ಆಸ್ಪತ್ರೆಯಿಂದ ಮನೆಗೆ ಮರಳಿದ ನಟ ಸೂರ್ಯ: ಅಣ್ಣನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ನಟ ಕಾರ್ತಿ

ತಮಿಳಿನ ಖ್ಯಾತ ನಟ ಸೂರ್ಯ ಇತ್ತೀಚಿಗಷ್ಟೆ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸೂರ್ಯ ಸದ್ಯ ಚೇತರಿಸಿಕೊಳ್ಳುತ್ತಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ಸದ್ಯ ಮನೆಯಲ್ಲೇ ಕ್ವೇರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ನಟ ಸೂರ್ಯ ಸೂರ್ಯ ಟ್ವೀಟ್ ಮಾಡಿ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು' ಎಂದು ಹೇಳಿದ್ದರು.

ಸದ್ಯ ಮನೆಗೆ ಮರಳಿರುವ ನಟ ಸೂರ್ಯ ಬಗ್ಗೆ ಸಹೋದರ ಕಾರ್ತಿ ಮಾಹಿತಿ ನೀಡಿದ್ದಾರೆ. ಸೂರ್ಯ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಇನ್ನು ಕೆಲವು ದಿನಗಳು ಮನೆಯಲ್ಲೇ ಕ್ವಾರಂಟೈನ್ ಆಗಲಿದ್ದಾರೆ ಎಂದು ಹೇಳಿದ್ದಾರೆ. 'ಅಣ್ಣ ಮನೆಗೆ ಬಂದಿದ್ದಾರೆ, ಸುರಕ್ಷಿತರಾಗಿದ್ದಾರೆ. ಕೆಲವು ದಿನಗಳ ವರೆಗೆ ಮನೆಯಲ್ಲೇ ಇರಲಿದ್ದಾರೆ. ಅಣ್ಣನಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು' ಎಂದು ಟ್ವೀಟ್ ಮಾಡಿದ್ದಾರೆ.

 Actor surya discharge from hospital post Covid 19 treatment

ಸೂರ್ಯ ಆಸ್ಪತ್ರೆಗೆ ಸೇರುತ್ತಿದಂತೆ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿತ್ತು. ಸದ್ಯ ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಿಂದ ಮನೆಗೆ ಮರಳಿರುವ ವಿಷಯ ತಿಳಿದು ಅಭಿಮಾನಿಗಳಲ್ಲಿ ಸಂತಸ ಮೂಡಿದೆ. ಬೇಗ ಗಣಮುಖರಾಗಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.

ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ತಡವಾಗುವ ಸಾಧ್ಯತೆ ಇದೆ.

More from Filmibeat

English summary
Actor surya discharge from hospital post Covid 19 treatment. Karthi updates his brother suriya's health condition.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X