TVK Vijay Oath Ceremony; ವಿಜಯ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಭಾಗಿ

ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ನಟ ವಿಜಯ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚೆನ್ನೈನ ಜವಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೀತು. ಅದ್ಧೂರಿ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಹಾಜರಾಗಿದ್ದರು. ನಟಿ ತ್ರಿಷಾ ಕೂಡ ಪಾಲ್ಗೊಂಡು ಅಚ್ಚರಿ ಮೂಡಿಸಿದರು.

ನಟ ವಿಜಯ್ ಹಾಗೂ ನಟಿ ತ್ರಿಷಾ ನಡುವೆ ಸಂಥಿಂಗ್ ಸಂಥಿಂಗ್ ನಡೀತಿದೆ, ವಿಜಯ್ ಹಾಗೂ ಸಂಗೀತಾ ಡಿವೋರ್ಸ್ ಆಗಲು ಆಕೆ ಕಾರಣ ಅಂತೆಲ್ಲಾ ಭಾರೀ ಚರ್ಚೆ ನಡೀತಿದೆ. ಇತ್ತೀಚೆಗೆ ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಕೂಡ ವಿಜಯ್ ನಿವಾಸಕ್ಕೆ ನಟಿ ತ್ರಿಷಾ ಭೇಟಿ ನೀಡಿದ್ದರು. ಇದೀಗ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತ್ರಿಷಾ ಬಂದಿದ್ದು ಗಮನ ಸೆಳೆದಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ನಡೀತಿದೆ.

Actress Trisha Krishnan to attend TVK Vijay s swearing-in ceremony

ತ್ರಿಷಾ ನಡೆ ಸರಿಯಿಲ್ಲ ಎಂದು ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ, ಆಕೆಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು, ಬಿಡುವುದು ವಿಜಯ್‌ಗೆ ಬಿಟ್ಟ ವಿಚಾರ.. ಒಬ್ಬ ಸ್ನೇಹಿತೆಯಾಗಿ ತ್ರಿಷಾ ಬಂದಿರಬಹುದು ಅದರಲ್ಲಿ ತಪ್ಪೇನಿದೆ ಎಂದು ಕೆಲವರು ಬೆಂಬಲ ಸೂಚಿಸಿದ್ದಾರೆ.

ಮೇ 4ರಂದು ತ್ರಿಷಾ ಹುಟ್ಟುಹಬ್ಬದ ದಿನವೇ ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಅಂದು ಬೆಳಗ್ಗೆ ತಿರುಪತಿಯಲ್ಲಿ ತ್ರಿಷಾ ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ನೇರವಾಗಿ ಚೆನ್ನೈಗೆ ಬಂದು ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದರು. ಟಿವಿಕೆ ಪಕ್ಷ 108 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಕ್ಕೆ ವೈಯಕ್ತಿಕವಾಗಿ ಭೇಟಿಯಾಗಿ ಅಭಿನಂದನೆ ತಿಳಿಸಿದ್ದರು.

ವಿಜಯ್ ಜೊತೆ ತ್ರಿಷಾ ಕೂಡ ರಾಜಕೀಯರಂಗ ಪ್ರವೇಶಿಸುತ್ತಾರೆ ಎಂದು ಗುಲ್ಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಎರಡು ಕ್ಷೇತ್ರಗಳಲ್ಲಿ ವಿಜಯ್ ಶಾಸಕರಾಗಿ ಗೆದ್ದಿದ್ದಾರೆ. ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಿದೆ. ಅದೇ ಕ್ಷೇತ್ರದಲ್ಲಿ ಟಿವಿಕೆ ಪಕ್ಷದ ಅಭ್ಯರ್ಥಿಯಾಗಿ ತ್ರಿಷಾ ಕಣಕ್ಕಿಳಿಯುತ್ತಾರೆ ಎನ್ನಲಾಗ್ತಿದೆ. ಆದರೆ ಇದೆಲ್ಲಾ ಬರೀ ವದಂತಿ ಎಂದು ವರದಿಯಾಗಿದೆ.

ಪ್ರಮಾಣ ವಚನ ಸಮಾರಂಭಕ್ಕೆ ಅರ್ಧ ಗಂಟೆ ಮನ್ನ ತ್ರಿಷಾ ನೆಹರೂ ಒಳಾಂಗಣ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಹಸಿರು ಬಣ್ಣದ ಸೀರೆ ಉಟ್ಟು ಗಮನ ಸೆಳೆದರು. ಅಭಿಮಾನಿಗಳ ಕಡೆ ಕೈ ಬೀಸಿ ಸಂಭ್ರಮಿಸಿದರು. ಇದೇ ವೇಳೆ ವಿಜಯ್ ತಾಯಿ ಶೋಭಾ ಚಂದ್ರಶೇಖರ್ ಹಾಗೂ ಸಹೋದರಿಯನ್ನು ಆಕೆ ಅಪ್ಪಿ ಮಾತನಾಡಿಸಿದ್ದು ವಿಶೇಷವಾಗಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗ್ತಿದೆ.

ವಿಜಯ್ ಪ್ರಮಾಣವಚನ ಸ್ವೀಕರಿಸುವುದನ್ನು ನೋಡಿ ತಂದೆ ಚಂದ್ರಶೇಖರ್ ಹಾಗೂ ತಾಯಿ ಶೋಭಾ ಭಾವುಕರಾದರು. 'ಗಿಲ್ಲಿ' ಚಿತ್ರದಲ್ಲಿ ವಿಜಯ್ ಹಾಗೂ ತ್ರಿಷಾ ಮೊದಲ ಬಾರಿ ಒಟ್ಟಿಗೆ ನಟಿಸಿದ್ದರು. ಬಳಿಕ ಎರಡ್ಮೂರು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು. ಬಹಳ ದಿನಗಳಿಂದ ಇಬ್ಬರ ಡೇಟಿಂಗ್ ಬಗ್ಗೆ ಗುಸುಗುಸು ಕೇಳಿಬರ್ತಿತ್ತು. ವಿಜಯ್ ಪತ್ನಿ ಸಂಗೀತಾ ಡಿವೋರ್ಸ್ ಕೇಳಿ ಕೋರ್ಟ್ ಮೆಟ್ಟಿಲೇರಿದ ಮೇಲೆ ವದಂತಿ ಹೆಚ್ಚಾಯಿತು. ಅದರ ಬೆನ್ನಲ್ಲೇ ತ್ರಿಷಾ ಜೊತೆ ವಿಜಯ್ ಮದುವೆ ಸಮಾರಂಭವೊಂದರಲ್ಲಿ ಭಾಗಿ ಆಗಿದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿ ಮಾತನಾಡಿದ ವಿಜಯ್, "ನಾನು ಗುಟ್ಟಾಗಿ ಅಲ್ಲಿ ಇಲ್ಲಿ ಹೋಗಲ್ಲ, ಏನು ಮಾಡಲ್ಲ, ಅದು ನಿಮಗೂ ಗೊತ್ತು" ಎಂದು ಪರೋಕ್ಷವಾಗಿ ಕಾಮೆಂಟ್ ಮಾಡಿದ್ದಾರೆ. ಚುನಾವಣೆಯಲ್ಲಿ ಟಿವಿಕೆ ಪಕ್ಷಕ್ಕೆ ಹೆಚ್ಚು ಸ್ಥಾನಗಳು ಸಿಗುತ್ತಿದ್ದಂತೆ ನೇರವಾಗಿ ವಿಜಯ್ ಭೇಟಿ ಆಗಿ ಅಭಿನಂದನೆ ತಿಳಿಸಿದ್ದವರು ನಟಿ ತ್ರಿಷಾ. ಈಗ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೂಡ ಭಾಗಿ ಆಗಿ ಸುದ್ದಿ ಆಗಿದ್ದಾರೆ.

Read more about: vijay trisha politics
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X