ಕಮಲ್ ಹಾಸನ್ 'ಇಂಡಿಯನ್ 2' ರಿಲೀಸ್ ಆಗೋದ್ಯಾವಾಗ?
ಯುನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಯಶಸ್ಸಿನ ಅಲೆಯಲ್ಲಿ ತೇಲಾಡುತ್ತಿದ್ದಾರೆ. ಈ ವರ್ಷ ಬಿಡುಗಡೆಯಾದ ಕಮಲ್ ಹಾಸನ್ ಸಿನಿಮಾ 'ವಿಕ್ರಂ' ಬಾಕ್ಸಾಫೀಸ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಕಮಲ್ ಹಾಸನ್ ಕರಿಯರ್‌ನಲ್ಲಿ ಅತೀ ಹೆಚ್ಚು ಗಳಿಕೆ ಕಂಡಿತ್ತು.
'ವಿಕ್ರಂ' ಸಿನಿಮಾ ರಿಲೀಸ್ ಆದ ಬಳಿಕ ಅರ್ಧಕ್ಕೆ ನಿಂತಿದ್ದ 'ಇಂಡಿಯನ್ 2' ಮತ್ತೆ ಸೆಟ್ಟೇರಿದೆ. ಶಂಕರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಿಗ್ ಬಜೆಟ್‌ನಲ್ಲಿ ನಿರ್ಮಾಣ ಮಾಡುತ್ತಿದ್ದು, ಇದು ಬಾಕ್ಸಾಫೀಸ್‌ನಲ್ಲಿ ದೊಡ್ಡ ಮಟ್ಟಕ್ಕೆ ಹಿಟ್ ಲಿಸ್ಟ್ ಸೇರಲಿದೆ ಎಂದು ನಂಬಲಾಗುತ್ತಿದೆ.
ಸದ್ಯ ಕಾಲಿವುಡ್‌ನಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ, 'ಇಂಡಿಯನ್ 2' ಸಿನಿಮಾ ದೀಪಾವಳಿ ಹಬ್ಬಕ್ಕೆ ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ ಎನ್ನಲಾಗಿದೆ. 2023 ನವೆಂಬರ್ 10ರಂದು ಸಿನಿಮಾ ರಿಲೀಸ್ ಆಗುತ್ತಿದೆ ಅನ್ನೋದು ಕಾಲಿವುಡ್‌ನಲ್ಲಿ ಹರಿದಾಡುತ್ತಿರುವ ಮಾಹಿತಿ.

ಶಂಕರ್ ಹಾಗೂ ಕಮಲ್ ಹಾಸನ್ ಕಾಂಬಿನೇಷನ್‌ನಲ್ಲಿ ಈ ಹಿಂದೆ ಬಂದ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ಈಗ ಅದರ ಸೀಕ್ವೆಲ್ ಶೂಟಿಂಗ್ ನಡೆಯುತ್ತಿದೆ. ಕೆಲವು ತಿಂಗಳುಗಳ ಹಿಂದಷ್ಟೇ ಸಿನಿಮಾ ಶೂಟಿಂಗ್ ವೇಳೆ ಅಪಘಾತ ನಡೆದಿತ್ತು. ಆ ಬಳಿಕ ಕಮಲ್ ಹಾಸನ್ ಹಾಗೂ ಶಂಕರ್ ಇಬ್ಬರೂ ಸಿನಿಮಾ ಶೂಟಿಂಗ್ ನಿಲ್ಲಿಸಿ, ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡದ್ದರು.
ಲೈಕಾ ಪ್ರೊಡಕ್ಷನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕಮಲ್ ಹಾಸನ್ ಜೊತೆಗೆ ಕಾಜಲ್ ಅಗರ್ವಾಲ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇವರೊಂದಿಗೆ ರಕುಲ್ ಪ್ರೀತ್ ಸಿಂಗ್ ಕೂಡ ಮತ್ತೊಬ್ಬ ನಾಯಕಿಯಾಗಿ ಕಾಣಿಸಿಕೊಳ್ಳಿದ್ದಾರೆ. ಜೊತೆ ದೊಡ್ಡ ತಾರಾಗಣವೇ ಇರುವ 'ಇಂಡಿಯನ್ 2' ಬ್ಲಾಕ್ ಬಸ್ಟರ್ ಲಿಸ್ಟ್ ಸೇರಲಿದೆ ಎನ್ನಲಾಗಿದೆ.
'ವಿಕ್ರಂ' ಬಳಿಕ ಕಮಲ್ ಹಾಸನ್ ಸಿನಿಮಾ ಮೇಲೆ ನಿರೀಕ್ಷೆಗಳು ದುಪ್ಪಟ್ಟಾಗಿದೆ. ಅಲ್ಲದೆ ಶಂಕರ್ ನಿರ್ದೇಶನ ಅಂದ ಮೇಲಂತೂ ಈ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಈ ಕಾರಣಕ್ಕೆ 'ಇಂಡಿಯನ್ 2' ಬಿಡುಗಡೆಗೆ ಕಮಲ್ ಹಾಸನ್ ಅಭಿಮಾನಿಗಳು ಕಾದು ಕೂತಿದ್ದಾರೆ. ಅನಿರುದ್ಧ್ ಈ ಸಿನಿಮಾಗೆ ಟ್ಯೂನ್ ಹಾಕುತ್ತಿದ್ದಾರೆ.


Click it and Unblock the Notifications











