ಈ ವಾರ ಒಟಿಟಿಯಲ್ಲಿ ಹಿಟ್ ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

ಚಿತ್ರಮಂದಿರಗಳಿಗೆ ಪ್ರಬಲ ಪೈಪೋಟಿಯನ್ನೇ ಒಟಿಟಿ ನೀಡುತ್ತಿದೆ. ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಉಚ್ರಾಯ ಸ್ಥಿತಿ ತಲುಪಿದ್ದ ಒಟಿಟಿ ಈಗ ಹಲವು ಜನರ ಮನೊರಂಜನೆಯ ಪ್ರಮುಖ ಮಾಧ್ಯಮವಾಗಿ ಮಾರ್ಪಟ್ಟಿದೆ.

ಸಿನಿಮಾಗಳು ಚಿತ್ರಮಂದಿರ ದಾಟಿಕೊಂಡು ಒಟಿಟಿಗೆ ಬಂದಾಗಲಷ್ಟೆ ಕಾದು ನೋಡುವ ವೀಕ್ಷಕರ ಒಂದು ವರ್ಗವೂ ಇದೀಗ ಹುಟ್ಟಿಕೊಂಡಿದೆ. ಒಟಿಟಿ ನೀಡುವ ಆಯ್ಕೆಯ ಸ್ವಾತಂತ್ರ್ಯದ ಪ್ರತಿಫಲ ಇದು.

ಅಂತೆಯೇ ಒಟಿಟಿಗಳು ಸಹ ನಾ ಮುಂದು ತಾ ಮುಂದು ಎಂದು ತನ್ನ ಸಬ್‌ಸ್ಕ್ರೈಬರ್‌ಗಳಿಗೆ ಹೊಸ-ಹೊಸ ಸಿನಿಮಾಗಲು, ವೆಬ್ ಸರಣಿಗಳನ್ನು ನೀಡುತ್ತಿವೆ. ಇತ್ತೀಚೆಗಂತೂ ಈ ಸ್ಪರ್ಧೆ ಹೆಚ್ಚಾಗಿದೆ. ಸ್ಪರ್ಧೆ ಹೆಚ್ಚಾದಷ್ಟು ವೀಕ್ಷಕ ಪ್ರಭುವಿಗೆ ಒಳ್ಳೆಯ ಸಿನಿಮಾಗಳು ಬೆರಳ ತುದಿಯಲ್ಲಿಯೇ ಸಿಗುವಂತಾಗಿದೆ. ಇದೀಗ ಮತ್ತೊಂದು ವಾರಾಂತ್ಯ ಬಂದಿದ್ದು, ಒಟಿಟಿಗಳಲ್ಲಿ ಹಲವು ಸಿನಿಮಾಗಳು, ವೆಬ್ ಸರಣಿಗಳು ಬಿಡುಗಡೆ ಆಗುತ್ತಿವೆ. ಇಲ್ಲಿದೆ ಪಟ್ಟಿ...

'777 ಚಾರ್ಲಿ' ಸಿನಿಮಾ ಬಿಡುಗಡೆ

'777 ಚಾರ್ಲಿ' ಸಿನಿಮಾ ಬಿಡುಗಡೆ

ರಕ್ಷಿತ್ ಶೆಟ್ಟಿ ನಟನೆಯ ಕನ್ನಡದ ಇತ್ತೀಚೆಗಿನ ಸೂಪರ್ ಹಿಟ್ ಸಿನಿಮಾ '777 ಚಾರ್ಲಿ' ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಜೂನ್ 10 ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದ್ದ ಈ ಸಿನಿಮಾ ಜುಲೈ 29 ರಂದು ವೂಟ್‌ ಒಟಿಟಿಯಲ್ಲಿ ತೆರೆಗೆ ಬಂದಿದೆ. ನಾಯಿ ಹಾಗೂ ಮನುಷ್ಯನ ನಡುವಿನ ಸಂಬಂಧದ ಕತೆಯನ್ನು ಹೊಂದಿರುವ ಈ ಸಿನಿಮಾವನ್ನು ಕಿರಣ್ ರಾಜ್ ನಿರ್ದೇಶನ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಡಿಲೀಟ್ ಮಾಡಲಾಗಿದ್ದ ಕೆಲವು ದೃಶ್ಯಗಳನ್ನು ಸೇರಿಸಿ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿರುವುದು ವಿಶೇಷ.

'ರಾಕೆಟ್ರಿ: ನಂಬಿ ಎಫೆಕ್ಟ್'

'ರಾಕೆಟ್ರಿ: ನಂಬಿ ಎಫೆಕ್ಟ್'

ಆರ್ ಮಾಧವನ್ ನಟಿಸಿ, ನಿರ್ದೇಶನ ಮಾಡಿರುವ ಪ್ಯಾನ್ ಇಂಡಿಯಾ ಸಿನಿಮಾ 'ರಾಕೆಟ್ರಿ: ನಂಬಿ ಎಫೆಕ್ಟ್' ಸಿನಿಮಾ ಈ ವಾರ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ನಂಬಿಯಾರ್ ಹೆಸರಿನ ವಿಜ್ಞಾನಿಯನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿ ಹಿಂಸಿಸಿದ ನಿಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಸಿನಿಮಾ ಇದಾಗಿದೆ. ಸಿನಿಮಾವು ಜುಲೈ 1 ರಂದು ಚಿತ್ರಮಂದಿರಗಳಲ್ಲಿ ತೆರೆ ಕಂಡಿತ್ತು.

ಜಾನ್ಹವಿಯ 'ಗುಡ್ ಲಕ್ ಜೆರ್ರಿ'

ಜಾನ್ಹವಿಯ 'ಗುಡ್ ಲಕ್ ಜೆರ್ರಿ'

ಶ್ರೀದೇವಿ ಪುತ್ರಿ ಜಾನ್ಹವಿ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ 'ಗುಡ್ ಲಕ್ ಜೆರ್ರಿ' ಸಿನಿಮಾ ನೇರವಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಿದೆ. ಈ ಸಿನಿಮಾವು ಕ್ರೈಂ ಕಾಮಿಡಿ ಆಗಿದ್ದು, ತಮಿಳಿನ 'ಕೊಲಮಾವು ಕೋಕಿಲ' ಸಿನಿಮಾದ ರೀಮೇಕ್ ಆಗಿದೆ. ಸಿನಿಮಾದ ಬಗ್ಗೆ ಉತ್ತಮ ಅಭಿಪ್ರಾಯಗಳು ಈಗಾಗಲೇ ವ್ಯಕ್ತವಾಗಿವೆ. ಯುವತಿಯೊಬ್ಬಾಕೆ ಹಣದ ಅವಶ್ಯಕತೆಗೆ ಡ್ರಗ್ಸ್ ಸಾಗಿಸುವ ಕಾರ್ಯ ಮಾಡುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಹಲವು ಸಿನಿಮಾ, ವೆಬ್ ಸರಣಿಗಳು ಬಿಡುಗಡೆ

ಹಲವು ಸಿನಿಮಾ, ವೆಬ್ ಸರಣಿಗಳು ಬಿಡುಗಡೆ

ಜೀ5 ನಲ್ಲಿ 'ಪೇಪರ್ ರಾಕೆಟ್' ಹೆಸರಿನ ಹೊಸ ಶೋ ಬಿಡುಗಡೆ ಆಗಿದೆ. ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ 'ವತ್ತಂ' ಹೆಸರಿನ ತಮಿಳು ಸಿನಿಮಾ ಬಿಡುಗಡೆ ಆಗಿದೆ. ಆಹಾ ಒಟಿಟಿಯಲ್ಲಿ 'ಶಿಕಾರು' ಹೆಸರಿನ ತೆಲುಗು ಸಿನಿಮಾ ಬಿಡುಗಡೆ ಆಗಿದೆ. ನೆಟ್‌ಫ್ಲಿಕ್ಸ್‌ನಲ್ಲಿ, 'ಮಸಾಬಾ-ಮಸಾಬಾ' ವೆಬ್ ಸರಣಿಯ ಸೀಸನ್ 2 ಬಿಡುಗಡೆ ಆಗಿದೆ. ಜೊತೆಗೆ 'ದಿ ಮೋಸ್ಟ್ ಹೇಟೆಡ್ ಮ್ಯಾನ್ ಆನ್ ಇಂಟರ್ನೆಟ್' ಸಹ ಬಿಡುಗಡೆ ಆಗಿದೆ.

Recommended Video

Ram | Vikranth Rona | ಸುದೀಪ್ ಸರ್ ಜೊತೆಗೆ ಜಿಮ್ ಮಾಡಿಸ್ತಿದ್ರು | Filmibeat Kannada.

More from Filmibeat

English summary
Some new movies, web series released on OTT this week. What is your pick to watch.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X