ಕನ್ನಡದ ಮತ್ತೊಂದು ವೆಬ್ ಸೀರಿಸ್ 'ಜೆರಾಕ್ಸ್‌' ಶೀಘ್ರದಲ್ಲೇ ಪ್ರೀಮಿಯರ್; ಎಲ್ಲಿ? ಯಾವಾಗ?

ಕನ್ನಡದಲ್ಲಿ ವೆಬ್‌ ಸೀರಿಸ್‌ಗಳು ನಿರ್ಮಾಣ ಆಗುವುದೇ ಕಡಿಮೆ. ಆಗೊಮ್ಮೆ-ಈಗೊಮ್ಮೆ ಎನ್ನುವಂತೆ ವೆಬ್ ಸೀರಿಸ್‌ಗಳು ನಿರ್ಮಾಣ ಆಗುತ್ತವೆ. ಆದರೆ, ಕಳೆದ ಕೆಲವು ವರ್ಷಗಳಿಂದ ಕನ್ನಡದಲ್ಲಿ ಒಳ್ಳೊಳ್ಳೆ ವೆಬ್ ಸೀರಿಸ್‌ಗಳನ್ನು ಜೀ 5 ಸ್ಟ್ರೀಮಿಂಗ್ ಮಾಡುತ್ತಿದೆ. ಈಗ ಮತ್ತೊಂದು ವೆಬ್ ಸೀರೀಸ್ ಪ್ರೀಮಿಯರ್‌ಗೆ ರೆಡಿಯಾಗಿದೆ ಅದುವೇ 'ಜೆರಾಕ್ಸ್'. ಹೌದು, 'ಜೆರಾಕ್ಸ್' ಜೀ5ನ ಬಹುನಿರೀಕ್ಷಿತ ವೆಬ್‌ ಸೀರಿಸ್. ಸದ್ಯ ʼಜೆರಾಕ್ಸ್‌ʼ ವೆಬ್ ಸೀರಿಸ್‌ನ ಟ್ರೈಲರ್‌ ಈಗಾಗಲೇ ರಿಲೀಸ್ ಆಗಿದೆ. ಇದೊಂದು ಕಾಮಿಡಿ ವೆಬ್ ಸೀರಿಸ್ ಆಗಿದ್ದು, ಇದರಲ್ಲಿ 6 ಸಂಚಿಕೆಗಳಿದ್ದು, ವೀಕ್ಷಕರಿಗೆ ಕಂಪ್ಲೀಟ್ ಮನರಂಜನೆ ನೀಡುವ ಉದ್ದೇಶವನ್ನು ಇಟ್ಟುಕೊಂಡು ನಿರ್ಮಾಣ ಮಾಡಲಾಗಿದೆ.

Daali Dhananjay produced Xerox web series premier on April 24th in Zee 5

ಕನ್ನಡ ಚಿತ್ರರಂಗದ ನಟ ರಾಕ್ಷಸ, ನಿರ್ಮಾಪಕ ಡಾಲಿ ಧನಂಜಯ ತಮ್ಮ ಡಾಲಿ ಪಿಕ್ಷರ್ಸ್ ಬ್ಯಾನರ್‌ನಲ್ಲಿ ಈ ವೆಬ್ ಸೀರಿಸ್ ಅನ್ನು ನಿರ್ಮಾಣ ಮಾಡಿದ್ದಾರೆ. 'ಬ್ಲಿಂಕ್‌' ಸಿನಿಮಾ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಶ್ರೀನಿಧಿ ಬೆಂಗಳೂರು ʼಜೆರಾಕ್ಸ್‌ʼ ವೆಬ್ ಸೀರಿಸ್‌ಗೆ ಆಕ್ಷನ್ ಕಟ್ ಹೇಳಿದ್ದಾರೆ. ಡಾಲಿ ಧನಂಜಯ್ ಆತ್ಮೀಯ ಗೆಳೆಯ ಹಾಗೂ ನಟ ನಾಗಭೂಷಣ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಪಾಯಲ್‌ ಚೆಂಗಪ್ಪ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಧನಂಜಯ್ ಹಾಗೂ ಪಾಯಲ್ ಚಂಗಪ್ಪ ಅವರೊಂದಿಗೆ ಹಾಸ್ಯ ನಟ ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಶ್ರೀವತ್ಸ, ಯಶ್ವಂತ್‌ ಶೆಟ್ಟಿ, ವಿಜಯ್‌ ಪ್ರಸಾದ್‌, ತುಕಾಲಿ ಸಂತು, ಜಗ್ಗಪ್ಪ, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಸೇರಿದಂತೆ ಹಲವು ಕಲಾವಿದರು ಈ ವೆಬ್ ಸೀರಿಸ್‌ನಲ್ಲಿ ವೀಕ್ಷಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಲಿದ್ದಾರೆ.

'ಜೆರಾಕ್ಸ್' ಕತೆಯ ಕಡೆಗೆ ಬರೋದಾರೆ, ಮಳವಳ್ಳಿಯ ರಾಯದುರ್ಗದ ಪ್ರಕಾಶ ಒಬ್ಬ ಸಾಮಾನ್ಯ ಜೆರಾಕ್ಸ್‌ ಅಂಗಡಿ ಕೆಲಸಗಾರ. ಅವನ 'ಜೆರಾಕ್ಸ್‌' ಯಂತ್ರಕ್ಕೆ ಒಂದು ತಾಯಿತ ಸೇರಿದ ಬಳಿಕ ಅವನ ಜೀವನ ಬದಲಾಗುತ್ತದೆ. ಅವನು ತೆಗೆಯುವ ಜೆರಾಕ್ಸ್‌ ಕಾಪಿಗಳಿಗೆ ಜೀವ ಬಂದು ಅವನ ಜೀವನ ಉಲ್ಟಾಪಲ್ಟಾ ಆಗುತ್ತೆ. ಇದರಿಂದ ಆಗುವ ಅಚಾನಕ್‌ ಬದಲಾವಣೆಗಳು, ಊರಿನಲ್ಲಾಗುವ ಆಶ್ಚರ್ಯಕರ ಘಟನೆಗಳು, ಕುತೂಹಲಕಾರಿ ಸನ್ನಿವೇಶಗಳನ್ನು ಕಥೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. ಜೀ5ನಲ್ಲಿ ಇದೇ ಏಪ್ರಿಲ್‌ 24ರಿಂದ ಈ ವೆಬ್‌ ಸೀರಿಸ್ ಪ್ರೀಮಿಯರ್ ಆಗುತ್ತಿದೆ.

ನಿರ್ಮಾಪಕ ಡಾಲಿ ಧನಂಜಯ್ 'ಜೆರಾಕ್ಸ್' ವೆಬ್‌ ಸೀರಿಸ್ ಬಗ್ಗೆ ಹೀಗಂತಾರೆ, "ನನಗೆ ಈ ಕಥೆ ಇಷ್ಟವಾಗಲು ಕಾರಣ ಅದು ಹೇಳುವ ತತ್ವ. ಪ್ರತಿಯೊಂದು ಹಾಸ್ಯ ಸನ್ನಿವೇಶದ ಹಿಂದೆ ಅಡಗಿರುವ ತತ್ವ ನನ್ನನ್ನು ತನ್ನತ್ತ ಸೆಳೆಯಿತು. ಜೆರಾಕ್ಸ್‌ ಕಾಪಿಗಳಿಗೆ ಜೀವ ಬಂದಾಗ, ಜನರು ತಮ್ಮ ಪ್ರತಿಬಿಂಬವನ್ನೇ ಸ್ವೀಕರಿಸಲು ಹೇಗೆ ನಿರಾಕರಿಸುತ್ತಾರೆ. ಇವೆಲ್ಲವು ನನ್ನನ್ನು ಆಕರ್ಷಿಸಿತು. ಈ ಕಥೆಯು ಒಂಟಿತನ, ಹಾಸ್ಯ, ಪಶ್ಚಾತಾಪ, ಗೊಂದಲ ಎಲ್ಲವನ್ನೂ ಒಳಗೊಂಡಿದೆ. ಇದು ಕೇವಲ ಹಾಸ್ಯವನ್ನಷ್ಟೇ ಹೇಳದೇ, ಜೀವನದ ಮೌಲ್ಯಗಳನ್ನೂ ಕೂಡ ಹೇಳುತ್ತದೆ" ಎಂದು ಡಾಲಿ ಧನಂಜಯ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Daali Dhananjay produced Xerox web series premier on April 24th in Zee 5

ಇನ್ನು ನಿರ್ದೇಶಕ ಶ್ರೀನಿಧಿ ಬೆಂಗಳೂರು ತಮ್ಮ ವೆಬ್ ಸೀರಿಸ್ ಬಗ್ಗೆ ಹೇಳಿಕೊಂಡಿದ್ದಾರೆ. "ನಮ್ಮ ಕಾಪಿ ನಾವು ನೋಡಲು ಬಯಸದ ನಮ್ಮ ಒಂದು ವ್ಯಕ್ತಿತ್ವವನ್ನು ಬಿಂಬಿಸಿದರೆ ಹೇಗೆ ಇರುತ್ತದೆ? ಜೆರಾಕ್ಸ್‌ ಈ ಒಂದು ಭಯದಿಂದ ಹುಟ್ಟಿದ ಕಥೆ ಎಂದರೆ ತಪ್ಪಾಗಲಾರದು. ಮಳವಳ್ಳಿಯಲ್ಲಿ ನಡೆಯುವ ಈ ಒಂದು ಆಶ್ಚರ್ಯಕರ ಘಟನೆ ಹೇಗೆ ಹಲವಾರು ಹೊಸ ತಿರುವುಗಳಿಗೆ ಕಾರಣವಾಗುತ್ತದೆ? ಹೇಗೆ ಜನರ ಜೀವನವನ್ನು ಬದಲಾಯಿಸುತ್ತದೆ? ಇವೆಲ್ಲವನ್ನೂ ಕುತೂಹಲಕಾರಿಯಾಗಿ ತೋರಿಸುವ ಪ್ರಯತ್ನವೇ ಜೆರಾಕ್ಸ್‌" ಎನ್ನುತ್ತಾರೆ.

'ಜೆರಾಕ್ಸ್' ವೆಬ್ ಸೀರಿಸ್‌ನ ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟ ನಾಗಭೂಷನ್ ಹೀಗಂತಾರೆ. "ನಾನು ಪ್ರಕಾಶ ಎಂಬ ಒಬ್ಬ ಸಾಮಾನ್ಯ ಜೆರಾಕ್ಸ್‌ ಅಂಗಡಿ ಕೆಲಸಗಾರನ ಪಾತ್ರವನ್ನು ಇದರಲ್ಲಿ ವಹಿಸಿದ್ದೇನೆ. ತನ್ನ ಜೀವನದಲ್ಲಿ ಆಗುವ ಒಂದು ಘಟನೆಯಿಂದ ಹೇಗೆ ಅವನ ಜೀವನ ಸಂಪೂರ್ಣವಾಗಿ ಬದಲಾಗುತ್ತದೆ ಎಂಬುದನ್ನು ಕಥೆಯು ಹೇಳುತ್ತದೆ. ಪ್ರಕಾಶ ಸಾಮಾನ್ಯ ವ್ಯಕ್ತಿ, ಪ್ರಭಾವಿಯಲ್ಲ. ಆದರೆ, ಈ ಘಟನೆಯ ನಂತರ ಎಲ್ಲರ ಜೀವನದಲ್ಲಿ ನಡೆಯುವ ಘಟನೆಗಳಿಗೆ ಇವನು ಕಾರಣಕರ್ತನಾಗಿರುತ್ತಾನೆ. ಅವನು ಶಕ್ತಿಶಾಲಿಯೇನಲ್ಲ, ಕೆಟ್ಟವನೂ ಅಲ್ಲ. ಆದರೆ, ಎಲ್ಲದರ ಹಿಂದೆ ಇವನ ಕೈವಾಡವಿರುತ್ತದೆ. ಇದೊಂದು ವಿಭಿನ್ನವಾದ ಪಾತ್ರ. ವಿವಿಧ ಬಣ್ಣಗಳುಳ್ಳ ಪಾತ್ರ ಎಂದರೆ ತಪ್ಪಾಗಲಾರದು" ಎನ್ನುತ್ತಾರೆ.

More from Filmibeat

English summary
Daali Dhananjay produced Xerox web series premier on April 24th in Zee 5.
Read more about: dhananjay web series kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X