For Quick Alerts
  ALLOW NOTIFICATIONS  
  For Daily Alerts

  ಲಾಕ್‌ಡೌನ್‌ನಲ್ಲಿ ಏನ್ಮಾಡ್ತಿದ್ದಾರೆ ಸಾಯಿ ಪಲ್ಲವಿ; ನಟಿಯ ಜೊತೆ ಫೋಟೋಗೆ ಪೋಸ್ ನೀಡಿದವರ್ಯರು?

  |

  ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ಸಾಯಿ ಪಲ್ಲವಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಕೊರೊನಾ ಲಾಕ್ ಡೌನ್ ನಿಂದ ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದಿದ್ದು, ಸಿನಿ ಸೆಲೆಬ್ರಿಟಿಗಳು ಮನೆಯಲ್ಲೇ ಕಾಲಕಳೆಯುವಂತಾಗಿದೆ.

  ಚಿತ್ರೀಕರಣ, ಸಿನಿಮಾ ಪ್ರದರ್ಶನ ನಿಂತು ಸುಮಾರು 2 ತಿಂಗಳು ಸಮೀಪಿಸುತ್ತಿದೆ. ಇದೀಗ ಕೆಲವು ರಾಜ್ಯಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಆದರೆ ಇನ್ನೂ ಅನೇಕ ಕಡೆ ಸಿನಿಮಾ ಕೆಲಸಕ್ಕೆ ಅನುಮತಿ ಸಿಕ್ಕಿಲ್ಲ. ಈ ಸಮಯವನ್ನು ಕಲಾವಿದರು ತಮ್ಮ ಕುಟುಂಬದ ಜೊತೆ ಕಳೆಯುತ್ತಿದ್ದಾರೆ. ನಟಿ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬದ ಜೊತೆ ಮಸ್ತ್ ಎಂಜಾಯ್ ಮಾಡುತ್ತಿದ್ದಾರೆ.

  ಲಾಕ್ ಡೌನ್ ಬಳಿಕ ಸಾಮಾಜಿಕ ಜಾಲತಾಣದಿಂದ ಅಂತರ ಕಾಯ್ದುಕೊಂಡಿದ್ದ ಸಾಯಿ ಪಲ್ಲವಿ ಇದೀಗ ಸುಂದರ ಫೋಟೋಗಳ ಮೂಲಕ ಮತ್ತೆ ಮರಳಿದ್ದಾರೆ. ಸೋದರ ಸಂಬಂಧಿಗಳ ಜೊತೆ ಎಂಜಾಯ್ ಮಾಡುತ್ತಿರುವ ಫೋಟೋವನ್ನು ಸಾಯಿ ಪಲ್ಲವಿ ಹಂಚಿಕೊಂಡಿದ್ದಾರೆ. 'ಪ್ರೇಮಂ' ಸುಂದರಿಯ ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

  ಕುಟುಂಬದವರ ಮದುವೆಯಲ್ಲಿ ಸಾಯಿ ಪಲ್ಲವಿ ಮಿಂಚುತ್ತಿದ್ದಾರೆ. ತನ್ನ ಹುಟ್ಟೂರು ನೀಲಗಿರಿಯಲ್ಲಿ ಮದುವೆಯಿದ್ದು, ಸಾಯಿ ಪಲ್ಲವಿ ಸೋದರ ಸಂಬಂಧಿಗಳ ಜೊತೆ ನಿಂತು ಸಾಯಿ ಪಲ್ಲವಿ ಕ್ಯಾಮರಾಗೆ ತರಹೇವಾರಿ ಪೋಸ್ ನೀಡಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ನ್ಯಾಚುರಲ್ ಬ್ಯೂಟಿ ಸಾಯಿಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಮತ್ತು ಕಾಮೆಂಟ್ ಹರಿದುಬರುತ್ತಿದೆ.

  ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಸಾಯಿ ಪಲ್ಲವಿ ಸದ್ಯ ನಾಗ ಚೈತನತ್ಯ ಜೊತೆಗಿನ ಲವ್ ಸ್ಟೋರಿ ಬಿಡುಗಡೆಗೆ ಕಾಯುತ್ತಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಮುಂದೂಡಲಾಗಿದೆ. ಈ ಸಿನಿಮಾ ಹಾಡು ಈಗಾಗಲೇ ದಾಖಲೆ ನಿರ್ಮಿಸಿದ್ದು, ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  Sanchari Vijay ಅದ್ಬುತ ನಟನೆಗೆ ಸಾಕ್ಷಿಯಾಯ್ತು ತಲೆದಂಡ ಚಿತ್ರದ ಟ್ರೈಲರ್ | Filmibeat Kannada

  ಈ ಸಿನಿಮಾ ಜೊತೆಗೆ ರಾಣ ದಗ್ಗುಬಾಟಿ ನಟನೆಯ ವಿರಾಟ ಪರ್ವಂ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ನಕ್ಸಲೈಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸಾಯಿ ಪಲ್ಲವಿ ಲುಕ್ ಈಗಾಗಲೆ ವೈರಲ್ ಆಗಿದೆ. ತೆಲುಗು ಸ್ಟಾರ್ ನಾಣಿ ನಟನೆಯ ಸಿನಿಮಾದಲ್ಲೂ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ ಮುಂದಿನ ಸಿನಿಮಾ ಯಾವುದು ಎನ್ನುವುದು ಕುತೂಹಲ ಮೂಡಿಸಿದೆ.

  English summary
  South famous Actress Sai Pallavi shares photo with her cousins. She spends time with her family.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X