For Quick Alerts
  ALLOW NOTIFICATIONS  
  For Daily Alerts

  ಬಾಲಿವುಡ್ ಸೂಪರ್ ಹಿಟ್ ಸಿನಿಮಾದ ರಿಮೇಕ್‌ನಲ್ಲಿ ಕೀರ್ತಿ ಸುರೇಶ್

  By ಫಿಲ್ಮಿಬೀಟ್ ಡೆಸ್ಕ್
  |

  ಬಾಲಿವುಡ್‌ನಲ್ಲಿ ಇತ್ತೀಚಿಗೆ ತೆರೆಗೆ ಬಂದ ಮಿಮಿ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಬಾಲಿವುಡ್ ಮಿಮಿ ಸಿನಿಮಾದ್ದೆ ಮಾತು, ಒಟಿಟಿಯಲ್ಲಿ ಬಿಡುಗಡೆಯಾದ ಈ ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟಿ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಕೃತಿ ಜೊತೆಗೆ ಸಾಯಿ ತಮ್ಹಂಕರ್ ಮತ್ತು ಪಂಕಜ್ ತ್ರಿಪಾಠಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  ಅಂದಹಾಗೆ ಮಿಮಿ ಸಿನಿಮಾ ಮರಾಠಿ ಸಿನಿಮಾ ರಿಮೇಕ್. ಬಾಡಿಗೆ ತಾಯಿಯಾಗುವ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾ ಇದಾಗಿದೆ. ಬಾಲಿವುಡ್‌ನಲ್ಲಿ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ಮಿಮಿ ಚಿತ್ರವನ್ನು ದಕ್ಷಿಣ ಭಾರತೀಯ ಸಿನಿಮಾರಂಗಕ್ಕೆ ರಿಮೇಕ್ ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ. ಅಂದಹಾಗೆ ಹಿಂದಿಯ ಮಿಮಿಯನ್ನು ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗೆ ರಿಮೇಕ್ ಮಾಡುವ ಬಗ್ಗೆ ತಯಾರಕರು ಚರ್ಚೆ ನಡೆಸುತ್ತಿದ್ದಾರಂತೆ.

  ಚಿರಂಜೀವಿ ಚಿತ್ರದಲ್ಲಿ ನಟಿಸಲು ಕೀರ್ತಿ ಸುರೇಶ್‌ಗೆ ಇಷ್ಟೊಂದು ಸಂಭಾವನೆನಾ?ಚಿರಂಜೀವಿ ಚಿತ್ರದಲ್ಲಿ ನಟಿಸಲು ಕೀರ್ತಿ ಸುರೇಶ್‌ಗೆ ಇಷ್ಟೊಂದು ಸಂಭಾವನೆನಾ?

  ಮೂರು ಭಾಷೆಯಲ್ಲಿ ಏಕಕಾಲಕ್ಕೆ ರಿಮೇಕ್ ಆಗುತ್ತಿದ್ದು, ಎಲ್ಲಾ ಮೂರು ಭಾಷೆಯಲ್ಲೂ ಪರಿಚಯವಿರುವ ನಟಿಯ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಖ್ಯಾತ ನಟಿ ಕೀರ್ತಿ ಸುರೇಶ್ ಕಣ್ಣಿಗೆ ಬಿದ್ದಿದ್ದಾರೆ. ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಕೀರ್ತಿ ಮಿಮಿ ರಿಮೇಕ್ ಮೂಲಕ ಮಿಂಚಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾತಂಡ ಕೀರ್ತಿ ಜೊತೆ ಮಾತುಕತೆ ನಡೆಸಿದೆ ಎನ್ನಲಾಗುತ್ತಿದೆ. ಕೀರ್ತಿ ಕಡೆಯಿಂದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದೆ ಚಿತ್ರತಂಡ ಎನ್ನುವ ಮಾತು ಕೇಳಿಬರುತ್ತಿದೆ.

  ಕೀರ್ತಿ ಸುರೇಶ್ ಸದ್ಯ ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರ ಬಳಿ ಅರ್ಧ ಡಜನ್‌ಗೂ ಅಧಿಕ ಸಿನಿಮಾಗಳಿವೆ. ತಮಿಳಿನನಲ್ಲಿ ಬಹುನಿರೀಕ್ಷೆಯ ಅಣ್ಣಾತೆ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಮೊದಲ ಬಾರಿಗೆ ಕೀರ್ತಿ ರನಿಕಾಂತ್ ಜೊತೆ ನಟಿಸಿದ್ದಾರೆ. ಈ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಜೊತೆಗೆ ಸನಿ ಕಾಯಿಧಂ ಚಿತ್ರ ಕೂಡ ಕೀರ್ತಿ ಬಳಿ ಇದೆ.

  ತಮಿಳು ಜೊತೆಗೆ ಕೀರ್ತಿ ತೆಲುಗುಸಿನಿಮಾರಂಗದಲ್ಲೂ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ನಟನೆಯ ಸರ್ಕಾರಿ ವಾರು ಪಾಟ ಸಿನಿಮಾದಲ್ಲಿ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಕೀರ್ತಿ, ಮಹೇಶ್ ಬಾಬು ಅವರಿಗೆ ಜೋಡಿಯಾಗ ಕಾಣಿಸಿಕೊಂಡಿದ್ದು, ಇಬ್ಬರನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನು ವಾಶಿ ಎನ್ನುವ ಮಲಯಾಳಂ ಸಿನಿಮಾದಲ್ಲೂ ಕೀರ್ತಿ ನಟಿಸುತ್ತಿದ್ದಾರೆ. ಜೊತೆಗೆ ಮೆಗಾಸ್ಟಾರ್ ಚಿರಂಜೀವಿ ಜೊತೆ ಬೋಲಾ ಶಂಕರ್ ಸಿನಿಮಾ ಕೂಡ ಕೀರ್ತಿಯಲ್ಲಿದೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಚಿರಂಜೀವಿ ಸಹೋದರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿರಂಜೀವಿ ಹುಟ್ಟುಹಬ್ಬದ ದಿನ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಪೋಸ್ಟರ್ ನಲ್ಲಿ ಕೀರ್ತಿ ಸುರೇಶ್ ರಾಕಿ ಕಟ್ಟುತ್ತಿರುವ ದೃಶ್ಯವಿದೆ.

  ಈ ಸಿನಿಮಾಗೆ ಕೀರ್ತಿ ಭರ್ಜರಿ ಮೊತ್ತದ ಸಂಭಾವನೆ ಪಡೆದಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಕೀರ್ತಿ ಚಿರಂಜೀವಿ ತಂಗಿಯಾಗಿ ನಟಿಸಲು ಬರೋಬ್ಬರಿ 3 ಕೋಟಿ ರೂ. ಸಂಭಾವನೆ ಜೇಬಿಳಿಸಿದ್ದಾರೆ ಎನ್ನಲಾಗುತ್ತಿದೆ.

  ಕೊನೆಯದಾಗಿ ಕೀರ್ತಿ ರಂಗ್ ದೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕೀರ್ತಿ ಮುಂದಿನ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎಂದು ಕಾದುನೋಡಬೇಕು. ಸರ್ಕಾರಿ ವಾರು ಪಾಟ ಸಿನಿಮಾ ಮುಂದಿನ ವರ್ಷ ಸಂಕ್ರಾಂತಿಗೆ ಬಿಡುಗಡೆ ಮಾಡುವುದಾಗಿ ಸಿನಿಮಾತಂಡ ಘೋಷಣೆ ಮಾಡಿದೆ.

  English summary
  South Indian Actress Keerthy Suresh for Tamil, Telugu and Malayalam remake of kriti Sanon's mimi.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X