The Girlfriend OTT: ರಶ್ಮಿಕಾ ಇದು ನನ್ನದೇ ಕಥೆ ಎನ್ನುತ್ತಿರುವ 'ದಿ ಗರ್ಲ್‌ಫ್ರೆಂಡ್' ಓಟಿಟಿಗೆ ಯಾವಾಗ?
ದೀಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಟನೆಯ 'ದಿ ಗರ್ಲ್‌ಫ್ರೆಂಡ್' ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಮುಖ್ಯವಾಗಿ ಮಹಿಳಾ ಪ್ರೇಕ್ಷಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಭಾರೀ ನಿರೀಕ್ಷೆ ಹುಟ್ಟಾಕ್ಕಿದ್ದ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ. ಆದರೆ ರಶ್ಮಿಕಾ ನಟನೆಗೆ ಮೆಚ್ಚುಗೆ ವ್ಯಕ್ತವಾಗ್ತಿದೆ.
ಇದು ನನ್ನ ಜೀವನಕ್ಕೆ ಹತ್ತಿರವಾದ ಕಥೆ. ಹಾಗಾಗಿ ಅಷ್ಟು ನೈಜವಾಗಿ ನಟಿಸೋಕೆ ಸಾಧ್ಯವಾಯಿತು ಎಂದು ರಶ್ಮಿಕಾ ಮಂದಣ್ಣ ಪದೇ ಪದೆ ಹೇಳುತ್ತಿದ್ದಾರೆ. ನವೆಂಬರ್ 7ರಂದು 'ದಿ ಗರ್ಲ್‌ಫ್ರೆಂಡ್' ಸಿನಿಮಾ ತೆರೆಗಪ್ಪಿಸಿತ್ತು. ರಾಹುಲ್ ರವೀಂದ್ರನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಗೀತಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಅಲ್ಲು ಅರವಿಂದ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಮಹಿಳಾ ಪ್ರೇಕ್ಷಕರಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕರೂ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯುವಲ್ಲಿ ಈ ಸಿನಿಮಾ ವಿಫಲವಾಗಿದೆ. ಆದರೂ ಸಕ್ಸಸ್ ಮೀಟ್ ಮಾಡಿ ಚಿತ್ರತಂಡ ಖುಷಿಪಟ್ಟಿತ್ತು. ಸಾಕಷ್ಟು ಜನ ಓಟಿಟಿಯಲ್ಲಿ ಸಿನಿಮಾ ನೋಡೋಣ ಎಂದು ಸುಮ್ಮನಾಗುತ್ತಿದ್ದಾರೆ. ಇದೆಲ್ಲದರ ನಡುವೆ ಸಿನಿಮಾ ಎಲ್ಲಿ ಯಾವಾಗ ಡಿಜಿಟಲ್ ಸ್ಟ್ರೀಮಿಂಗ್ ಆರಂಭಿಸುತ್ತದೆ ಎನ್ನುವ ಚರ್ಚೆ ಶುರುವಾಗಿದೆ.
ಅಂದಾಜು 40 ಕೋಟಿ ರೂ. ಬಜೆಟ್‌ನಲ್ಲಿ 'ದಿ ಗರ್ಲ್‌ಫ್ರೆಂಡ್' ಸಿನಿಮಾ ನಿರ್ಮಾಣವಾಗಿದೆ ಎನ್ನಲಾಗ್ತಿದೆ. 10 ದಿನಕ್ಕೆ ಸಿನಿಮಾ 16 ಕೋಟಿ ರೂ. ಮಾತ್ರ ಕಲೆಕ್ಷನ್ ಮಾಡಿದೆ. 14 ಕೋಟಿ ರೂ.ಗೆ ನೆಟ್‌ಫ್ಲಿಕ್ಸ್ ಚಿತ್ರದ ಡಿಜಿಟಲ್ ರೈಟ್ಸ್ ಕೊಂಡುಕೊಂಡಿದೆ ಎನ್ನಲಾಗ್ತಿದೆ. ಹಾಗಾಗಿ ಬಹಳ ಬೇಗ ಸ್ಟ್ರೀಮಿಂಗ್ ಮಾಡುವ ಸುಳಿವು ಸಿಗುತ್ತದೆ. ಡಿಸೆಂಬರ್ 11ಕ್ಕೆ ಸಿನಿಮಾ ಓಟಿಟಿಗೆ ಬರುತ್ತದೆ ಎನ್ನುವ ಊಹಾಪೋಹ ಶುರುವಾಗಿದೆ.
'ದಿ ಗರ್ಲ್‌ಫ್ರೆಂಡ್' ಸಿನಿಮಾ ಓಟಿಟಿ ರಿಲೀಸ್ ಡೇಟ್ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಸಿಕ್ಕಿಲ್ಲ. ಟಾಕ್ಸಿಕ್ ಬಾಯ್‌ಫ್ರೆಂಡ್ ಕಾರಣಕ್ಕೆ ಕಿರುಕುಳ ಅನುಭವಿಸುವ ಯುವತಿಯ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಕ್ಲೈಮ್ಯಾಕ್ಸ್‌ನಲ್ಲಿ ಆಕೆಯ ನಟನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೊಡಗಿನ ಕುವರಿ ರಶ್ಮಿಕಾ ಜೊತೆ ಕುಂದಾಪುರದ ಹುಡುಗ ದೀಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ.


Click it and Unblock the Notifications











