'ಸಪ್ತಸಾಗರದಾಚೆ ಎಲ್ಲೋ' ಸೈಡ್- B ಓಟಿಟಿ ಸ್ಟ್ರೀಮಿಂಗ್ ಯಾವಾಗ? ಅಮೇಜಾನ್ ಪ್ರೈಮ್‌ನಲ್ಲಿ ಬರಲ್ವಾ?
ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ನಟನೆಯ 'ಸಪ್ತಸಾಗರದಾಚೆ ಎಲ್ಲೋ' ಸರಣಿ ಸಿನಿಮಾಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಸಕ್ಸಸ್ ಆಗಿತ್ತು. ಮೊದಲ ಭಾಗಕ್ಕೆ ಹೋಲಿಸಿದರೆ ಎರಡನೇ ಭಾಗದ ಕಲೆಕ್ಷನ್ ಕಮ್ಮಿ. ಆದರೆ ಒಂದು ವರ್ಗದ ಪ್ರೇಕ್ಷಕರಿಗೆ ಸರಣಿಯ 2 ಸಿನಿಮಾಗಳು ಬಹಳ ಇಷ್ಟವಾಗಿತ್ತು.
ಹೇಮಂತ್ ರಾವ್ ನಿರ್ದೇಶನದಲ್ಲಿ ಸ್ವತಃ ರಕ್ಷಿತ್ ಶೆಟ್ಟಿ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಮೊದಲ ಭಾಗದಲ್ಲಿ ರುಕ್ಮಿಣಿ ನಾಯಕಿಯಾಗಿ ಮಿಂಚಿದರೆ ಎರಡನೇ ಭಾಗದಲ್ಲಿ ಚೈತ್ರಾ ಆಚಾರ್ ಕೂಡ ತಂಡ ಸೇರಿಕೊಂಡಿದ್ದರು. ಮನು- ಪ್ರಿಯಾ ಕಾಡುವ ಪ್ರೇಮಕಥೆಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಸೈಡ್- B ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಿಗೂ ಸಿನಿಮಾ ಡಬ್ ಆಗಿ ರಿಲೀಸ್ ಆಗಿತ್ತು.

'ಸಪ್ತಸಾಗರದಾಚೆ ಎಲ್ಲೋ'-ಸೈಡ್ B ಚಿತ್ರಮಂದಿರಗಳಿಗೆ ಬರುವುದಕ್ಕು ಮುನ್ನ ಮೊದಲ ಭಾಗ ಓಟಿಟಿಗೆ ಬಂದಿತ್ತು. ಅಮೇಜಾನ್ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗಿತ್ತು. ಇದೀಗ ಸೈಡ್- B ಯಾವಾಗ? ಯಾವ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತದೆ? ಎನ್ನುವ ಚರ್ಚೆ ಶುರುವಾಗಿದೆ. ಈ ವಾರವೇ ಸಿನಿಮಾ ಓಟಿಟಿಗೆ ಬರುತ್ತೆ ಎನ್ನಲಾಗಿತ್ತು. ಕಾರಣಾಂತರಗಳಿಂದ ತಡವಾಗುತ್ತಿದೆ.
ಡಿಸೆಂಬರ್ 22ಕ್ಕೆ ಮನು- ಪ್ರಿಯಾಳ ಮುಂದುವರೆದ ಕಥೆ ಓಟಿಟಿಗೆ ಬರುತ್ತದೆ ಎನ್ನುವ ಊಹಾಪೋಹ ಶುರುವಾಗಿದೆ. ಕೆಲವರು ಸೈಡ್- B ಓಟಿಟಿ ಸ್ಟ್ರೀಮಿಂಗ್‌ಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಸಾಮಾನ್ಯವಾಗಿ ಲವ್ ಸ್ಟೋರಿ ಸಿನಿಮಾಗಳನ್ನು ಎರಡು ಭಾಗಗಳಾಗಿ ತೆರೆಗೆ ತರುವುದು ತೀರಾ ಕಡಿಮೆ. ಆದರೆ ಕೆಲವೇ ದಿನಗಳ ಅಂತರದಲ್ಲಿ 'ಸಪ್ತಸಾಗರದಾಚೆ ಎಲ್ಲೋ' ಚಿತ್ರವನ್ನು ಎರಡು ಭಾಗಗಳಾಗಿ ಚಿತ್ರತಂಡ ತೆರೆಗೆ ತಂದಿತ್ತು.
ಸಿನಿಮಾ ನೋಡಿದ ಕೆಲವರು ಕಥೆಯನ್ನು ಒಂದೇ ಚಿತ್ರದಲ್ಲಿ ಹೇಳಬಹುದಿತ್ತು ಎಂದಿದ್ದರು. ಸೆಪ್ಟೆಂಬರ್ 1ಕ್ಕೆ ಸೈಡ್- A ತೆರೆಗೆ ಬಂದರೆ ಸೈಡ್- B ನವೆಂಬರ್ 17ಕ್ಕೆ ರಿಲೀಸ್ ಆಗಿತ್ತು. ಅಂದಹಾಗೆ ಚಿತ್ರದ ಸ್ಯಾಟಲೈಟ್ ರೈಟ್ಸ್ ಜೀ ಕನ್ನಡ ಪಾಲಾಗಿದೆ. ಮೊದಲ ಭಾಗ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಆದರೆ ಎರಡನೇ ಭಾಗ ಜೀ5ನಲ್ಲೇ ಬರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಇತ್ತೀಚೆಗೆ ಅಮೇಜಾನ್ ಪ್ರೈಂ ಕನ್ನಡ ಸಿನಿಮಾಗಳ ಡಿಜಿಟಲ್ ರೈಟ್ಸ್ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದೆ. ಹಾಗಾಗಿ 'ಸಪ್ತಸಾಗರದಾಚೆ ಎಲ್ಲೋ' ಸೈಡ್- B ಪ್ರೈಂ ವಿಡಿಯೋದಲ್ಲಿ ಬರುತ್ತಾ? ಇಲ್ವಾ? ಎನ್ನುವ ಚರ್ಚೆ ಶುರುವಾಗಿದೆ. 'ಸಪ್ತಸಾಗರದಾಚೆ ಎಲ್ಲೋ' ಮೊದಲ ಭಾಗ ಬಾಕ್ಸಾಫೀಸ್‌ನಲ್ಲಿ 20 ಕೋಟಿ ರೂ.ಗೂ ಅಧಿ ಕಲೆಕ್ಷನ್ ಮಾಡಿತ್ತು.
ಕರ್ನಾಟಕದಲ್ಲಿ ಸೈಡ್- Aಗೆ ಸಿಕ್ಕ ರೆಸ್ಪಾನ್ಸ್ ನೋಡಿ ರಕ್ಷಿತ್ ಶೆಟ್ಟಿ ಚಿತ್ರವನ್ನು ತೆಲುಗಿಗೆ ಡಬ್ ಮಾಡಿ ಆಂಧ್ರ, ತೆಲಂಗಾಣದಲ್ಲಿ ರಿಲೀಸ್ ಮಾಡಿದ್ದರು. ಅಲ್ಲೂ ಭರ್ಜರಿ ಪ್ರಚಾರ ಮಾಡಿದ್ದರು. ಕೆಲ ತೆಲುಗು ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು. ನಂದಿನಿ ರೆಡ್ಡಿ ಸೇರಿದಂತೆ ಕೆಲ ತೆಲುಗು ಫಿಲ್ಮ್ ಮೇಕರ್ಸ್ ಕೂಡ ಸಿನಿಮಾ ನೋಡಿ ಇಷ್ಟಪಟ್ಟಿದ್ದರು.
5 ಭಾಷೆಗಳಲ್ಲಿ ಪ್ರೈಂ ವಿಡಿಯೋಗೆ ಬಂದ ಸಿನಿಮಾಗೆ ಪರಭಾಷಾ ವೀಕ್ಷಕರಿಂದಲೂ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಹಾಗಾಗಿ 2ನೇ ಭಾಗವನ್ನು ಏಕಕಾಲಕ್ಕೆ 4 ಭಾಷೆಗಳಲ್ಲಿ ತೆರೆಗೆ ತರುವ ಪ್ರಯತ್ನ ಮಾಡಲಾಗಿತ್ತು. ಆದರೆ ಅದರಲ್ಲಿ ಅಷ್ಟಾಗಿ ಯಶಸ್ಸು ಸಿಕ್ಕಿರಲಿಲ್ಲ. ಕರ್ನಾಟಕದಲ್ಲಿ ಕೂಡ ಸೈಡ್- B ಅಷ್ಟಾಗಿ ಸದ್ದು ಮಾಡಲಿಲ್ಲ.
ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಗೋಪಾಲ ಕೃಷ್ಣ ದೇಶಪಾಂಡೆ ಚಿತ್ರದ ತಾರಾಗಣದಲ್ಲಿದ್ದಾರೆ. ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ ಹಾಗೂ ಚರಣ್ ರಾಜ್ ಸಂಗೀತ 'ಸಪ್ತಸಾಗರದಾಚೆ ಎಲ್ಲೋ' ಸರಣಿ ಚಿತ್ರಗಳಿಗಿದೆ.


Click it and Unblock the Notifications











