For Quick Alerts
  ALLOW NOTIFICATIONS  
  For Daily Alerts

  2021ರಲ್ಲಿ ತಮಿಳುನಾಡು ಚುನಾವಣೆ: ಚುರುಕುಗೊಂಡ ಕಮಲ್ ಹಾಸನ್

  |

  ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತಮಿಳುನಾಡಿನ ಪ್ರಭಾವಿ ನಾಯಕರಾದ ಜಯಲಲಿತಾ ಮತ್ತು ಕರುಣಾನಿಧಿ ಇಲ್ಲದೇ ಮೊದಲ ವರ್ಷ ಎಲೆಕ್ಷನ್ ನಡೆಯಲಿದೆ.

  ಈ ಮಧ್ಯೆ ನಟ ರಜನಿಕಾಂತ್ ಮತ್ತು ಕಮಲ್ ಹಾಸನ್ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಈ ಎಲ್ಲ ಕಾರಣಗಳಿಂದ ಚುನಾವಣೆ ಕಣ ಭಾರಿ ಕುತೂಹಲ ಮೂಡಿಸಲಿದೆ.

  ನವೆಂಬರ್ 7ಕ್ಕೆ ಕಮಲ್ ಹಾಸನ್ 232ನೇ ಚಿತ್ರದ ಫಸ್ಟ್ ಲುಕ್!

  ಇದೀಗ, ಮಕ್ಕಳ್ ನೀಧಿ ಮೈಯಮ್ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಸೋಮವಾರ ಚೆನ್ನೈನ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದಾರೆ.

  ಚುನಾವಣೆ ಹಿನ್ನೆಲೆ ತಯಾರಿ ಹಾಗೂ ಅಭ್ಯರ್ಥಿಗಳ ಆಯ್ಕೆಯ ಕುರಿತು ಈಗಿನಿಂದಲೇ ಸಿದ್ಧತೆ ಮಾಡಬೇಕಾಗಿ ಸಭೆಯಲ್ಲಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಪಕ್ಷದ ಹಾಗೂ ಗುರಿ ಉದ್ದೇಶಗಳ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಪ್ರಚಾರ ಸಹ ಕೈಗೊಳ್ಳಲಿದ್ದಾರೆ. ಅದಕ್ಕಾಗಿ ವಿಶೇಷ ವಾಹನ ಸಹ ಸಿದ್ಧವಾಗಿದೆ.

  Nayanthara with makeup, without makeup collection | FFilmibeat Kannada

  2018ರಲ್ಲಿ ರಾಜಕೀಯ ಪಕ್ಷ ಸ್ಥಾಪಿಸಿದ ಕಮಲ್ ಹಾಸನ್ 2019ರ ಲೋಕಸಭೆ ಚುನಾವಣೆಯಲ್ಲಿ 39 ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ನಿಲ್ಲಿಸಿದ್ದರು. 22 ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಸಿದ್ದರು.

  English summary
  Makkal Needhi Maiam (MNM) President Kamal Haasan held meeting with party District Secretaries in Chennai.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X