Don't Miss!
- News
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದ ಸಿದ್ದರಾಮಯ್ಯ.! ಆ ಪತ್ರದಲ್ಲಿ ಏನಿದೆ.?
- Sports
IND-W vs SA-W T20 Tri-series Final: ಭಾರತ ವನಿತೆಯರ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ
- Lifestyle
ಮಗುವಿಗೆ ತುಂಬಾ ಜ್ವರ ಇದ್ದಾಗ ಏನು ಮಾಡಬೇಕು?
- Finance
6 ತಿಂಗಳಲ್ಲಿ 2ನೇ ಬಾರಿಗೆ ಉದ್ಯೋಗಿಗಳನ್ನು ವಜಾಗೊಳಿಸಿದ Byju's: ಈ ಬಾರಿ ಎಷ್ಟು ನೌಕರರು?
- Automobiles
ಭಾರತದಲ್ಲಿ ಮಾರುತಿ ಜಿಮ್ನಿ ಎಸ್ಯುವಿಗೆ ಭಾರೀ ಡಿಮ್ಯಾಂಡ್: ಪ್ರತಿಸ್ಪರ್ಧಿಗಳಿಗೆ ಹೆಚ್ಚಿದ ಆತಂಕ
- Technology
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
Veera Simha Reddy OTT : ಬಾಲಯ್ಯ-ದುನಿಯಾ ವಿಜಿ 'ವೀರಸಿಂಹ ರೆಡ್ಡಿ' ಓಟಿಟಿ ಪಾರ್ಟ್ನರ್ ಯಾರು? ಸ್ಟ್ರೀಮಿಂಗ್ ಯಾವಾಗ?
ಟಾಲಿವುಡ್ ನಟಸಿಂಹ ಬಾಲಕೃಷ್ಣ ನಟನೆಯ 'ವೀರಸಿಂಹ ರೆಡ್ಡಿ' ಸಿನಿಮಾ ರಿಲೀಸ್ ಆಗಿ ಧೂಳೆಬ್ಬಿಸಿದೆ. ಬಾಲಯ್ಯ ಆಕ್ಷನ್ ಧಮಾಕ ನೋಡಿ ಅಭಿಮಾನಿಗಳು ಥ್ರಿಲ್ಲಾಗಿದ್ದಾರೆ. ಪಕ್ಕಾ ಆಕ್ಷನ್ ಎಂಟರ್‌ಟೈನರ್ ಸಿನಿಮಾದಲ್ಲಿ ಕನ್ನಡ ನಟ ದುನಿಯಾ ವಿಜಯ್ ವಿಲನ್ ಆಗಿ ಅಬ್ಬರಿಸಿದ್ದಾರೆ. 'ವೀರಸಿಂಹ ರೆಡ್ಡಿ' ಬಾಕ್ಸಾಫೀಸ್ ಕಲೆಕ್ಷನ್ ಜೋರಾಗಿದೆ. ಇದೆಲ್ಲರ ನಡುವೆ ಸಿನಿಮಾ ಓಟಿಟಿ ರಿಲೀಸ್ ಬಗ್ಗೆ ಚರ್ಚೆ ಶುರುವಾಗಿದೆ.
ಇತ್ತೀಚೆಗೆ ಸಿನಿಮಾಗಳು ರಿಲೀಸ್ ಆದ ಕೆಲವೇ ದಿನಗಳಲ್ಲಿ ಓಟಿಟಿಗೆ ಬರೋದು ಕಾಮನ್ ಆಗ್ಬಿಟ್ಟಿದೆ. ದೊಡ್ಡ ದೊಡ್ಡ ಸಿನಿಮಾಗಳು ಕೂಡ ಏಳೆಂಟು ವಾರಗಳಲ್ಲಿ ಸ್ಮಾಲ್ ಸ್ಕ್ರೀನ್‌ಗೆ ಬಂದುಬಿಡುತ್ತದೆ. ಇನ್ನು 'ವೀರಸಿಂಹ ರೆಡ್ಡಿ' ಚಿತ್ರಕ್ಕೂ ಪೈರಸಿ ಕಾಟ ಶುರುವಾಗಿದೆ. ಹಾಗಾಗಿ ಆದಷ್ಟು ಬೇಗ ಸಿನಿಮಾ ಓಟಿಟಿಗೆ ಬರಲಿದೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಮಿಂಚಿದ್ದು, ಗೋಪಿಚಂದ್ ಮಲಿನೇನಿ ಆಕ್ಷನ್ ಕಟ್ ಹೇಳಿದ್ದಾರೆ. ರಾಯಲಸೀಮ ಫ್ಯಾಕ್ಷನಿಸಂ ಹಿನ್ನಲೆಯಲ್ಲಿ ಚಿತ್ರವನ್ನು ಕಟ್ಟಿಕೊಡಲಾಗಿದೆ.
ಒನ್ಸ್ ಅಗೇನ್ ಬಾಲಯ್ಯ ತಮ್ಮ ಡೈಲಾಗ್ ಧಮಾಕ ಮೂಲಕ ಅಭಿಮಾನಿಗಳನ್ನು ರಂಜಿಸ್ತಿದ್ದಾರೆ. ಕೊಂಚ ಎಮೋಷನ್ ಮಿಕ್ಸ್ ಮಾಡಿ ಚಿತ್ರವನ್ನು ಅಭಿಮಾನಿಗಳಿಗೆ ಇಷ್ಟವಾಗುವಂತೆ ಕಟ್ಟಿಕೊಟ್ಟಿದ್ದಾರೆ. ಆದರೆ ಹಳೇ ರಿವೇಂಜ್ ಡ್ರಾಮಾ ಸಿನಿಮಾದಲ್ಲಿ ಹೊಸದೇನು ಇಲ್ಲ. ಬಾಲಕೃಷ್ಣ ಇಮೇಜ್‌ನ ದೃಷ್ಟಿಯಲ್ಲಿಟ್ಟುಕೊಂಡು ಚಿತ್ರವನ್ನು ತೆರೆಗೆ ತರಲಾಗಿದೆ. ಆಂಧ್ರದ ಜಗನ್ ಸರ್ಕಾರವನ್ನು ಟಾರ್ಗೆಟ್ ಮಾಡಿ ಬಾಲಕೃಷ್ಣ ಒಂದಷ್ಟು ಡೈಲಾಗ್ಸ್ ಹೊಡೆದಿದ್ದಾರೆ. ಎಸ್. ತಮನ್ ಮ್ಯೂಸಿಕ್ ಬಲ ಚಿತ್ರಕ್ಕೆ ಸಿಕ್ಕಿದೆ. ಚಿತ್ರ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತದೆ ಎನ್ನಲಾಗ್ತಿದೆ.

ಸಾಮಾನ್ಯವಾಗಿ ಯಾವುದೇ ಸಿನಿಮಾ ಆದರೂ 7 ವಾರಗಳ ನಂತರ ಓಟಿಟಿಗೆ ಬರುತ್ತದೆ. ಕೆಲವೊಮ್ಮೆ ಮೂರ್ನಾಲ್ಕು ವಾರಕ್ಕೆ ಬಂದುಬಿಡುವ ಉದಾಹರಣೆ ಕೂಡ ಇದೆ. ಮಾರ್ಚ್ ಮೊದಲ ವಾರದ ವೇಳೆಗೆ 'ವೀರಸಿಂಹ ರೆಡ್ಡಿ' ಓಟಿಟಿಯಲ್ಲಿ ಅಬ್ಬರಿಸುವ ಸುಳಿವು ಸಿಗುತ್ತಿದೆ. ಇನ್ನು ಬಾಲಯ್ಯ 'ವೀರಸಿಂಹ ರೆಡ್ಡಿ' ಚಿತ್ರಕ್ಕೆ ಬಾಕ್ಸಾಫೀಸ್‌ನಲ್ಲಿ ಚಿರಂಜೀವಿ ನಟನೆಯ 'ವಾಲ್ತೇರು ವೀರಯ್ಯ' ಪೈಪೋಟಿ ಕೊಡಲಿದೆ. ಈಗಾಗಲೇ ಕೆಲವೆಡೆ ಸಿನಿಮಾ ಪ್ರದರ್ಶನ ಆರಂಭವಾಗಿದೆ. ಸಿನಿಮಾ ನೋಡಿ ಮೆಗಾ ಫ್ಯಾನ್ಸ್ ಥ್ರಿಲ್ಲಾಗಿದ್ದಾರೆ. 'ವೀರಯ್ಯ' ವರ್ಸಸ್ 'ವೀರಸಿಂಹ' ಸಂಕ್ರಾಂತಿ ಫೈಟ್‌ನಲ್ಲಿ ಯಾರು ಗೆಲ್ತಾರೆ ಎನ್ನುವುದನ್ನು ಕಾದು ನೋಡಬೇಕು.