'ಕಿರಾತಕ' ನಾಯಕಿ ಓವಿಯಾ ವಿರುದ್ಧ ಬಿಜೆಪಿಯಿಂದ ದೂರು ದಾಖಲು

ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾಲ್ಲಿ ನಾಯಕಿಯಾಗಿ ಮಿಂಚಿದ್ದ ತಮಿಳುನಾಡಿನ ನಟಿ ಓವಿಯಾ ಹೆಲೆನ್ ವಿರುದ್ಧ ತಮಿಳುನಾಡಿನಲ್ಲಿ ಬಿಜೆಪಿ ಕಾನೂನು ವಿಭಾಗ ದಾಖಲಿಸಿದೆ. ನಟಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಆಗಮಿಸಿದ್ದ ವೇಳೆ 'ಗೋ ಬ್ಯಾಕ್ ಮೋದಿ' ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡ್ ಮಾಡಲಾಗಿತ್ತು. ನಟಿ ಓವಿಯಾ ಸಹ ಗೋ ಬ್ಯಾಕ್ ಮೋದಿ ಎಂದು ಟ್ವೀಟ್ ಮಾಡಿದ್ದರು.

ಈ ಹಿನ್ನಲೆಯಲ್ಲಿ ನಟಿಯ ವಿರುದ್ಧ ಬಿಜೆಪಿ ಕಾನೂನು ವಿಭಾಗ ಸೈಬರ್ ಕ್ರೈಂ ಸೆಲ್ ಪೊಲೀಸ್ ವರಿಷ್ಠಾದಿಕಾರಿಗಳಿಗೆ ದೂರು ನೀಡಿದ್ದು, ಟ್ವೀಟ್ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲು ಒತ್ತಾಯಿಸಿದೆ ಎಂದು ಕೆಲವು ತಮಿಳು ವೆಬ್ ಪೋರ್ಟಲ್ ನಲ್ಲಿ ವರದಿಯಾಗಿದೆ.

ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಓವಿಯಾ ಅವರ ಅಧಿಕೃತ ಟ್ವೀಟ್ ಖಾತೆಯಿಂದ ಗೋ ಬ್ಯಾಕ್ ಮೋದಿ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಹಿಂದಿನ ಉದ್ದೇಶ ಸಾರ್ವಜನಿಕ ಅಸ್ವಸ್ಥತೆಯನ್ನು ಪ್ರಚೋದಿಸುವುದಾಗಿದೆಯೇ ಎಂದು ಪರಿಶೀಲಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

BJP files complaint against Actress Oviya Helen

ಇನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಓವಿಯಾ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸಲು ಶ್ರೀಲಂಕಾ ಮತ್ತು ಚೀನಾ ಓವಿಯಾ ಅವರೊಂದಿಗೆ ಕೆಲಸ ಮಾಡುತ್ತಿವೆ. ಕೆಲವು ರಾಜಕೀಯ ಪಕ್ಷಗಳು ಚೆನ್ನೈ ಮತ್ತು ಸುತ್ತಮುತ್ತ ಶಾಂತಿ ಮತ್ತು ಸುವ್ಯವಸ್ಥೆ ಹದಗೆಡುವ ಚಟುವಟಿಕೆಗಳಲ್ಲಿ ತೊಡಗಿಕೊಂಡಿವೆ ಎಂದು ಆರೋಪಿಸಿದ್ದಾರೆ.

Recommended Video

ಸಿನಿಮಾ ರಿಲೀಸ್ ಗು ಮುಂಚೆಯೇ ಬರ್ತಿದೆ ಸಿಕ್ಕಾಪಟ್ಟೆ ಆಫರ್ | Zaid Khan | Filmibeat Kannada

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ 10.30ರ ಸುಮಾರಿಗೆ ಚೆನ್ನೈಗೆ ಆಗಮಿಸಿದ್ದರು. ತಮಿಳು ಸರ್ಕಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅನೇಕ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

More from Filmibeat

English summary
BJP files complaint against Actress Oviya Helen.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X