KD The Devil OTT: ತಿಂಗಳಿಗೂ ಮುನ್ನ ಓಟಿಟಿಗೆ ಧ್ರುವ- ಪ್ರೇಮ್ 'ಕೆಡಿ'; ಎಲ್ಲಿ ಸ್ಟ್ರೀಮಿಂಗ್?
ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ 'ಕೆಡಿ' ಸಿನಿಮಾ 12 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಸಾಕಷ್ಟು ಅಡೆತಡೆ ಎದುರಿಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬಂದಿತ್ತು. ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಬಾಕ್ಸಾಫೀಸ್‌ನಲ್ಲಿ ಕೂಡ ಸಖತ್ ಸದ್ದು ಮಾಡಿತ್ತು. ಇತ್ತೀಚೆಗೆ ಚಿತ್ರತಂಡ ರಾಜ್ಯಾದ್ಯಂತ ವಿಜಯಯಾತ್ರೆ ಮಾಡಿ ಬಂದಿತ್ತು. ಇದೀಗ ಸಿನಿಮಾ ಓಟಿಟಿ ರಿಲೀಸ್ ಬಗ್ಗೆ ಚರ್ಚೆ ನಡೀತಿದೆ.
ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ ನಟನೆಯ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್ ಹಾಗೂ ರಮೇಶ್ ಅರವಿಂದ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಚಿತ್ರದಲ್ಲಿ 70-80ರ ದಶಕದ ಕಥೆಯನ್ನು ಹೇಳಲಾಗಿದೆ. ಧ್ರುವ ಲಾಂಗ್ ಝಳಪಿಸಿ ಸದ್ದು ಮಾಡಿದ್ದಾರೆ. ಬಹಳ ದಿನಗಳ ನಂತರ ಪ್ರೇಮ್ ಗೆಲುವಿನ ಲಯಕ್ಕೆ ಮರಳಿದ್ದಾರೆ. ಆದರೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿಲ್ಲ.

ಅಂದಾಜು 70 ಕೋಟಿ ರೂ. ಬಜೆಟ್‌ನಲ್ಲಿ 'ಕೆಡಿ' ಸಿನಿಮಾ ನಿರ್ಮಾಣವಾಗಿದೆ. 5 ಭಾಷೆಗಳಲ್ಲಿ ಸಿನಿಮಾ ತೆರೆಗೆ ತರುವ ಪ್ರಯತ್ನ ನಡೆದಿತ್ತು. ಆದರೆ ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಕೂಡ ಬೇರೆ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುವುದು ಅನುಮಾನ ಎನ್ನುವಂತಾಗಿದೆ. ಹಾಗಾಗಿ ಶೀಘ್ರದಲ್ಲೇ ಓಟಿಟಿಗೆ ಬರಬಹುದು ಎನ್ನುವ ಚರ್ಚೆ ಶುರುವಾಗಿದೆ.
ಮೇ 28ಕ್ಕೆ ಸ್ಟ್ರೀಮಿಂಗ್?
ದೊಡ್ಡ ಸಿನಿಮಾಗಳೇ ತಿಂಗಳಿಗೂ ಮುನ್ನ ಓಟಿಟಿಗೆ ಬರ್ತಿವೆ. ಎರಡು ತಿಂಗಳ ಬಳಿಕ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಬೇಕು ಎನ್ನುವ ನಿಯಮವನ್ನು ಯಾರೂ ಫಾಲೋ ಮಾಡ್ತಿಲ್ಲ. 'ಕೆಡಿ' ಸಿನಿಮಾ ಓಪನಿಂಗ್ ಕ್ರೆಡಿಟ್ ಕಾರ್ಡ್‌ನಲ್ಲಿ ಕೂಡ ಓಟಿಟಿ, ಸ್ಯಾಟಲೈಟ್ ಪಾರ್ಟ್ನರ್ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಮೇ 28ಕ್ಕೆ 'ಕೆಡಿ' ಸಿನಿಮಾ ಬಿಡುಗಡೆ ಆಗುತ್ತದೆ ಎನ್ನುವ ಊಹಾಪೋಹ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲೇ ಇದೇ ಚರ್ಚೆ ನಡೀತಿದೆ.

'ಕೆಡಿ' ಬಾಕ್ಸಾಫೀಸ್
12 ದಿನಕ್ಕೆ 'ಕೆಡಿ' ಸಿನಿಮಾ ಕಲೆಕ್ಷನ್ 20 ಕೋಟಿ ರೂ. ಗಡಿ ದಾಟಿದೆ. ನಿನ್ನೆ(ಮೇ 11) ಸಿನಿಮಾ 40 ಲಕ್ಷ ರೂ. ಕಲೆಕ್ಷನ್ ಮಾಡಿದ್ದಾಗಿ sacnilk ವರದಿ ಮಾಡಿದೆ. ಈವರೆಗೆ ಸಿನಿಮಾ 20.92 ಕೋಟಿ ರೂ. ಗ್ರಾಸ್ ಕಲೆಕ್ಷನ್ ಜೊತೆಗೆ 18.04 ಕೋಟಿ ರೂ. ನೆಟ್ ಕಲೆಕ್ಷನ್ ಮಾಡಿರುವುದಾಗಿ ಹೇಳಲಾಗ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಕಲೆಕ್ಷಜ್ ನಂಬರ್ ಪೋಸ್ಟರ್‌ಗಳು ಹರಿದಾಡ್ತಿದೆ. ಚಿತ್ರತಂಡ ಕಲೆಕ್ಷನ್ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.
ನಷ್ಟದ ಭೀತಿ?
ನಿರೀಕ್ಷಿತ ಮಟ್ಟದಲ್ಲಿ 'ಕೆಡಿ' ಸಿನಿಮಾ ಸದ್ದು ಮಾಡಲಿಲ್ಲ. 70 ಕೋಟಿ ರೂ. ಬಜೆಟ್ ಸಿನಿಮಾ 20 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿರುವುದಾಗಿ ಹೇಳಲಾಗ್ತಿದೆ. 30 ಕೋಟಿ ರೂ. ಗಳಿಕೆ ಮಾಡುವುದು ಕಷ್ಟ ಎನ್ನುವಂತಾಗಿದೆ. ಓಟಿಟಿ, ಸ್ಯಾಟಲೈಟ್ ರೈಟ್ಸ್ ಕೂಡ ಸೇಲ್ ಆಗಲಿಲ್ಲ. ಅಂತಿಮವಾಗಿ ಪೇ ಫಾರ್ ವೀವ್ ಲೆಕ್ಕಾಚಾರದಲ್ಲಿ ಪ್ರೈಂ ವೀಡಿಯೋ ಡಿಜಿಟಲ್ ರೈಟ್ಸ್ ಖರೀದಿಸಿದೆ ಎನ್ನಲಾಗ್ತಿದೆ.
ಪರಭಾಷೆಗಳಲ್ಲಿ ಸಿನಿಮಾ?
ಮೊದಲಿನಿಂದಲೂ 'ಕೆಡಿ' ಪ್ಯಾನ್ ಇಂಡಿಯಾ ಸಿನಿಮಾ ಎಂದೇ ಚಿತ್ರತಂಡ ಹೇಳಿತ್ತು. 5 ಭಾಷೆಗಳಲ್ಲಿ ಟೀಸರ್, ಸಾಂಗ್ಸ್ ರಿಲೀಸ್ ಮಾಡಲಾಗಿತ್ತು. ಸಂಜಯ್ ದತ್, ಶಿಲ್ಪಾ ಶೆಟ್ಟಿ ಅವರನ್ನು ಆಯ್ಕೆ ಮಾಡಿಕೊಂಡಿದ್ದು ಅದೇ ಕಾರಣಕ್ಕೆ. ಪ್ಯಾನ್ ಇಂಡಿಯಾ ಟೂರ್ ಮಾಡಿ ಟೀಸರ್ ರಿಲೀಸ್ ಮಾಡಿದ್ದರು. ಆದರೆ ಅಷ್ಟಾಗಿ ಪ್ರತಿಕ್ರಿಯೆ ಸಿಗಲಿಲ್ಲ. ಕೊನೆಗೆ ಕನ್ನಡದಲ್ಲಿ ಮಾತ್ರ ಸಿನಿಮಾ ಬಿಡುಗಡೆ ಮಾಡಿದರು. ಬೇರೆ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುವ ಬದಲು ನೇರವಾಗಿ ಓಟಿಟಿಗೆ ಬರುವ ಸಾಧ್ಯತೆಯಿದೆ. ಈ ಬಗ್ಗೆ ಚಿತ್ರತಂಡ ಪ್ರತಿಕ್ರಿಯಿಸಿಲ್ಲ.
ವಿಶೇಷ ಸೂಚನೆ: 'ಕೆಡಿ' ಸಿನಿಮಾ ಓಟಿಟಿ ರಿಲೀಸ್ ಡೇಟ್ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಂದಿಲ್ಲ. ಮೇ 28ರಂದು ಸ್ಟ್ರೀಮಿಂಗ್ ಆಗಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೀತಿದೆ.


Click it and Unblock the Notifications