Just In
Don't Miss!
- News
ನೇಪಾಳ ಕಮ್ಯೂನಿಸ್ಟ್ ಪಕ್ಷದಿಂದ ಕೆಪಿ ಶರ್ಮಾ ಓಲಿ ಉಚ್ಚಾಟನೆ
- Finance
ಬಜೆಟ್ 2021: ಐ.ಟಿ. ಫೈಲಿಂಗ್ ನಲ್ಲಿ PAN ಕಾರ್ಡ್ ಗೆ ಏಕಿಷ್ಟು ಮಹತ್ವ, ಏನಿದರ ವಿಶೇಷ?
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಿರುತೆರೆ ನಟಿ ಆತ್ಮಹತ್ಯೆ; ತನಿಖೆಯಿಂದ ಬಯಲಾಯ್ತು ಚಿತ್ರಾ ಗುಟ್ಟಾಗಿ ಮದುವೆಯಾಗಿದ್ದ ರಹಸ್ಯ
ತಮಿಳು ಕಿರುತೆರೆ ಲೋಕದ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಬಳಿಕ ಗುಟ್ಟಾಗಿ ಮದುವೆಯಾಗಿದ್ದ ವಿಚಾರ ಸದ್ದು ಮಾಡುತ್ತಿದೆ. ಚೈತ್ರಾ ಉದ್ಯಮಿ ಹೇಮಂತ್ ಕುಮಾರ್ ಜೊತೆ ರಹಸ್ಯವಾಗಿ ಮದುವೆಯಾಗಿದ್ದರು ಎನ್ನುವ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ.
28 ವರ್ಷದ ಚಿತ್ರಾ ಚೆನ್ನೈನ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲ್ ನಲ್ಲಿ ನಿನ್ನೆ (ಡಿ.09) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೈತ್ರಾ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಅನುಮಾವ ಸಹ ವ್ಯಕ್ತವಾಗಿದ್ದು, ಚಿತ್ರಾ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತವಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆಯಲ್ಲಿ ಚಿತ್ರಾ ಮದುವೆ ಆಗಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.
ಕಿರುತೆರೆಯ ಖ್ಯಾತ ನಟಿ ವಿ.ಜೆ ಚಿತ್ರಾ ಆತ್ಮಹತ್ಯೆಗೆ ಶರಣು

ಗುಟ್ಟಾಗಿ ಮದುವೆ ಆಗಿದ್ದ ಚಿತ್ರಾ
ಆಗಸ್ಟ್ ತಿಂಗಳಲ್ಲಿ ನಟಿ ಚಿತ್ರಾ ಉದ್ಯಮಿ ಹೇಮಂತ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಇಬ್ಬರು ಒಟ್ಟಿಗೆ ಹೋಟೆಲ್ ನಲ್ಲೇ ವಾಸಿಸುತ್ತಿದ್ದರು. ನಿಶ್ಚಿತಾರ್ಥದ ವಿಚಾರ ಎಲ್ಲರಿಗೂ ಗೊತ್ತಿತ್ತು. ಆದರೀಗ ಪೊಲೀಸ್ ತನಿಖೆ ವೇಳೆ ಇಬ್ಬರು ಗುಟ್ಟಾಗಿ ಮದುವೆ ಕೂಡ ಆಗಿದ್ದರು ಎನ್ನುವ ವಿಚಾರ ಬಯಲಾಗಿದೆ.

ಅಕ್ಟೋಬರ್ 9ರಂದು ಮದುವೆ
ಅಕ್ಟೋಬರ್ 9ರಂದು ಇಬ್ಬರು ಮದುವೆಯಾಗಿದ್ದಾರಂತೆ. ಗುಟ್ಟಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ ವಿಚಾರವನ್ನು ಅವರು ಎಲ್ಲಿಯೂ ಬಹಿರಂಗ ಪಡಿಸಲಿಲ್ಲ. ಈ ಬಗ್ಗೆ ಹೇಮಂತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಹೇಳಿ ಸಾಕ್ಷಿ ಸಹ ನೀಡಿದ್ದಾರಂತೆ.
ಕೊರೊನಾದಿಂದ ನಟಿ ದಿವ್ಯಾ ನಿಧನರಾದ ಬೆನ್ನಲ್ಲೇ ಪತಿ ನೀಡಿದ ಚಿತ್ರಹಿಂಸೆಯ ರಹಸ್ಯ ಬಯಲು

ಹೇಮಂತ್ ಕುಮಾರ್ ಪ್ರತಿಕ್ರಿಯೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾವಿ ಪತಿ ಹೇಮಂತ್, 'ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಚಿತ್ರಾ ಸ್ನಾನ ಮುಗಿಸಿ ಬರುವುದಾಗಿ ಹೇಳಿ ಹೋದಳು. ತುಂಬಾ ಸಮಯವಾದರೂ ಬರಲಿಲ್ಲ, ಬಳಿಕ ಬಾಗಿಲು ಬಡಿಯಲು ಪ್ರಾರಂಭಿಸಿದೆ. ಬಾಗಿಲು ತೆಗೆಯಲಿಲ್ಲ. ಬಳಿಕ ಹೋಟೆಲ್ ಸಿಬ್ಬಂದಿಗೆ ತಿಳಿಸಿ ನಕಲಿ ಕೀ ಬಳಸಿ ಬಾಗಿಲು ತೆರೆದೆವು. ಚಿತ್ರಾ ನೇಣುಹಾಕಿಕೊಂಡಿದ್ದಳು' ಎಂದಿದ್ದಾರೆ.

ನಟಿ ಮತ್ತು ನಿರೂಪಕಿಯಾಗಿ ಖ್ಯಾತಿಗಳಿಸಿರುವ ಚಿತ್ರಾ
ಚಿತ್ರಾ ಹಠಾತ್ ಅಗಲಿಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಆಘಾತ ವುಂಟಾಗಿದೆ. ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರಾ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸುವ ಜೊತೆೆಗೆ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದ ಚಿತ್ರಾ ಸಾಯುವ ಮುನ್ನ ದಿನ ಸುಂದರ ಫೋಟೋವನ್ನು ಹಂಚಿಕೊಂಡಿದ್ದರು.