'ಸರ್ಕಾರು ವಾರಿ ಪಾಟ' ಚಿತ್ರ ಒಟಿಟಿಗೆ ಎಂಟ್ರಿ ಕೊಡೋದು ಯಾವಾಗ? ಚಿತ್ರತಂಡ ಹೇಳಿದ್ದೇನು?
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ನಟನೆಯ 'ಸರ್ಕಾರು ವಾರಿ ಪಾಟ' ಚಿತ್ರ ಬಾಕ್ಸಾಫೀಸ್‌ನಲ್ಲಿ ಸಖತ್ ಕಮಾಲ್ ಮಾಡಿದೆ. ರಿಲೀಸ್ ಆದಾಗಿನಿಂದ ಇಲ್ಲಿಯವರೆಗೂ ಭರ್ಜರಿಯಾಗಿ ಕಲೆಕ್ಷನ್ ಮಾಡಿಕೊಳ್ಳುವ ಮೂಲಕ ಜನಮನ ಗೆದ್ದಿದೆ.
'ಸರ್ಕಾರು ವಾರಿ ಪಾಟ' ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗದೇ ಇದ್ದರೂ ದಾಖಲೆ ಮಟ್ಟದಲ್ಲಿ ಕಲೆಕ್ಷನ್ ಮಾಡಿಕೊಳ್ಳುವ ಮೂಲಕ ತೆಲುಗು ಚಿತ್ರರಂಗಕ್ಕೆ ಹೊಸ ಶೇಡ್ ನೀಡಿದೆ. ಸಿನಿಮಾದಲ್ಲಿ ನಟ ಮಹೇಶ್ ಬಾಬು ಹಾಗೂ ನಟಿ ಕೀರ್ತಿ ಸುರೇಶ್ ಅಭಿನಯಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.
ಸದ್ಯ ಸಿನಿಮಾ ಈಗಾಗಲೇ 200 ಕೋಟಿ ಕಲೆಕ್ಷನ್ ಮಾಡುವ ಮೂಲಕ ಮುನ್ನುಗ್ಗುತ್ತಿದೆ. ಈಗಲೂ ಆಂಧ್ರಪ್ರದೇಶ, ತೆಲಂಗಾಣದಲ್ಲಿ 'ಸರ್ಕಾರು ವಾರಿ ಪಾಟ' ಚಿತ್ರ ವೀಕೇಂಡ್ ದಿನಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಕಲೆಕ್ಷನ್ ಮಾಡಿಕೊಳ್ಳುವಲ್ಲಿ ಮಾತ್ರ ಚಿತ್ರ ಎಡವಿಲ್ಲ. ಹೀಗಿದ್ದರೂ ಇದೇ ಸಿನಿಮಾ ಒಟಿಟಿಗೆ ಬರಲು ಸಜ್ಜಾಗಿದೆ. ಹಾಗಂತ ಸಿನಿಮಾ ತಂಡದಿಂದ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ.

ಒಟಿಟಿ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಮಹೇಶ್ ಬಾಬು ನಟನೆಯ 'ಸರ್ಕಾರು ವಾರಿ ಪಾಟ' ಸಖತ್ ಸಕ್ಸಸ್ ಕಂಡಿದೆ. ಈ ಸಿನಿಮಾವನ್ನು ಪ್ರೇಕ್ಷಕರು ಅಪ್ಪಿಕೊಂಡಿದ್ದಾರೆ. ಹೀಗಾಗಿ ಮಹೇಶ್ ಬಾಬು ಸಿನಿಮಾ ಗೆದ್ದಿದೆ. ಸದ್ಯ ಇದೇ ಸಿನಿಮಾ ತಂಡ ಈಗ ಹೊಸದೊಂದು ಅಪ್‌ಡೇಟ್ ನೀಡಿದೆ. ಅದೆನಪ್ಪಾ ಅಂದರೆ, 'ಸರ್ಕಾರು ವಾರಿ ಪಾಟ' ಚಿತ್ರವನ್ನು ಒಟಿಟಿಗೆ ತರಲು ಸಿದ್ದತೆ ನಡೆಯುತ್ತಿದೆ ಎಂದಿದೆ. ಯೆಸ್ 'ಸರ್ಕಾರು ವಾರಿ ಪಾಟ' ಥಿಯೇಟರ್‌ನಲ್ಲಿ ಅಬ್ಬರಿಸಿತ್ತು. ಈಗ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ. ಈ ಬಗ್ಗೆ ಚಿತ್ರ ತಂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಆದರೆ, ಸದ್ಯದಲ್ಲೇ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಒಟಿಟಿಯಲ್ಯಾವಾಗ 'ಸರ್ಕಾರು ವಾರಿ ಪಾಟ'?
'ಸರ್ಕಾರು ವಾರಿ ಪಾಟ' ಚಿತ್ರ ಈಗಾಗಲೇ ಬ್ಲಾಕ್ ಬಸ್ಟರ್ ಆಗಿದ್ದು, ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ. ಸದ್ಯ ಸಿನಿಮಾವನ್ನು ಥಿಯೇಟರ್‌ನಲ್ಲಿ ನೋಡಲು ಮಿಸ್ ಮಾಡಿಕೊಂಡವರಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ. ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ 'ಸರ್ಕಾರು ವಾರಿ ಪಾಟ' ರಿಲೀಸ್ ಆಗುವ ಸಾಧ್ಯತೆ ಇದೆ. ಜೂನ್ 10 ಅಥವಾ ಜೂನ್ 24 ರಂದು ಒಟಿಟಿಗೆ 'ಸರ್ಕಾರು ವಾರಿ ಪಾಟ' ಬರುತ್ತೆ ಅಂತ ಹೇಳಲಾಗ್ತಿದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಆದರೆ, ಪ್ರೇಕ್ಷಕರು ಮಾತ್ರ ಒಟಿಟಿಯಲ್ಲಿ ಯಾವಾಗ ರಿಲೀಸ್ ಆಗುತ್ತೆ ಎಂಬ ಕಾತುರದಲ್ಲಿ ಕಾಯುತ್ತಿದ್ದಾರೆ.

ಬಾಕ್ಸಾಫೀಸ್ ಧೂಳೆಬ್ಬಿಸಿದ ಮಹೇಶ್ ಬಾಬು ಸಿನಿಮಾ
'ಸರ್ಕಾರು ವಾರಿ ಪಾಟ' ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿಕೊಂಡಿದೆ. ವಿಶ್ವಾದಾದ್ಯಂತ ₹200 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಸೃಷ್ಟಿ ಮಾಡಿದೆ. ಇಂದು (ಮೇ 24) ಮಹೇಶ್ ಬಾಬು ಸಿನಿಮಾ ₹200 ಕೋಟಿ ರೂಪಾಯಿ ಗಡಿ ದಾಟಿದ್ದು, ಇದೇ ಮೊದಲ ಬಾರಿಗೆ ಪ್ರಾದೇಶಿಕ ಚಿತ್ರವೊಂದು ಅತಿದೊಡ್ಡ ಗಳಿಕೆ ಮಾಡಿಕೊಂಡಿದೆ. ಈ ಮೂಲಕ 'ಸರ್ಕಾರು ವಾರಿ ಪಾಟ' ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ಯಶಸ್ವಿಯಾಗಿದೆ.

ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ್ರೂ ಸಿನಿಮಾ ಸಕ್ಸಸ್
ಸಿನಿಮಾ ರಿಲೀಸ್ ಆದ ಸಮಯದಲ್ಲಿ ಚಿತ್ರದ ಬಗ್ಗೆ ಒಂದು ವರ್ಗದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ ಸಹ ಸಿನಿಮಾ ಮಾತ್ರ ಕುಗ್ಗದೆ ಭರ್ಜರಿ ಕಲೆಕ್ಷನ್ ಮಾಡಿಕೊಳ್ಳುವತ್ತಾ ಸಾಗಿದೆ. ಇನ್ನು 'ಸರ್ಕಾರು ವಾರಿ ಪಾಟ' ಸಿನಿಮಾ ಈ ಮಟ್ಟಿಗೆ ಕಲೆಕ್ಷನ್ ಮಾಡಲು ಎರಡು ಕಾರಣಗಳಿವೆ. ಒಂದು 'ಅಚಾರ್ಯ' ಸಿನಿಮಾ ಪ್ಲಾಪ್ ಆಗಿದ್ದು, ಇನ್ನೊಂದು ಸಿನಿಮಾ ರಿಲೀಸ್ ಆದ ನಂತರ ಯಾವುದೇ ಸ್ಟಾರ್ ನಟರ ಸಿನಿಮಾಗಳು ರಿಲೀಸ್ ಆಗದೇ ಇರುವುದು ಕೂಡ ಸಿನಿಮಾ ಕಲೆಕ್ಷನ್‌ಗೆ ಪ್ಲಸ್ ಪಾಯಿಂಟ್ ಆಯಿತು. ಒಟ್ಟಿನಲ್ಲಿ 'ಸರ್ಕಾರು ವಾರಿ ಪಾಟ' ಸಿನಿಮಾ ಬ್ಲಾಕ್ ಬಸ್ಟರ್ ಆಗಿದ್ದು, ₹200 ಕೋಟಿ ಗಡಿ ದಾಟಿ ಮುನ್ನುಗುತ್ತಿದೆ.


Click it and Unblock the Notifications











