ಬರೋಬ್ಬರಿ 8 ಕೋಟಿಗೆ ಮದುವೆ ವಿಡಿಯೋ ಮಾರಾಟ ಮಾಡಿದ್ದಾರೆಯೇ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ!?
ಟಾಲಿವುಡ್ ಸೂಪರ್ ಕಪಲ್ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅದ್ದೂರಿ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 1 ರಂದು ಇಟಲಿಯ ಟಸ್ಕಾನಿಯಲ್ಲಿ ಕುಟುಂಬ ಸದಸ್ಯರು ಮತ್ತು ಟಾಲಿವುಡ್ ಸೆಲೆಬ್ರಿಟಿಗಳು ಸೇರಿದಂತೆ ಕೆಲವು ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಅಡಿಯಿಟ್ಟರು. ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಿವೆ.
ಇತ್ತೀಚಿನ ವರದಿಗಳ ಪ್ರಕಾರ, ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ಮದುವೆಯ ವಿಡಿಯೋವನ್ನು ಓಟಿಟಿ ವೇದಿಕೆ ಪ್ರಸಾರ ಮಾಡಲಿದೆ. ಮದುವೆ ವಿಡಿಯೋದ ಸ್ಟ್ರೀಮಿಂಗ್ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಬರೋಬ್ಬರಿ 8 ಕೋಟಿ ರೂಪಾಯಿಗಳನ್ನು ಪಾವತಿಸಿದೆ ಎಂದು ವರದಿಯಾಗಿದೆ.

ಓಟಿಟಿಯಲ್ಲಿ ವರುಣ್- ಲಾವಣ್ಯ ಮದುವೆ ವಿಡಿಯೋ
ಈ ಕ್ಯೂಟ್ ಕಪಲ್ ಮದುವೆ ವಿಡಿಯೋ ಪ್ರಸಾರ ವಿಚಾರ ಅವರ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟುಹಾಕಿದೆ. ತಮ್ಮ ನೆಚ್ಚಿನ ನಟ, ನಟಿಯ ಮದುವೆ ವಿಡಿಯೋ ನೋಡಲು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಆದರೆ, ಈ ಬಗ್ಗೆ ನೆಟ್‌ಫ್ಲಿಕ್ಸ್ ಅಥವಾ ದಂಪತಿಯಿಂದ ಯಾವುದೇ ಅಧಿಕೃತ ದೃಢೀಕರಣ ಸಿಕ್ಕಿಲ್ಲ.
ಈಗ ನೆಟ್‌ಫ್ಲಿಕ್ಸ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ಮದುವೆಯ ವಿಡಿಯೋವನ್ನು ಬಿಡುಗಡೆ ಮಾಡುತ್ತದೆಯೇ ಎಂದು ನೋಡಬೇಕಾಗಿದೆ. ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಮದುವೆ ಓಟಿಟಿ ಹಕ್ಕುಗಳ ವದಂತಿ ನಿನ್ನೆಯಿಂದ ಆನ್‌ಲೈನ್‌ನಲ್ಲಿ ಹರಿದಾಡುತ್ತಿವೆ. ಈ ವದಂತಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ಸುಳ್ಳು ಎಂದು ನಟರ ವಕ್ತಾರರು ಖಚಿತಪಡಿಸಿದ್ದಾರೆ.
ಇದು ಕೇವಲ ವದಂತಿ..!
"ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ಮದುವೆಯ ಓಟಿಟಿ ಹಕ್ಕುಗಳ ಸುತ್ತ ನಡೆಯುತ್ತಿರುವ ಊಹಾಪೋಹಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ಸುಳ್ಳು. ಇಂತಹ ವದಂತಿಗಳನ್ನು ನಂಬಬೇಡಿ ಮತ್ತು ಅವುಗಳನ್ನು ಹರಡಬೇಡಿ ಎಂದು ಎಲ್ಲರಲ್ಲೂ ವಿನಂತಿಸುತ್ತೇನೆ" ಎಂದು ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಜೂನ್ 2023 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ನವೆಂಬರ್ 1 ರಂದು ಇಟಲಿಯ ಟಸ್ಕಾನಿಯಲ್ಲಿ ಅದ್ಧೂರಿಯಾಗಿ ವಿವಾಹವಾದರು. ವರ ವರುಣ್ ತೇಜ್ ಮನೀಷ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಶೇರ್ವಾನಿಯನ್ನು ಧರಿಸಿದ್ದರೆ, ಲಾವಣ್ಯ ತ್ರಿಪಾಠಿ ಅದೇ ಡಿಸೈನರ್ ವಿನ್ಯಾಸಗೊಳಿಸಿದ ಕಾಂಚೀಪುರಂ ಸೀರೆಯನ್ನು ಧರಿಸಿದ್ದರು.

ಮದುವೆಯಲ್ಲಿ ಮೆಗಾಸ್ಟಾರ್ ಚಿರಂಜೀವಿ, ಪವನ್ ಕಲ್ಯಾಣ್, ರಾಮ್ ಚರಣ್, ಅಲ್ಲು ಅರ್ಜುನ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ವಿವಾಹದ ಆರತಕ್ಷತೆಯನ್ನು ನವೆಂಬರ್ 5 ರಂದು ಹೈದರಾಬಾದ್‌ನಲ್ಲಿ ನಡೆಸಲಾಗಿದೆ.
ಓಟಿಟಿ ಪ್ಲಾಟ್‌ಫಾರ್ಮ್ ಈ ಹಿಂದೆ ನಯನತಾರಾ ಮತ್ತು ವಿಘ್ನೇಶ್ ಶಿವನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳ ಮದುವೆಯ ವೀಡಿಯೊಗಳ ಸ್ಟ್ರೀಮಿಂಗ್ ಹಕ್ಕುಗಳನ್ನು ಪಡೆದುಕೊಂಡಿದೆ. ಆದರೆ, ಒಪ್ಪಂದದ ಉಲ್ಲಂಘನೆಯಿಂದಾಗಿ ಕೆಲವನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ಮಾತುಕತೆ ಹಂತದಲ್ಲಿದೆ ಎಂದು ವರದಿಯಾಗಿದೆ.
ಇನ್ನು, ಇತ್ತೀಚೆಗೆ ಹನ್ಸಿಕಾ ಮೋಟ್ವಾನಿ ಮತ್ತು ಸೋಹೇಲ್ ಕಥುರಿಯಾ ತನ್ನ ಮದುವೆಯ ವಿಡಿಯೋ 'ಲವ್ ಶಾದಿ' ಘೋಷಿಸಿದ್ದಾರೆ. ಇದು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಯಿತು. ಹನ್ಸಿಕಾ ಮೋಟ್ವಾನಿ ಕಳೆದ ವರ್ಷ ಡಿಸೆಂಬರ್ 4 ರಂದು ಜೈಪುರದ ಮುಂಡೋಟಾ ಕೋಟೆ ಮತ್ತು ಅರಮನೆಯಲ್ಲಿ ತನ್ನ ಗೆಳೆಯ ಸೋಹೇಲ್ ಕಥುರಿಯಾ ಅವರನ್ನು ವಿವಾಹವಾದರು.


Click it and Unblock the Notifications











