಹಾಲಿವುಡ್ ಮಾಧ್ಯಮಗಳ ಸಂದರ್ಶನದಲ್ಲಿ ರಾಕಿಂಗ್ ಸ್ಟಾರ್ ಮಿಂಚಿದ್ದರು. 'ಕೆಜಿಎಫ್' ಸರಣಿ ಮೂಲಕ ಪ್ಯಾನ್ ಇಂಡಿಯಾ ಬಾಕ್ಸಾಫೀಸ್ ಕಬ್ಜಾ ಮಾಡಿದ್ದ ಯಶ್ ಈಗ 'ಟಾಕ್ಸಿಕ್' ಮೂಲಕ ಹಾಲಿವುಡ್ ಬಾಕ್ಸಾಫೀಸ್ ಮೇಲೆ ಕಣ್ಣಿಟ್ಟಿದ್ದಾರೆ. ಸಾವಿರಾರು ಸ್ಕ್ರೀನ್‌ಗಳಲ್ಲಿ ಆಗಸ್ಟ್ 26ರಂದು ಸಿನಿಮಾ ಬಿಡುಗಡೆ ಆಗಲಿದೆ.

Read more about: yash toxic kvn productions
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X