For Quick Alerts
  ALLOW NOTIFICATIONS  
  For Daily Alerts

  'ತಲೈವಿ' ಎಂಟ್ರಿಗೆ ಕೊನೆಗೂ ದಿನಾಂಕ ಫಿಕ್ಸ್; ಹೊಸ ಬಿಡುಗಡೆ ದಿನಾಂಕ ಘೋಷಣೆ

  |

  ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇತ್ತೀಚಿಗೆ ಸಿನಿಮಾ ವಿಚಾರವಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಸದಾ ವಿವಾದಗಳ ಮೂಲಕ ಸದ್ದು ಮಾಡುತ್ತಿದ್ದ ಕಂಗನಾ ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾ ಸುದ್ದಿಗಳನ್ನು ಅಭಿಮಾನಿಗಳಿಗೆ ನೀಡುತ್ತಿದ್ದಾರೆ. ಇತ್ತೀಚಿಗಷ್ಟೆ ತೇಜಸ್ ಸಿನಿಮಾದ ಹೊಸ ಲುಕ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದ ಕಂಗನಾ ಇದೀಗ ಮತ್ತೊಂದು ಭರ್ಜರಿ ಸುದ್ದಿ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.

  ಕಂಗನಾ ನಟನೆಯ ಬಹುನಿರೀಕ್ಷೆಯ ತಲೈವಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಏಪ್ರಿಲ್ ತಿಂಗಳಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಹೆಚ್ಚಾದ ಕಾರಣ ಚಿತ್ರಮಂದಿರಗಳನ್ನು ಬಂದ್ ಮಾಡಲಾಯಿತು. ಹಾಗಾಗಿ ಬಂದ ವೇಗದಲ್ಲೇ ತಲೈವಿ ವಾಪಸ್ ಆಗಿತ್ತು. ತಲೈವಿ ದರ್ಶನ ಯಾವಾಗ ಎಂದು ಕಾದುಕುಳಿತಿದ್ದ ಅಭಿಮಾನಿಗಳಿಗೀಗ ಸಂತಸದ ಸುದ್ದಿ ಹೊರ ಬಿದ್ದಿದೆ. ಕೊನೆಗೂ ತಲೈವಿ ಎಂಟ್ರಿಗೆ ದಿನಾಂಕ ಫಿಕ್ಸ್ ಆಗಿದೆ.

  ತಲೈವಿ ಸಿನಿಮಾ ನಿಷೇಧಿಸಿ ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಕೋರ್ಟ್ತಲೈವಿ ಸಿನಿಮಾ ನಿಷೇಧಿಸಿ ಎಂದು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಕೋರ್ಟ್

  ಬಹುನಿರೀಕ್ಷೆಯ ತಲೈವಿ ಸಿನಿಮಾ ಸೆಪ್ಟಂಬರ್ 10ಕ್ಕೆ ತೆರೆಗೆ ಬರುತ್ತಿದೆ. ಈ ಬಗ್ಗೆ ಸಿನಿಮಾತಂಡ ಅಧಿಕೃತವಾಗಿ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಟ್ವಿಟ್ಟರ್ ನಿಂದ ಬ್ಯಾನ್ ಆಗಿರುವ ಕಂಗನಾ ಸಿನಿಮಾದ ಬಗ್ಗೆ ಮಾಹಿತಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. "ಅಪ್ರತಿಮ ವ್ಯಕ್ತಿಯ ಕಥೆಯನ್ನು ಬಿಗ್ ಸ್ಕ್ರೀನ್ ನಲ್ಲಿ ನೋಡಲು ಮಾತ್ರ ಅರ್ಹವಾಗಿದೆ. ಸೆಪ್ಟಂಬರ್ 10ಕ್ಕೆ ತಲೈವಿ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಬರಲಿದೆ" ಎಂದು ಕಂಗನಾ ಬರೆದುಕೊಂಡಿದ್ದಾರೆ.

  ಎಲ್ ವಿಜಯ್ ಸಾರಥ್ಯದಲ್ಲಿ ಮೂಡಿಬಂದಿರುವ ತಲೈವಿ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟ್ರೈಲರ್ ಮೂಲಕ ಅಭಿಮಾನಿಗಳ ಗಮನ ಸೆಳೆದಿತ್ತು. ಚಿತ್ರಕ್ಕೆ ಕೆ.ವಿ ವಿಜಯೇಂದ್ರ ಪ್ರಸಾದ್ ಚಿತ್ರಕಥೆ ಬರೆದಿದ್ದಾರೆ. ಇದೀಗ ಸಿನಿಮಾ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಚಿತ್ರದಲ್ಲಿ ಕಂಗನಾ ಜಲಯಲಿತಾ ಆಗಿ ಮಿಂಚಿದ್ದಾರೆ. ಕಂಗನಾ ಲುಕ್ ಈಗಾಗಲೇ ಅಭಿಮಾನಿಗಳ ಮೆಚ್ಚುಗೆ ಪಡೆದಿದೆ. ಕಂಗನಾ ವಿವಿದ ಅವತಾರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಕಂಗನಾ ಜೊತೆ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ.

  ನಟಿ ಕಂಗನಾ ಇತ್ತೀಚಿಗಕಷ್ಟೆ ಧಾಕಡ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಯೂರೋಪ್ ನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿದ ಸಿನಿಮಾತಂಡ ಪಾರ್ಟಿಯಲ್ಲಿ ಭಾಗಿಯಾಗಿತ್ತು. ಧಾಕಡ್ ಕೊನೆಯ ದಿನದ ಪಾರ್ಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಂಗನಾ ಸದ್ಯ ತೇಜಸ್ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಕಂಗನಾ ವಾಯುಸೇನೆಯ ಪೈಲೆಟ್ ಆಗಿ ಕಾಣಿಸಿಕೊಂಡಿದ್ದಾರೆ.

  English summary
  Kangana Ranaut starrer J.Jayalalitha biopic Thalaivi will set to release on September 10.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X