ಗೆಳೆಯನ ಹುಟ್ಟುಹಬ್ಬಕ್ಕೆ ಮನಸಾರೆ ಶುಭಕೋರಿದ ಕಮಲ್ ಹಾಸನ್

ಸೂಪರ್ ಸ್ಟಾರ್ ರಜನಿಕಾಂತ್ 69ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳು ಗೆಳೆಯರಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ರಜನಿ ಆಪ್ತ ಗೆಳೆಯ ಕಮಲ್ ಹಾಸನ್ ಅವರು ರಜನಿಕಾಂತ್ ಹುಟ್ಟುಹಬ್ಬಕ್ಕೆ ಟ್ವಿಟ್ಟರ್ ಮೂಲಕ ವಿಶ್ ಮಾಡಿದ್ದಾರೆ.

ಟ್ವಿಟ್ಟರ್ ನಲ್ಲಿ ಶುಭ ಕೋರಿರುವ ಕಮಲ್ ''ನನ್ನ ಆತ್ಮೀಯ ಗೆಳೆಯ ರಜನಿಕಾಂತ್ ಅವರು ಆರೋಗ್ಯ ಮತ್ತು ಸಂತೋಷವಾಗಿರಲಿ'' ಎಂದು ಬರೆದುಕೊಂಡಿದ್ದಾರೆ.

ಕಮಲ್ ಹಾಸನ್ ಮತ್ತು ರಜನಿಕಾಂತ್ ಇಬ್ಬರು ಬಹುತೇಕ ಒಂದೇ ಸಮಯದಲ್ಲಿ ಇಂಡಸ್ಟ್ರಿಗೆ ಬಂದರು. ಜೊತೆ ಜೊತೆಯಲ್ಲೇ ಬೆಳೆದು ಈಗ ವಿಶ್ವಮಟ್ಟದಲ್ಲಿ ಅಭಿಮಾನಿಗಳನ್ನು ಸಂಪಾದಿಸಿ ಗ್ಲೋಬಲ್ ಸ್ಟಾರ್ ಗಳು ಎನಿಸಿಕೊಂಡಿದ್ದಾರೆ.

Kamal Hassan Wished Rajinikanth Birthday

ರಜನಿಕಾಂತ್ ನಟಿಸಿರುವ ದರ್ಬಾರ್ ಸಿನಿಮಾ 2020ರ ಸಂಕ್ರಾಂತಿ ಹಬ್ಬಕ್ಕೆ ತೆರೆಕಾಣಲಿದೆ. ಎರಡು ದಶಕದ ಬಳಿಕ ರಜನಿಕಾಂತ್ ಪೊಲೀಸ್ ಆಫೀಸರ್ ಆಗಿ ನಟಿಸಿದ್ದಾರೆ.

ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನ ನಿರ್ಮಿಸಿದ್ದು, ಸ್ಟಾರ್ ನಿರ್ದೇಶಕ ಎ ಆರ್ ಮುರುಗದಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಅನಿರುದ್ಧ ರವಿಚಂದ್ರನ್ ಸಂಗೀತ ನೀಡಿದ್ದಾರೆ.

ತಲೈವಾ ತಮ್ಮ ಮುಂದಿನ ಸಿನಿಮಾವನ್ನ ಸನ್ ಪಿಕ್ಚರ್ಸ್ ಜೊತೆ ಮಾಡುತ್ತಿದ್ದು, ಶಿವ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರ ಅಧಿಕೃತವಾಗಿ ಆರಂಭವಾಗಿದ್ದು, ಖುಷ್ಬೂ, ಮೀನಾ, ಕೀರ್ತಿ ಸುರೇಶ್, ಪ್ರಕಾಶ್ ರೈ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

More from Filmibeat

English summary
Tamil Super star Kamal Haasan has wish to his close freind Rajinikanth birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X