Yuva OTT: 21 ದಿನಕ್ಕೆ ಓಟಿಟಿಗೆ ಬಂದ 'ಯುವ'.. ಈಗ್ಲೇ ಸಿನಿಮಾ ನೋಡಬಹುದು.. ಆದ್ರೆ..

ಯುವ ರಾಜ್‌ಕುಮಾರ್ ನಟನೆಯ ಚೊಚ್ಚಲ ಸಿನಿಮಾ ಮಾರ್ಚ್ 29ಕ್ಕೆ ತೆರೆಗಪ್ಪಳಿಸಿತ್ತು. ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಸಂತೋಷ್ ಆನಂದ್‌ರಾಮ್ ನಿರ್ದೇಶನದ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡಿತ್ತು. ಘಟಾನುಘಟನಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಆದರೆ 21 ದಿನಕ್ಕ ಸಿನಿಮಾ ಓಟಿಟಿಗೆ ಬಂದಿದೆ.

ಅಣ್ಣಾವ್ರ ಮೊಮ್ಮಗ ರಾಘಣ್ಣ ಕಿರಿಮಗ ಯುವ ಸಿನಿ ಆರಂಗೇಟ್ರಂ ಭಾರೀ ನಿರೀಕ್ಷೆ ಮೂಡಿಸಿತ್ತು. ಬಹಳ ಅದ್ಧೂರಿಯಾಗಿ ಹೊಂಬಾಳೆ ಸಂಸ್ಥೆ ಸಿನಿಮಾ ನಿರ್ಮಾಣ ಮಾಡಿದೆ. 'ಯುವ ರಣಧೀರ ಕಂಠೀರವ' ಸಿನಿಮಾ ಮೂಲಕ ಯುವ ರಾಜ್‌ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ನಿಂತು ಹೋಗಿತ್ತು. ಬಳಿಕ ಹೊಂಬಾಳೆ ಸಂಸ್ಥೆ 'ಯುವ' ಲಾಂಚಿಂಗ್ ಸಿನಿಮಾ ಕೈಗೆತ್ತಿಕೊಂಡಿತ್ತು.

Yuva Rajkumar s debut film Now Streaming in this ott platform for Rent

'ಯುವ' ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಅಚ್ಯುತ್‌ ಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ಕಿಶೋರ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ಹಾಗೂ ಸ್ಟಂಟ್ಸ್ ವಿಚಾರದಲ್ಲಿ ಯುವ ರಾಜ್‌ಕುಮಾರ್ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಇಂಜಿನಿಯರ್ ಕಾಲೇಜ್ ಸ್ಟೂಡೆಂಟ್ ಹಾಗೂ ಡೆಲಿವರಿ ಬಾಯ್ ಆಗಿ ಯುವ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಕ್ಲೈಮ್ಯಾಕ್ಸ್ ವೇಳೆಗೆ ಕುಸ್ತಿಪಟುವಾಗಿಯೂ ಅಬ್ಬರಿಸಿದ್ದಾರೆ.

ಸಿನಿಮಾ ಕಥೆ ಮಂಗಳೂರು ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುರುವಾಗುತ್ತದೆ. ಅಲ್ಲಿ ಲೋಕಲ್ ಹುಡುಗರು ಹಾಗೂ ಹಾಸ್ಟೆಲ್ ಹುಡುಗರ ನಡುವೆ ಸದಾ ಕಿರಿಕ್ಕು. 'ಯುವ' ತನ್ನವರ ಪರ ನಿಲ್ಲುತ್ತಾನೆ. ಅದಕ್ಕಾಗಿ ಯಾವುದೇ ಹಂತಕ್ಕೆ ಹೋಗುವುದಕ್ಕು ಹಿಂದು ಮುಂದು ನೋಡುವವನಲ್ಲ. ಕಾಲೇಜು ಮುಗಿಸಿ ಬೆಂಗಳೂರಿಗೆ ಬರುವ ಯುವಗೆ ದೊಡ್ಡ ಶಾಕ್ ಕಾದಿರುತ್ತದೆ. ಸಾಲದ ಶೂಲಕ್ಕೆ ಸಿಲುಕಿ ಬೇಸತ್ತ ತಂದೆ ದಿಢೀರ್ ನಾಪತ್ತೆ ಆಗಿರುತ್ತಾರೆ. ಸಾಲ ಕೊಟ್ಟವರು ಕಾಟ ಶುರುವಾಗುತ್ತದೆ. ಇದನ್ನೆಲ್ಲಾ ಮೀರಿ ಹೇಗೆ ಯುವ ಗೆಲ್ತಾನೆ? ಎನ್ನುವುದು ಇನ್ನುಳಿದ ಕಥೆ.

ಚಿತ್ರಮಂದಿರಗಳಲ್ಲಿ ತೆರೆಕಂಡ 21 ದಿನಕ್ಕೆ 'ಯುವ' ಸಿನಿಮಾ ಓಟಿಟಿಗೆ ಬಂದುಬಿಟ್ಟಿದೆ. ಸದ್ದಿಲ್ಲದೇ ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಆದರೆ ಎಲ್ಲಾ ಪ್ರೈಂ ಚಂದಾದಾರರು ಸಿನಿಮಾ ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಇಷ್ಟು ದೊಡ್ಡ ಮೊತ್ತ ಜಾಸ್ತಿಯಾಯಿತು ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Yuva Rajkumar s debut film Now Streaming in this ott platform for Rent

ಸಣ್ಣಪುಟ್ಟ ತಪ್ಪುಗಳನ್ನು ಪಕ್ಕಕ್ಕಿಟ್ಟರೆ 'ಯುವ'

ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಸಕ್ಸಸ್ ಕಂಡಿದೆ. ಇನ್ನು ಯುವ ರಾಜ್‌ಕುಮಾರ್‌ ಮೊದಲ ಪ್ರಯತ್ನದಲ್ಲೇ ಗೆದ್ದು ಬೀಗಿದ್ದಾರೆ. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.

ಚಾಮರಾಜನಗರದಲ್ಲಿ 'ಯುವ' ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು. ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಕೂಡ ನಡೆದಿತ್ತು. ಸಿನಿಮಾ ಕಲೆಕ್ಷನ್ ಮೇಲೆ ಐಪಿಎಲ್ ಪರಿಣಾಮ ಬೀರಿದ್ದು ಸುಳ್ಳಲ್ಲ. ಆದರೂ ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಓಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಮೊದಲ ಸಿನಿಮಾ ಸಕ್ಸಸ್ ಬಳಿಕ ಯುವ ರಾಜ್‌ಕುಮಾರ್ 2ನೇ ಸಿನಿಮಾದತ್ತ ಮುಖ ಮಾಡಿದ್ದಾರೆ. ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ತಾತ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೂಡ ಯುವ ಹೀರೊ ಆಗಿ ಪಿಆರ್‌ಕೆ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ಸಿನಿಮಾ ಮಾಡುವ ಲೆಕ್ಕಾಚಾರದಲ್ಲಿದ್ದಾರೆ.

More from Filmibeat

English summary
Yuva Kannada film digital streaming details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X