ಒಂದೇ ಸಿನಿಮಾದಲ್ಲಿ ಅಪ್ಪ-ಮಗ: ವಿಕ್ರಮ್ 60ನೇ ಸಿನಿಮಾದ ಪೋಸ್ಟರ್ ರಿಲೀಸ್

ತಮಿಳಿನ ಖ್ಯಾತ ನಟ ವಿಕ್ರಮ್ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುವ ನಟ. ವಿಕ್ರಮ್ ಮತ್ತೆ ಯಾವಾಗ ತೆರೆಮೇಲೆ ಬರ್ತಾರೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಸಮಯದಲ್ಲಿ ಚಿಯಾನ್ ಫ್ಯಾನ್ಸ್ ಗೆ ಭರ್ಜರಿ ಸುದ್ದಿ ನೀಡಿದ್ದಾರೆ. ಹೌದು, ವಿಕ್ರಮ್ ಈಗ ಪುತ್ರ ಧ್ರುವ್ ಜೊತೆ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ವಿಕ್ರಮ್ ಪುತ್ರ ಧ್ರುವ್ ಈಗಾಗಲೆ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.

Recommended Video

ಚಿರುಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಸ್ಯಾಂಡಲ್ ವುಡ್ ಸ್ಟಾರ್ ಗಳು ಇವರೇ|Sandalwood Celebrities | Chiru Sarja

ತೆಲುಗಿನ ಸೂಪರ್ ಹಿಟ್ ಅರ್ಜುನ್ ರೆಡ್ಡಿ ಸಿನಿಮಾದ ತಮಿಳು ರಿಮೇಕ್ ನಲ್ಲಿ ಧ್ರುವ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಆಧಿತ್ಯ ವರ್ಮ ಟೈಟಲ್ ನಲ್ಲಿ ಸಿನಿಮಾ ರಿಲೀಸ್ ಆಗಿತ್ತು. ಈಗ ಮತ್ತೆ ಧ್ರುವ್ ಅಪ್ಪನ ಜೊತೆಯೆ ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ. ಅಪ್ಪ-ಮಗನನ್ನು ಒಂದೇ ಸಿನಿಮಾದಲ್ಲಿ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಅಂದ್ಹಾಗೆ ಸದ್ಯ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರಕ್ಕೆ ಸದ್ಯ ಚಿಯಾನ್ 60 ಎಂದು ಹೆಸರಿಡಲಾಗಿದೆ. ಒಂದೆ ಗನ್ ಅನ್ನು ಇಬ್ಬರು ಹಿಡಿದಿರುವ ಪೋಸ್ಟರ್ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅನಿರುದ್ಧ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

Chiyaan Vikrams 60th Movie First Look Poster Release

ಕೊರೊನಾ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. ಮುಂದಿನ ವರ್ಷ 2021 ಸಮ್ಮರ್ ಗೆ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ವಿಕ್ರಮ್ ಸದ್ಯ ಕೋಬ್ರಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ವಿಕ್ರಮ್ ಗೆ ನಾಯಕಿಯಾಗಿ ಕೆಜಿಎಫ್ ಖ್ಯಾತಿಯ ನಟಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನೂ ನಿರ್ದೇಶಕ ಮಣಿರತ್ನಂ ನಿರ್ದೇಶನದ ಸಿನಿಮಾದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

More from Filmibeat

English summary
Kollywood star actor Chiyaan Vikram's 60th movie First look poster release.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X