For Quick Alerts
  ALLOW NOTIFICATIONS  
  For Daily Alerts

  ಕಮಲ್ ಹಾಸನ್ 232ನೇ ಸಿನಿಮಾ ಅನೌನ್ಸ್: 'ಮಾಸ್ಟರ್' ನಿರ್ದೇಶಕನ ಜೊತೆ ಕಮಲ್ ಸಿನಿಮಾ

  |

  ಖ್ಯಾತ ನಟ ಕಮಲ್ ಹಾಸನ್ 232ನೇ ಸಿನಿಮಾ ಘೋಷಣೆ ಮಾಡಿದ್ದಾರೆ. ಕಮಲ್ ಹಾಸನ್ ಸದ್ಯ ಇಂಡಿಯನ್-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಇನ್ನು ಬಾಕಿ ಇರುವಾಗಲೇ ಮುಂದಿನ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಸಿನಿಮಾಗಿಂತ ಹೆಚ್ಚಾಗಿ ರಾಜಕೀಯದಲ್ಲಿ ಬ್ಯುಸಿಯಾಗಿರುವ ಕಮಲ್ ಹಾಸನ್ ಅವರನ್ನು ತೆರೆಮೇಲೆ ನೋಡಲು ಚಿತ್ರಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.

  ಇದೀಗ ಕಮಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ತಮಿಳಿನ ಸಕ್ಸಸ್ ಫುಲ್ ನಿರ್ದೇಶಕ ಲೋಕೇಶ್ ಕನಗರಾಜ್, ಕಮಲ್ ಹಾಸನ್ ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಚಿತ್ರದ ಫಸ್ಟ್ ಲುಕ್ ಶೇರ್ ಮಾಡಿ ಕಮಲ್ ಹಾಸನ್ ಹೊಸ ಜರ್ನಿ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ.

  ದಳಪತಿ, ರಜನಿಕಾಂತ್ ಬಳಿಕ ತಮಿಳಿನ ಮತ್ತೋರ್ವ ಸ್ಟಾರ್ ನಟನ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್

  ಚಿತ್ರಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡುತ್ತಿದ್ದಾರೆ. ಕಮಲ್ ಹಾಸನ್ ಹೋಮ್ ಬ್ಯಾನರ್ ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ಮೂಲಕ ಸಿನಿಮಾ ಮೂಡಿ ಬರುತ್ತಿದೆ. ನಿರ್ದೇಶಕ ಲೋಕೇಶ್ ಕನಗರಾಜ್ ಕೈದಿ ಸಿನಿಮಾ ಮೂಲಕ ತಮಿಳು ಪ್ರೇಕ್ಷಕರ ಮನಗೆದ್ದಿರುವ ನಿರ್ದೇಶಕ. ಕೈದಿ ಯಶಸ್ಸಿನ ಬೆನ್ನಲ್ಲೇ ದಳಪತಿ ವಿಜಯ್ ಗೆ ಮಾಸ್ಟರ್ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಮಾಸ್ಟರ್ ರಿಲೀಸ್ ಗೂ ಮೊದಲೇ ಕಮಲ್ ಹಾಸನ್ ಗೆ ನಿರ್ದೇಶನ ಮಾಡಲು ಮುಂದಾಗಿದ್ದಾರೆ.

  ನನ್ನ ನಂಬಿ ಸರ್ಕಾರ ದೊಡ್ಡ ಜವಾಬ್ದಾರಿ ಕೊಟ್ಟಿದೆ | Shruthi Krishna | Filmibeat Kannada

  ಕಮಲ್ ಹಾಸನ್ ಮತ್ತು ರಜನಿಕಾಂತ್ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿತ್ತು. ರಜನಿಕಾಂತ್ ಸಿನಿಮಾಗೆ ಕಮಲ್ ಹಾಸನ್ ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೀಗ ಕಮಲ್ ಹಾಸನ್ ನಿರ್ಮಾಣದಲ್ಲಿ ಬರುತ್ತಿರುವ ಸಿನಿಮಾಗೆ ಕಮಲ್ ಹಾಸನ್ ಅವರೇ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಈ ಸಿನಿಮಾದಲ್ಲಿ ರಜನಿಕಾಂತ್ ಸಹ ನಟಿಸುತ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

  English summary
  Actor Kamal Haasan announces new movie with Master Director Lokesh Kanagaraj.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X