For Quick Alerts
  ALLOW NOTIFICATIONS  
  For Daily Alerts

  ತೆರೆಮೇಲೆ ತಂದೆ-ಮಗನ ಜುಗಲ್ ಬಂದಿ: ವಿಕ್ರಮ್ ಹೊಸ ಸಿನಿಮಾದಲ್ಲಿ ದೊಡ್ಡ ಬದಲಾವಣೆ

  |

  ತಮಿಳು ಸಿನಿಮಾರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ 60ನೇ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ವಿಶೇಷ ಎಂದರೆ ಸಿನಿಮಾದಲ್ಲಿ ವಿಕ್ರಮ್ ಪುತ್ರ ಧ್ರುವ್ ವಿಕ್ರಮ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ತಂದೆ-ಮಗ ಇಬ್ಬರೂ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದು, ಇಬ್ಬರ ಜುಗಲ್ ಬಂದಿ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ.

  ಧ್ರುವ ವಿಕ್ರಮ್ ಈಗಾಗಲೇ ಒಂದು ಸಿನಿಮಾದಲ್ಲಿ ನಾಯಕನಾಗಿ ಮಿಂಚಿದ್ದಾರೆ. ತೆಲುಗಿನ ಸೂಪರ್ ಹಿಟ್ ಅರ್ಜುನ್ ರೆಡ್ಡಿ ತಮಿಳು ರಿಮೇಕ್ ನಲ್ಲಿ ಧ್ರುವ ನಟಿಸುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ್ದಾರೆ.

  ತಮಿಳು ಸಿನಿಮಾದಲ್ಲಿ ನಟಿಸುವ ಅವಕಾಶ ಕೈಬಿಟ್ಟ ಶಿವರಾಜ್ ಕುಮಾರ್ತಮಿಳು ಸಿನಿಮಾದಲ್ಲಿ ನಟಿಸುವ ಅವಕಾಶ ಕೈಬಿಟ್ಟ ಶಿವರಾಜ್ ಕುಮಾರ್

  ಇದೀಗ ಅಪ್ಪನ ಜೊತೆ ನಟಿಸುವ ಮೂಲಕ 2ನೇ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಅಂದಹಾಗೆ ಅಪ್ಪ-ಮಗನನ್ನು ಒಂದೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಕರೆತರುತ್ತಿದ್ದಾರೆ, ನಿರ್ದೇಶಕ ಕಾರ್ತಿಕ್ ಸುಬ್ಬರಾಜ್. ಇನ್ನು ಟೈಟಲ್ ಫಿಕ್ಸ್ ಆಗಿರದ ಚಿಯಾನ್ ವಿಕ್ರಮ್ 60ನೇ ಸಿನಿಮಾದ ಮುಹೂರ್ತ ಸಮಾರಂಭ ಇಂದು (ಮಾರ್ಚ್10) ನೆರವೇರಿದ್ದು, ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ.

  ಇನ್ನು ವಿಶೇಷ ಎಂದರೆ ಚಿತ್ರದಲ್ಲಿ ದೊಡ್ಡ ಬದಲಾವಣೆಯನ್ನು ಮಾಡಲಾಗಿದೆ. ಸಂಗೀತ ನಿರ್ದೇಶಕ ಅನಿರುದ್ಧ್ ಸಿನಿಮಾದಿಂದ ಹೊರನಡೆದಿದ್ದಾರೆ. ಅನಿರುದ್ಧ್ ಜಾಗಕ್ಕೆ ಮತ್ತೋರ್ವ ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣ್ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಸ್ವತಃ ಸಿನಿಮಾ ತಂಡ ಬಹಿರಂಗ ಪಡಿಸಿದೆ.

  ವಿಕ್ರಮ್ 60ನೇ ಚಿತ್ರದಲ್ಲಿ ನಾಯಕಿಯರಾಗಿ ಇಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ಸಿಮ್ರಾನ್ ಮತ್ತು ವಾಣಿ ಭೋಜನ್ ನಟಿಸುತ್ತಿದ್ದಾರೆ.

  ನನ್ನ ಮಗನಿಗೆ ಎಲ್ಲವೂ ಈಸಿಯಾಗಿ ಸಿಗಬಾರದು ಎಂದ ದರ್ಶನ್ | Filmibeat Kannada

  ವಿಕ್ರಮ್ ಈಗಾಗಲೇ ಕೋಬ್ರಾ ಸಿನಿಮಾದ ಚಿತ್ರೀಕರಣ ಮುಗಿಸಿದ್ದು, ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಕೋಬ್ರಾ ಸಿನಿಮಾದಲ್ಲಿ ನಾಯಕಿಯಾಗಿ ಕನ್ನಡತಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ತಮಿಳು ಜೊತೆಗೆ ತೆಲುಗು ಮತ್ತು ಹಿಂದಿಯಲ್ಲೂ ತೆರೆಗೆ ಬರುತ್ತಿದೆ.

  English summary
  Director Karthik Subbaraj starts shooting for Chiyaan 60. Actor Vikram and his son Dhruv in lead roles.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X