For Quick Alerts
  ALLOW NOTIFICATIONS  
  For Daily Alerts

  'ತಲೈವರ್ 169' ಸಿನಿಮಾ: ಮತ್ತೆ ಸನ್ ಪಿಕ್ಚರ್ಸ್ ಜೊತೆ ಕೈಜೋಡಿಸಿದ ರಜನಿಕಾಂತ್

  |

  ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲೇ, ಮುಂದಿನ ಸಿನಿಮಾ ವಿಚಾರವು ಸದ್ದು ಮಾಡುತ್ತಿದೆ. ಹೌದು, ರಜನಿಕಾಂತ್ 169ನೇ ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.

  ಅರೋಗ್ಯದ ಕಾರಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುತ್ತಿಲ್ಲ, ಸಂಪೂರ್ಣವಾಗಿ ಸಿನಿಮಾದಲ್ಲೇ ತೊಡಗಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಜನಿಕಾಂತ್ 169ನೇ ಸಿನಿಮಾದ ಚರ್ಚೆ ಜೋರಾಗಿ ನಡೆಯುತ್ತಿದೆ.

  ಸೂಪರ್ ಸ್ಟಾರ್ 169ನೇ ಸಿನಿಮಾಗೆ ದೊಡ್ಡ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಬಂಡವಾಳ ಹೂಡಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸೂಪರ್ ಸ್ಟಾರ್ ಜೊತೆ 'ಅಣ್ಣಾತೆ' ಸಿನಿಮಾ ಮಾಡುತ್ತಿರುವ ಸನ್ ಪಿಕ್ಚರ್ಸ್, ರಜನಿಕಾಂತ್ 169ನೇ ಸಿನಿಮಾಗೂ ಬಂಡವಾಳ ಹೂಡಲು ಮುಂದಾಗಿದೆ. ಸದ್ಯ ಚಿತ್ರವನ್ನು 'ತಲೈವರ್ 169 'ಎಂದು ಕರೆಯಲಾಗುತ್ತಿದೆ. ಈಗಾಗಲೇ ಸನ್ ಪಿಕ್ಚರ್ಸ್, ರಜನಿಕಾಂತ್ ಜೊತೆ ಮಾತುಕತೆ ಸಹ ನಡೆಸಿದೆ, ಅಲ್ಲದೆ ರಜನಿಕಾಂತ್ ಚಿತ್ರಕ್ಕೆ ಸಹಿ ಮಾಡಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.

  ಈ ಮೊದಲು ಸೂಪರ್ ಸ್ಟಾರ್ ರಜನಿಕಾಂತ್, ತಮಿಳಿನ ಮತ್ತೋರ್ವ ಸ್ಟಾರ್ ಕಮಲ್ ಹಾಸನ್ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಕಮಲ್ ಮತ್ತು ರಜನಿ ಚಿತ್ರಕ್ಕೆ ಯುವ ನಿರ್ದೇಶಕ ಲೋಕೇಶ್ ಕನಗರಾಜ್ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿತ್ತು. ಆದರೀಗ ಕೊರೊನಾ ವೈರಸ್ ಕಾರಣದಿಂದ ಸೂಪರ್ ಸ್ಟಾರ್ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.

  SUPERSTAR SURYA Kannada Short Film Teaser | Rakshit | Praveen | Nikhil | Filmibeat Kannada

  ರಜನಿಕಾಂತ್ ಸದ್ಯ 'ಅಣ್ಣಾತೆ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಶಿವ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕೊರೊನಾ ವೈರಸ್ ಪರಿಣಾಮ ಸಿನಿಮಾ ಚಿತ್ರೀಕರಣ ಸದ್ಯಕ್ಕೆ ನಿಲ್ಲಿಸಲಾಗಿದೆ. ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿರುವ ಸಿನಿಮಾತಂಡ ಹೈದರಾಬಾದ್ ನಲ್ಲಿ ಚಿತ್ರೀಕರಣ ಮಾಡುತ್ತಿದೆ.

  English summary
  Super star Rajinikanth And Sun Pictures To Collaborate For Thalaivar 169 Movie?.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X