Kantara- 1 OTT: ಭಾರೀ ಮೊತ್ತಕ್ಕೆ 'ಕಾಂತಾರ' ಪ್ರೀಕ್ವೆಲ್ ಓಟಿಟಿ ರೈಟ್ಸ್ ಮಾರಾಟ: ಅಧಿಕೃತವಾಗಿ ಘೋಷಣೆ

ಬಹುನಿರೀಕ್ಷಿತ 'ಕಾಂತಾರ' ಚಾಪ್ಟರ್‌-1 ಓಟಿಟಿ ರೈಟ್ಸ್ ಬಗ್ಗೆ ಬ್ರೇಕಿಂಗ್ ನ್ಯೂಸ್ ಬಂದಿದೆ. ಅಧಿಕೃತವಾಗಿ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ 'ಕಾಂತಾರ' ಪ್ರೀಕ್ವೆಲ್ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಈಗಾಗಲೇ ಚಿತ್ರದ ಮುಹೂರ್ತ ನೆರವೇರಿದೆ. ಆದರೆ ಚಿತ್ರೀಕರಣ ಆರಂಭಕ್ಕೂ ಮುನ್ನ ಚಿತ್ರದ ಡಿಜಿಟಲ್ ರೈಟ್ಸ್ ಮಾರಾಟವಾಗಿದೆ.

ಈ ಸುದ್ದಿ ಕೇಳಿ ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದರು ಎನ್ನುವ ಗಾದೆ ನೆನಪಾಗಬಹುದು. ಆದರೆ ದೊಡ್ಡ ದೊಡ್ಡ ಸಿನಿಮಾಗಳ ವ್ಯವಹಾರವೇ ಆ ರೀತಿ ಇರುತ್ತದೆ. ಬೇಡಿಕೆಗೆ ತಕ್ಕಂತೆ ವ್ಯಾಪಾರ ಸಲೀಸಾಗಿ ನಡೆದುಬಿಡುತ್ತದೆ. ಚಿತ್ರೀಕರಣ ಶುರುವಾಗುವ ಮುನ್ನ 'ಕಾಂತಾರ' ಓಟಿಟಿ ರೈಟ್ಸ್ ಭಾರೀ ಮೊತ್ತಕ್ಕೆ ಬಿಕರಿಯಾಗಿದೆ. ಇದು ಅಂತೆ ಕಂತೆ ಸುದ್ದಿ ಕಂಡಿತ ಅಲ್ಲ.

Rishab shetty Starrer Kantara chapter -1 OTT Rights Sold For Huge Price

'ಕಾಂತಾರ'-1 ರೈಟ್ಸ್ ಕೊಂಡುಕೊಂಡಿರುವ ಸಂಸ್ಥೆಯೇ ಈ ವಿಚಾರವನ್ನು ಬಹಿರಂಗಪಡಿಸಿದೆ. ಅದ್ಧೂರಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಘೋಷಣೆಯಾಗಿದೆ. 'ಕಾಂತಾರ' ಒಂದು ದಂತಕಥೆ ಅಂದ್ರೆ ಮೊದಲ ಭಾಗ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಚಿತ್ರಕ್ಕೆ ಥಿಯೇಟರ್‌ಗಳಲ್ಲಿ ಸಿಕ್ಕ ಅದ್ಭುತ ರೆಸ್ಪಾನ್ಸ್ ಕಂಡು ಓಟಿಟಿ ಸ್ಟ್ರೀಮಿಂಗ್ ತಡ ಮಾಡಲಾಗಿತ್ತು. ಇದೀಗ ಪ್ರೀಕ್ವೆಲ್ ರೈಟ್ಸ್ ಕೂಡ ಪ್ರೈಂ ವಿಡಿಯೋ ಕೊಂಡಿಕೊಂಡಿದೆ.

'ಕಾಂತಾರ' ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಬಳಿಕ ಪ್ರೀಕ್ವೆಲ್ ಬಗ್ಗೆ ನಿರೀಕೆ ಎವರೆಸ್ಟ್ ಎತ್ತರಕ್ಕೆ ಏರಿದೆ. ಅದಕ್ಕೆ ತಕ್ಕಂತೆ ಮೇಕಿಂಗ್, ರಿಲೀಸ್ ಪ್ಲ್ಯಾನ್ ಮಾಡಲಾಗುತ್ತಿದೆ. 1000 ಕೋಟಿ ರೂ. ಕಲೆಕ್ಷನ್ ಪ್ಲ್ಯಾನ್ ಮಾಡಿ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. 5 ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಗೆ ಬರಲಿದೆ. ಕ್ರೇಜ್‌ಗೆ ತಕ್ಕಂತೆ ಭಾರೀ ಮೊತ್ತಕ್ಕೆ 'ಕಾಂತಾರ' ಚಾಪ್ಟರ್-1 ಪೋಸ್ಟ್ ಥ್ರಿಯೇಟ್ರಿಕಲ್ ರಿಲೀಸ್ ರೈಟ್ಸ್ ಬಿಕರಿಯಾಗಿದೆ.

ಅಮೇಜಾನ್ ಪ್ರೈಂ ಸಂಸ್ಥೆ ಅದ್ಧೂರಿ ಈವೆಂಟ್ ನಡೆಸಿ ಈ ವಿಚಾರವನ್ನು ಬಹಿರಂಗಪಡಿಸಿದೆ. 'ಕಾಂತಾರ' ಪ್ರೀಕ್ವೆಲ್ ಸಿನಿಮಾ ತೆರೆಕಂಡು 45 ದಿನಗಳ ಬಳಿಕ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ. ಇನ್ನು 'ಕಾಂತಾರ'-1 ಜೊತೆಗೆ ತೆಲುಗು, ತಮಿಳಿನ ದೊಡ್ಡ ದೊಡ್ಡ ಸಿನಿಮಾಗಳ ರೈಟ್ಸ್ ಕೊಂಡುಕೊಂಡಿರುವ ಬಗ್ಗೆ ಮಾಹಿತಿ ನೀಡಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೀತಿದೆ.

'ಕಾಂತಾರ' ಪ್ರೀಕ್ವೆಲ್ ಚಿತ್ರೀಕರಣಕ್ಕೆ ಭರದ ಸಿದ್ಧತೆ ನಡೀತಿದೆ. ಈಗಾಗಲೇ ನಾಯಕಿಯ ಹುಡುಕಾಟದಲ್ಲಿ ಚಿತ್ರತಂಡ ನಿರತವಾಗಿದೆ. ಆಲಿಯಾ ಭಟ್, ರುಕ್ಮಿಣಿ ವಸಂತ್, ಸಾಯಿ ಪಲ್ಲವಿ ಹಾಗೂ ಸಪ್ತಮಿ ಗೌಡರನ್ನು ನಾಯಕಿ ಪಾತ್ರಕ್ಕೆ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೀತಿದೆ. ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಕಂಪ್ಲೀಟ್ ಸಿನಿಮಾ ನೋಡಲು ಸಿನಿರಸಿಕರು ಕಾತರದಿಂದ ಕಾಯುತ್ತಿದ್ದಾರೆ.

ಕಥೆಯ ವಿಚಾರದಲ್ಲೂ ರಿಷಬ್ ಶೆಟ್ಟಿ ಈ ಬಾರಿ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಸಾಕಷ್ಟು ಬಾರಿ ತಿದ್ದಿ ತೀಡಿ ಕಥೆಯನ್ನು ಅಂತಿಮಗೊಳಿಸಿದ್ದಾರೆ. ಹೊಂಬಾಳೆ ಸಂಸ್ಥೆ ಕೂಡ ಸಿನಿಮಾ ಬಗ್ಗೆ ಕುತೂಹಲ ಮೂಡಿಸಿದೆ. ಕೇವಲ 20 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ 'ಕಾಂತಾರ' ಸಿನಿಮಾ 350 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿ ದಾಖಲೆ ಬರೆದಿತ್ತು. ಆದರೆ ಈ ಬಾರಿ ಸಿನಿಮಾ ಬಜೆಟ್ 100 ಕೋಟಿ ಮೀರುತ್ತದೆ ಎನ್ನುವ ನಿರೀಕ್ಷೆಯಿದೆ.

ಮೊದಲ ಭಾಗಕ್ಕಿಂತ ಹಲವು ಪಟ್ಟು ದೊಡ್ಡದಾಗಿ ಚಿತ್ರವನ್ನು ಕಟ್ಟಿಕೊಡುವ ಪ್ರಯತ್ನ ನಡೀತಿದೆ. ಈ ಬಾರಿ ಚಿತ್ರವನ್ನು ಆಸ್ಕರ್ ಸ್ಪರ್ಧೆಗೂ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತಿದೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ. ನಿರ್ದೇಶಕ, ನಟ ರಿಷಬ್ ಶೆಟ್ಟಿ ಬೇರೆ ಸಿನಿಮಾಗಳನ್ನೆಲ್ಲಾ ಪಕ್ಕಕ್ಕಿಟ್ಟು ಕಾಡುಬೆಟ್ಟು ಶಿವನ ಪೂರ್ವಿಕರ ಕಥೆ ಹೇಳುವ ಸಾಹಸಕ್ಕೆ ಕೈ ಹಾಕಿದ್ದಾರೆ.

More from Filmibeat

English summary
Rishab shetty's Kantara prequel digital rights sold for huge amount;
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X