₹50 ಕೋಟಿಗೆ ನಾಗ ಚೈತನ್ಯ-ಶೋಭಿತಾ ಮದುವೆ ಪ್ರಸಾರ ಹಕ್ಕು ಖರೀದಿಸಿದ ನೆಟ್‌ಫ್ಲಿಕ್ಸ್? ಪ್ಲ್ಯಾನ್‌ನಲ್ಲಿ ಏನಿದೆ?

ನಾಗ ಚೈತನ್ಯ ಹಾಗೂ ಶೋಭಿತಾ ಧೂಲಿಪಾಲ ಮದುವೆಯನ್ನು ಕಣ್ತುಂಬಿಕೊಳ್ಳುವುದಕ್ಕೆ ಅವರ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಜೋಡಿ ವಿವಾಹಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸಮಂತಾ ಜೊತೆಗಿನ ದಾಂಪತ್ಯವನ್ನು ಮುರಿದುಕೊಂಡ ಬಳಿಕ ನಾಗ ಚೈತನ್ಯ ಹೆಸರು ಶೋಭಿತಾ ಜೊತೆ ತಳುಕು ಹಾಕಿಕೊಂಡಿತ್ತು. ಆದರೆ, ಈ ಜೋಡಿ ಮಾತ್ರ ಪ್ರತಿಕ್ರಿಯೆ ನೀಡಿರಲಿಲ್ಲ.

ಕೆಲವು ತಿಂಗಳ ಹಿಂದಷ್ಟೇ ಈ ಜೋಡಿ ಎರಡೂ ಕುಟುಂಬಗಳ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಆ ಫೋಟೊಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಅಲ್ಲಿಂದ ಈ ಜೋಡಿಯ ಮದುವೆ ಬಗ್ಗೆ ಒಂದೊಂದೇ ಇಂಟ್ರೆಸ್ಟಿಂಗ್ ವಿಷಯಗಳು ಕೇಳಿ ಬರುತ್ತಲೇ ಇವೆ.

Naga Chaitanya Sobhita Dhulipala wedding On Netflix

ನಾಗಚೈತನ್ಯ ಇದೇ ಡಿಸೆಂಬರ್ 4ರಂದು ಎರಡನೇ ಮದುವೆಯಾಗುತ್ತಿದ್ದಾರೆ. ಶೋಭಿತಾ ಜೊತೆ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಅದಕ್ಕೆ ಬೇಕಿರೋ ಸಕಲ ಸಿದ್ಧತೆಗಳು ಕೂಡ ನಡೆಯುತ್ತಿದೆ. ಈ ಗ್ಯಾಪ್‌ನಲ್ಲಿ ತಮ್ಮನ ನಿಶ್ಚಿತಾರ್ಥ ಕೂಡ ನಡೆದಿದೆ. ಅಕ್ಕಿನೇನಿ ಕುಟುಂಬ ಸದ್ಯ ಡಬಲ್ ಸಂಭ್ರಮದ ಅಲೆಯಲ್ಲಿ ತೇಲುತ್ತಿದೆ. ಇದರ ಜೊತೆನೇ ನಾಗಚೈತನ್ಯ ಹಾಗೂ ಶೋಭಿತಾ ವಿವಾಹದ ಪ್ರಸಾರದ ಹಕ್ಕನ್ನು ನೆಟ್‌ಫ್ಲಿಕ್ಸ್ ಖರೀದಿ ಮಾಡಿದೆ ಅನ್ನೋ ಸುದ್ದಿ ಹಬ್ಬಿದೆ.

ಡಿಸೆಂಬರ್ 4ರಂದು ಹೈದರಾಬಾದ್‌ನಲ್ಲಿ ನಾಗಚೈತನ್ಯ ಹಾಗೂ ಶೋಭಿತಾ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆಯಲ್ಲಿ ಎರಡು ಕಡೆಯ ಕುಟುಂಬ ಹಾಗೂ ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಕಲಾವಿದರಾಗಿದ್ದರಿಂದ ಈ ಅದ್ಧೂರಿ ವಿವಾಹ ನೋಡುವುದಕ್ಕೆ ಅಭಿಮಾನಿಗಳಲ್ಲಿ ಕುತೂಹಲವಿರುತ್ತೆ. ಈ ಕಾರಣಕ್ಕೆ ನೆಟ್‌ಫ್ಲಿಕ್ಸ್ ಈ ಜೋಡಿ ವಿವಾಹವನ್ನು ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಮಾಡುವುದಕ್ಕೆ ಮುಂದೆ ಬಂದಿದೆ ಎಂದು ಹೇಳಲಾಗುತ್ತಿದೆ.

Naga Chaitanya Sobhita Dhulipala wedding On Netflix

ಫಿಲ್ಮ್ಸ್ ಕ್ರಿಟಿಕ್ ಹಾಗೂ ಟ್ರೇಡ್ ಎಕ್ಸ್‌ಪರ್ಟ್ ಮನೋಬಾಲ ವಿಜಯಬಾಲನ್ ತನ್ನ ಎಕ್ಸ್ ಖಾತೆಯಲ್ಲಿ ಈ ಜೋಡಿಯ ಮದುವೆಯನ್ನು ನೆಟ್‌ಫ್ಲಿಕ್ ಸ್ಟ್ರೀಮಿಂಗ್ ಮಾಡುವ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಜೋಡಿಯೊಂದಿಗೆ ನೆಟ್‌ಫ್ಲಿಕ್ಸ್ 50 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸ್ಟಾರ್ ಜೋಡಿಯ ವಿವಾಹದ ಹಕ್ಕನ್ನು ನೆಟ್‌ಫ್ಲಿಕ್ಸ್ ಪಾಲಾಗಿದೆ ಎಂದಿದ್ದಾರೆ.

ಮನೋಬಾಲ ವಿಜಯಬಾಲನ್ ಎಕ್ಸ್ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ಸಂಚಲ ಸೃಷ್ಟಿಸುತ್ತಿದೆ. ಇತ್ತೀಚೆಗೆ ನಾಗ ಚೈತನ್ಯ ಹೈದರಾಬಾದ್‌ನಲ್ಲಿರುವ ತಮ್ಮ ಅನ್ನಪೂರ್ಣ ಸ್ಟುಡಿಯೋದಲ್ಲಿ, ತಾತ ಅಕ್ಕಿನೇನಿ ನಾಗೇಶ್ವರ ರಾವ್ ಅವರ ಪುತ್ಥಳಿಯ ಸಮ್ಮುಖದಲ್ಲಿ ವಿವಾಹವಾಗುವುದಾಗಿ ಹೇಳಿಕೊಂಡಿದ್ದರು. ಈ ಹೇಳಿಕೆ ಮದುವೆ ಖಾಸಗಿಯಾಗಿರುತ್ತೆ ಅನ್ನೋ ಸಂದೇಶ ನೀಡಿದೆ.

ನಾಗಚೈತನ್ಯ ಹಾಗೂ ಶೋಭಿತಾ ಇಬ್ಬರೂ ತೆಲುಗು ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆಂಬ ಮಾಹಿತಿಯಿದೆ. ಇನ್ನು ನಿಶ್ಚಿತಾರ್ಥ ಮಾಡಿಕೊಳ್ಳುವುದಕ್ಕೂ ಮುನ್ನ ನಾಗಚೈತನ್ಯ ಹಾಗೂ ಶೋಭಿತಾ ಇಬ್ಬರೂ ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು. ಲಂಡನ್ ಸೇರಿದಂತೆ ಕೆಲವೆಡೆ ಈ ಜೋಡಿ ಕಾಣಿಸಿಕೊಂಡಿದ್ದೂ ಇದೆ. ಆ ವೇಳೆ ತಮ್ಮ ಡೇಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ.

Disclaimer: ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಓಟಿಟಿ ವೇದಿಕೆ ಅಧಿಕೃತವಾಗಿ ಖಚಿತ ಪಡಿಸಬೇಕಿದೆ.

More from Filmibeat

English summary
Critic Manobala Vijayabalan said Naga Chaitanya Sobhita wedding streaming rights sold to Netflix
Read more about: naga chaitanya ott filmibeat news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X