'ಡೆವಿಲ್' ಸಂಭ್ರಮದ ನಡುವೆ ಸೂತಕ; ದರ್ಶನ್ ಅಭಿಮಾನಿ ಅಪಘಾತದಲ್ಲಿ ದುರ್ಮರಣ
ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ದೊಡ್ಡಮಟ್ಟದಲ್ಲಿ ಸಂಭ್ರಮಾಚರಣೆ ಮಾಡಿ ಅಭಿಮಾನಿಗಳು ಸಿನಿಮಾ ಸ್ವಾಗತಿಸಿದ್ದಾರೆ. ಶಿವಮೊಗ್ಗದಲ್ಲಿ 'ಡೆವಿಲ್' ಸಿನಿಮಾ ಸಂಭ್ರಮಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಯುವಕನೊಬ್ಬ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದೊಂದು ವಾರದಿಂದ 'ಡೆವಿಲ್' ಸಿನಿಮಾ ಸೆಲೆಬ್ರೇಷನ್ ಜೋರಾಗಿದೆ. ಥಿಯೇಟರ್ ಅಂಗಳದಲ್ಲಿ ಕಟೌಟ್, ಬ್ಯಾನರ್ ಕಟ್ಟಿ, ಹೂ ಹಾಕಿ, ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ನಿನ್ನೆ ಸಂಜೆ(ಡಿಸೆಂಬರ್ 10) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿನಾಯಕ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಜೋರಾಗಿತ್ತು. ಬಳಿಕ ಸ್ನೇಹಿತರ ಜೊತೆ ಮನೆಗೆ ಹೊರಟಿದ್ದ ಪುನೀತ್(26) ಎಂಬ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಈ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ರಾಜಹಂಸ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪುನೀತ್ ಸ್ಥಳದಲ್ಲಿ ಜೀವಬಿಟ್ಟಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತದ ಸಂಭವಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿಯಾದ ವೇಗದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪುನೀತ್ ಅಗಲಿಕೆ ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.


Click it and Unblock the Notifications











