For Quick Alerts
  ALLOW NOTIFICATIONS  
  For Daily Alerts

  ಅಣ್ಣಾವ್ರ ಮೊಮ್ಮಗನ ಭರ್ಜರಿ ಎಂಟ್ರಿ: 'ಯುವ ರಣಧೀರ ಕಂಠೀರವ' ಟೀಸರ್

  |

  ರಾಘವೇಂದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವರಾಜ್ ಕುಮಾರ್ ಮೊದಲ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಕೊಂಡಿದೆ. ಅಣ್ಣಾವ್ರ ಮೊಮ್ಮಗನ ಚೊಚ್ಚಲ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಕನ್ನಡ ಪ್ರೇಕ್ಷಕರು ಬಹುಪರಾಕ್ ಹಾಕಿದ್ದಾರೆ.

  5 ನಿಮಿಷಗಳ ಟೀಸರ್ ಇದಾಗಿದ್ದು, ಭರ್ಜರಿ ಡೈಲಾಗ್ ಮತ್ತು ಜಬರ್‌ದಸ್ತ್ ಫೈಟ್ ಹೈಲೈಟ್ ಆಗಿದೆ. ಇದು ಐತಿಹಾಸಿಕ ಕಥಾ ಹಂದರ ಹೊಂದಿರುವ ಚಿತ್ರ ಎಂದು ಹೇಳಲಾಗಿದೆ.

  ಯುವರಾಜ್ ಕುಮಾರ್ ಗೆ ಹುಟ್ಟುಹಬ್ಬದ ಸಂಭ್ರಮ: ತಾತನ ಜನ್ಮದಿನಕ್ಕೆ ನೀಡುತ್ತಿದ್ದಾರೆ ಸಿಹಿ ಸುದ್ದಿಯುವರಾಜ್ ಕುಮಾರ್ ಗೆ ಹುಟ್ಟುಹಬ್ಬದ ಸಂಭ್ರಮ: ತಾತನ ಜನ್ಮದಿನಕ್ಕೆ ನೀಡುತ್ತಿದ್ದಾರೆ ಸಿಹಿ ಸುದ್ದಿ

  ಸದ್ಯಕ್ಕೆ 'ಯುವ-01' ಎಂದು ಹೆಸರಿನಲ್ಲಿ ಸಿನಿಮಾ ಮಾಡಲಾಗುತ್ತಿದ್ದು, ಟೀಸರ್‌ನಲ್ಲಿ 'ಯುವ ರಣಧೀರ ಕಂಠೀರವ' ಎಂದು ಹೆಸರು ಪ್ರಕಟವಾಗಿದೆ.

  ಕನ್ನಡ ರಾಜ್ಯೋತ್ಸವ ಪ್ರಯುಕ್ತ, ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ಕುಮಾರ್ ಸೇರಿದಂತೆ ಕುಟುಂಬ ವರ್ಗ ಭಾಗಿಯಾಗಿತ್ತು.

  SUPERSTAR SURYA Kannada Short Film Teaser | Rakshit | Praveen | Nikhil | Filmibeat Kannada

  ಯುವ ಅವರ ಮೊದಲ ಸಿನಿಮಾಗೆ ಪುನೀತ್ ರುದ್ರನಾಗ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಟೀಸರ್‌ನಲ್ಲೇ ಸದ್ದು ಮಾಡಿದೆ. ಸಂಕೇಶ್ ಛಾಯಾಗ್ರಹಣ, ಚೇತನ್ ಡಿಸೋಜಾ ಸಾಹಸ ನಿರ್ದೇಶನವಿದೆ.

  English summary
  Here is Yuva Rajkumar's First Look Video of His Upcoming Film 'Yuva Ranadheera Kanteerava'.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X