Just In
Don't Miss!
- Sports
ಕೋಲ್ಕತ್ತಾ, ಅಹ್ಮದಾಬಾದ್ ಸೇರಿ 5 ತಾಣಗಳಲ್ಲಿ 2021ರ ಐಪಿಎಲ್
- Automobiles
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
- News
"ಕಾಂಗ್ರೆಸ್ ಈಗ ಒಡೆದ ಮನೆ; ಮೂರು ಗುಂಪುಗಳ ನಡುವೆ ನಿರಂತರ ಗುದ್ದಾಟ''
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Lifestyle
ಮಾರ್ಚ್ ತಿಂಗಳಲ್ಲಿ ವಿವಾಹವಾಗಲು ಇಲ್ಲಿದೆ ಶುಭದಿನಾಂಕಗಳು
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ ನಟ ಸೂರ್ಯ ಗೆಳೆಯ ರಾಜಶೇಖರ್
ತಮಿಳಿನ ಖ್ಯಾತ ನಟ ಸೂರ್ಯ ಕೊರೊನಾ ಸೋಂಕು ದೃಢಪಟ್ಟ ಬಳಿಕ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಸೂರ್ಯ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದರು. ಇತ್ತೀಚಿಗಷ್ಟೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ ಸೂರ್ಯ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೂರ್ಯ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಸೂರ್ಯ ಸ್ನೇಹಿತ ರಾಜ್ ಶೇಖರ್ ಪಾಂಡಿಯನ್ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದಾರೆ.
ಆಸ್ಪತ್ರೆಯಿಂದ ಮನೆಗೆ ಮರಳಿದ ನಟ ಸೂರ್ಯ: ಅಣ್ಣನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ನಟ ಕಾರ್ತಿ
ನಟ ಸೂರ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಹೋದರ ಕಾರ್ತಿ ಮಾಹಿತಿ ಹಂಚಿಕೊಂಡಿದ್ದರು. 'ಅಣ್ಣ ಮನೆಗೆ ಬಂದಿದ್ದಾರೆ, ಸುರಕ್ಷಿತರಾಗಿದ್ದಾರೆ. ಕೆಲವು ದಿನಗಳ ವರೆಗೆ ಮನೆಯಲ್ಲೇ ಇರಲಿದ್ದಾರೆ. ಅಣ್ಣನಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು' ಎಂದು ಟ್ವೀಟ್ ಮಾಡಿದ್ದರು.
ಸದ್ಯ ಕೊರೊನಾದಿಂದ ಗುಣಮುಖರಾಗಿರುವ ಸೂರ್ಯ ಕೆಲವೇ ದಿನಗಳಲ್ಲಿ ಚಿತ್ರೀಕರಣಕ್ಕೆ ಮರಳಿದ್ದಾರೆ. ಸೂರ್ಯ ಸಿನಿಮಾ ವಿಚಾರಕ್ಕೆ ಬರುವುದಾದರೆ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.
ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯ ಕೊರೊನಾ ಸೋಂಕು ತಗುಲಿದ ಕಾರಣ ತಡವಾಗಿ ಪ್ರಾರಂಭ ಮಾಡಲಿದ್ದಾರೆ.