For Quick Alerts
  ALLOW NOTIFICATIONS  
  For Daily Alerts

  ಚಿತ್ರವಿಮರ್ಶೆ:ಬಿರುಗಾಳಿ + ರಕ್ತದೋಕುಳಿ = ಗೂಳಿ

  By Staff
  |

  ನಟ ಸುದೀಪ್ ಲಾಂಗ್ ಗ್ಯಾಪಿನ ನಂತರ ಮತ್ತೆ ಬಂದಿದ್ದಾರೆ. ಜತೆಗೆ ಝಗಮಗಿಸುವ ಲಾಂಗ್ ಒಂದನ್ನು ಲಂಗುಲಾಗಾಮಿಲ್ಲದೇ ತಿರು ತಿರುಗಿಸುತ್ತಾ ಬಂದಿದ್ದಾರೆ. ಇತ್ತೀಚೆಗೆ ಬರೀ ಕ್ಲಾಸ್ ಪ್ರೇಕ್ಷಕರ ಅಭಿರುಚಿಗೆ ಸರಿಹೊಂದುವ ಪಾತ್ರ, ಚಿತ್ರಗಳನ್ನೇ ಮಾಡಿಕೊಂಡಿದ್ದ ಅವರು ಮತ್ತೊಮ್ಮೆ ಕಿಚ್ಚನ ವರಸೆಯಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂನಿಂದ ಮನೆಮಾತಾಗಿದ್ದ ಅವರು, ಈಗ ಮತ್ತದೇ ಮುಖವಾಡ ಧರಿಸಿದ್ದಾರೆ. ಗುಟ್ಟಾಗಿ ಗೋರಿ ತೋಡುವ 'ಗೂಳಿ' ಯಾಗಿ ಬದಲಾಗಿದ್ದಾರೆ. ಮಾತೆತ್ತಿದರೆ ಮಾಂಜಾಕೊಡುವ,ಸೊಲ್ಲೆತ್ತಿದರೆ ಸುಡಗಾಡು ತೋರಿಸುವ ಪಾತ್ರದಲ್ಲಿ ಮತ್ತೊಮ್ಮೆ ಮಿಂಚಿದ್ದಾರೆ. ಹಲವು ವರ್ಷಗಳಿಂದ ಹಸಿದು ಬಸವಳಿದಿದ್ದ ಅಭಿಮಾನಿಗಳಿಗೆ ಮೃಷ್ಟಾನ್ನ ಭೋಜನ' ಉಣಬಡಿಸಿದ್ದಾರೆ. ಮಚ್ಚಿನ ರುಚಿ' ತೋರಿಸಿದ್ದಾರೆ.

  ವಿನಾಯಕರಾಮ್ ಕಲಗಾರು

  ಗೂಳಿ ಬಂತು ಗೂಳಿ... ಆತ ದೊಡ್ಡ ರೌಡಿ ಗೂಳಿ. ಅವನ ಹಿಂದೆ ದೊಡ್ಡದೊಂದು ಹೆಸರು ನೈಂಟಿ, ಕ್ವಾಟ್ರು, ಮೀಟ್ರು...ಎಲ್ಲೆಲ್ಲಿ ಯಾವ ಯಾವ ಹತಾರ ಮಡಗಿರುತ್ತಾರೆ ಅಂತ ಅವರಿಗೇ ಗೊತ್ತಿಲ್ಲ. ಕಾಸಿಗಾಗಿ ಕಂಡೋ ದಂಧೆ ಅವರದು. ಇಡೀ ಬೆಂಗಳೂರಿ ಹಾವಳಿ. ಗೂಳಿ ಬಂದ ಎಂದರೆ ಅಲ್ಲೊದಿಷ್ಟು ಜನ ಹೆಣವಾಗೋದು ಗ್ಯಾರಂಟಿ. ಕೈಲೊಂದು ಲಾಂಗ್ ಇದ್ದರೆ ಸಾಕು, ಅದು ಯಾರ್ಯಾರನ್ನು ತಿವಿಯುತ್ತೋ ಅಂತ ಆ ದೇವರಿಗೇ ಗೊತ್ತು!

  ಶಿವಾಜಿನಗರದ ಫಯಾಜ್, ಮತ್ತಿ ಸೀನ,ಶ್ರೀರಾಂಪುರ ಸೆಲ್ವ... ಗೂಳಿಯ ಎದುರಾಳಿಗಳು, ಅವರದ್ದೂ ಅದೇ ಸಿದ್ಧಾಂತ- ಹೊಡಿ, ಕಡಿ... ಅವರು ಎಲ್ಲದಕ್ಕೂ ರೆಡಿ. ಗೂಳಿಯ ತಂಟೆಗೆ ಹೋಗೋದು, ಸುಖಾಸುಮ್ಮನೇ ಲತ್ತೆ ತಿನ್ನೋದು.

  ಆಗೊಬ್ಬಳು ರಮ್ಯಾ ಎಂಬ ಬೆಡಗಿ ಬರುತ್ತಾಳೆ. ಆಕೆ ಹೈಟೆಕ್ ಹುಡುಗಿ. ಇರುವ ಇಬ್ಬರು ಅಣ್ಣಂದಿರಿಗೆ ಅವಳೇ ಸರ್ವಸ್ವ. ಅಕಸ್ಮಾತ್ ಗೂಳಿಯನ್ನು ಭೇಟಿಯಾಗುತ್ತಾಳೆ. ಅವನ ಸ್ಟೈಲಿಗೆ, ಒರಟುತನಕ್ಕೆ ಮರುಳಾಗುತ್ತಾಳೆ. ಅವನ ನಿಷ್ಕಲ್ಮಶ ಹೃದಯಕ್ಕೆ ಮಾರುಹೋಗುತ್ತಾಳೆ; ಪ್ರೀತಿಯ ಬಲೆಯಲ್ಲಿ ಬೀಳುತ್ತಾಳೆ. ಅವ ಭೂಗತಪಾತಕಿ ಎಂದು ಗೊತ್ತಗಿಯೂ ಅದನ್ನೇ ಮಾಡುತ್ತಾಳೆ. ಅವನನ್ನೇ ಬದಲಿಸುವ ಪ್ರಯತ್ನಕ್ಕಿಳಿಯುತ್ತಾಳೆ. ಗೂಳಿಯ ವಿರೋಧಿಗಳ ಕೈಗೆ ಸಿಕ್ಕಿ ನಲುಗುತ್ತಾಳೆ. ಇನ್ನೇನು ಗೂಳಿ ಬದಲಾಗಿ,
  ಹೊಸ ಬಾಳಿಗೆ ಅಡಿಯಿಡಬೇಕು ಎನ್ನು ವಷ್ಟರಲ್ಲಿ ಮತ್ತೆ ಭೂಗತ ಜಗತ್ತು ಕೈ ಬೀಸಿ ಕರೆಯುತ್ತೆ... ಮುಂದೈತೆ 'ಗೂಳಿ'ಹಬ್ಬ.

  ಇದು ಗೂಳಿ ಚಿತ್ರದ ಕೇವಲ ಸ್ಯಾಂಪಲ್ ಅಷ್ಟೇ. ಇನ್ನಷ್ಟು ರಕ್ತಪಾತ,ಕೊಲೆ, ಸುಲಿಗೆ ,ರ ಕ್ತ ಸಿಕ್ತ ಹೋಳಿಹಬ್ಬ ನೋಡುವ ಹಂಬಲವಿದ್ದರೆ 'ಗೂಳಿ;ಯ ಬಳಿ ಬನ್ನಿ .ಅಂಥದ್ದೊಂದು 'ಭಯಂಕರ ಪ್ರಾತ್ಯಕ್ಷಿಕೆ' ಯನು ನಿಮಗೆ ನೀಡಿದ್ದಾರೆ ನಿರ್ದೇಶಕ ಪಿ.ಸತ್ಯಾ.

  ಎದುರಾಳಿಗಳನ್ನು ಹೇಗೆ ಅಟ್ಟಾಡಿಸಿಕೊಂಡು ಹೋಗಿ ಅಡ್ಡಡ್ಡಾ ಸಿಗಿಯಬೇಕು, ಎಲ್ಲೆಲ್ಲಿ ತಿವಿದರೆ ಹೇಗೆಯುತ್ತಾರೆ ಎಂಬುದನ್ನು ಮೊದಲಾರ್ಧದಲ್ಲಿ ಚಾಚೂತಪ್ಪದೇ ಅವರು ವಿವರಿಸಿದ್ದಾರೆ. ರೌಡಿಸಂ ಬ್ಯಾಡ, ಭೂಗತ ಲೋಕ ಅಷ್ಟು ಭವಲ್ಲ ಎಂಬುದನ್ನು ಒಂದು 'ಅದ್ಭು ತ ಸಾಕ್ಷ್ಯಚಿತ್ರ'ದಂತೇ ಹೇಳಲು ಪ್ರಯತ್ನಿಸಿ, ಎಲ್ಲೋ ಒಂದುಕಡೆ ಎಡವಿದ್ದಾರೆ. ಬರೀ ಹೇಳಲು ಪ್ರಯತ್ನಿಸಿ, ಎಲ್ಲೋ ಒಂದುಕಡೆ ಎಡವಿದ್ದಾರೆ. ಬರೀ ಹಿಂಸಾತ್ಮಕ ದೃಶ್ಯಗಳಿಗೇ ಒತ್ತುಕೊಟ್ಟು ಇಡೀ ಚಿತ್ರಕ್ಕೆ ಸಿಗಬೇಕಾದ ಕಿಮ್ಮತ್ತಿಗೇ ಕಪ್ಪುಚುಕ್ಕೆ ಇಟ್ಟಿದ್ದಾರೆ. ಆದರೆ ಅಯ್ಯಯ್ಯೋ ಇದೇನಪ್ಪಾ ಬರೀ ಹೊಡೆದಾಟ' ಎಂದುಕೊಳ್ಳುತ್ತಿದ್ದಂತೇ ಅಲ್ಲಲ್ಲಿ ಬರುವ ಹಾಡುಗಳು ಕೆಲಸಮಯ ಮುದ ನೀಡುತ್ತವೆ. ಸುಮ್ ಸುಮ್ನೆಯಾಕೋ.., ಕದ್ದು ಕದ್ದು ನನ್ನ ನೋಡೋ... ಹಾಡುಗಳು ಕೊನೆವರೆಗೂ ಹಿಂಬಾಲಿಸುತ್ತವೆ. ಸಂಗೀತ ನಿರ್ದೇಶಕ ಅನೂಪ್ ಸೀಳಿನ್‌ಗೆ ಉತ್ತಮ ಭವಿಷ್ಯವಿದೆ. ಸಾಹಸ ನಿರ್ದೇಶಕ ಪಳನಿರಾಜ್ ಪ್ರತಿ ಫ್ರೇಮ್‌ನಲ್ಲೂ ಪಳಪಳಿಸಿದ್ದಾರೆ.

  ಆದರೆ ನಟಿ ಮಮತಾ ಮೋಹನ್‌ದಾಸ್ ಮಾತ್ರ ಬೆಳ್ಳಗಿರೋದೆಲ್ಲಾ ಹಾಲಲ್ಲ ಎಂಬುದನ್ನು ನಿರೂಪಿಸಿದ್ದಾರೆ. ತಮ್ಮ ಮಾತಿಗೂ ಅಭಿನಯಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲವೇನೋ ಎಂಬಂತೆ ಅವರ ಅಭಿನಯ ಸಪ್ಪೆಸಪ್ಪೆ. ಕಿಶೋರ್, ಭವ್ಯ ಮುಂತಾದವರು ಕೊಟ್ಟ ಕೆಲಸಕ್ಕೆ ಮೋಸ ಮಾಡಿಲ್ಲ.

  ಸುದೀಪ್ ಎಲ್ಲೂ ಸೋತಿಲ್ಲ.ಅವರು ಇನ್ನಷ್ಟು ಮಾಗಿದ್ದಾರೆ. ತಮ್ಮ ಸೂಪರ್‌ಫಾಸ್ಟ್ ಲಾಗ್ ಗಳಿಂದ ಗೂಳಿ'ಗೆ ಮತ್ತಷ್ಟು ಜೀವತುಂಬಿದ್ದಾರೆ. ಜತೆಗೆ ಚಿತ್ರದ ಫಟಾಫಟ್ ಸಂಭಾಷಣೆ ಕೂಡ ಚಿತ್ರಕ್ಕೆ ಇನ್ನಷ್ಟು ಓಟ ನೀಡಿದೆ. ಒಟ್ಟಾರೆ ಇದೊಂದು ಅಪ್ಪಟ ಮಾಸ್ ಚಿತ್ರ. ಕ್ಲಾಸ್ ಎನ್ನಲು ಗೂಳಿಯ ಕೈನಲ್ಲಿರುವ ಇಷ್ಟುದ್ದದ ಲಾಂಗು ಅಡ್ಡಗೋಡೆಯಾಗಿ ನಿಂತಿದೆ !

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X