ತೆರಿಗೆ ಬೇಡಿಕೆ ವಿರುದ್ಧ ರಜನಿಕಾಂತ್ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್
ಗ್ರೇಟರ್ ಚೆನ್ನೈ ಕಾರ್ಪೋರೇಷನ್ 6.50 ಲಕ್ಷ ತೆರೆಗೆ ಬೇಡಿಕೆ ಪ್ರಶ್ನಿಸಿ ರಜನಿಕಾಂತ್ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈ ಕೋರ್ಟ್ ಬುಧವಾರ ತಿರಸ್ಕರಿಸಿದೆ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗುವುದು ಎಂದು ರಜನಿಕಾಂತ್ ಪರ ವಕೀಲರಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.
ಚೆನ್ನೈ ಕಾರ್ಪೋರೇಷನ್ ನಿಯಮವನ್ನು ಪಾಲಿಸುವಂತೆ ಕೋರ್ಟ್ ಸೂಚಿಸಿದೆ. ಚೆನ್ನೈ ಕಾರ್ಪೋರೇಷನ್ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗೆ ಅರ್ಧ ವರ್ಷ ಅವಧಿಗೆ ತೆರಿಗೆ ನೋಟಿಸ್ ನೀಡಿದೆ. ಕೊರೊನಾ ವೈರಸ್ ಲಾಕ್ ಡೌನ್ ನಿಂದ ಮಾರ್ಚ್ 24ರಿಂದ ಮದುವೆ ಹಾಲ್ ಖಾಲಿಯಾಗಿದೆ. ಯಾವುದೇ ಆದಾಯವಿಲ್ಲ. ಇಷ್ಟು ತೆರೆಗೆ ಕಟ್ಟುವುದು ಹೇಗೆ ಎಂದು ರಜನಿಕಾಂತ್ ಪರ ವಕೀಲರು ಮನವಿಯಲ್ಲಿ ತಿಳಿಸಿದ್ದರು.
'ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದೇವೆ. ಕೊನೆಯದಾಗಿ ಫೆಬ್ರವರಿ 14ರಂದು ತೆರೆಗೆ ಪಾವತಿಸಲಾಗಿದೆ. ಲಾಕ್ ಡೌನ್ ಗೂ ಮೊದಲು ಹಾಲ್ ಬುಕ್ ಮಾಡಿದ್ದ ಜನರಿಗೆ ಸರ್ಕಾರದ ಆದೇಶದಂತೆ ಹಣ ಮರುಪಾವತಿಸಿದ್ದೇವೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದರು. ಸೂಪರ್ ಸ್ಟಾರ್ ತಮ್ಮ ವಕೀಲ ವಿಜಯನ್ ಸುಬ್ರಮಣಿಯನ್ ಮೂಲಕ ಮನವಿ ಸಲ್ಲಿಸಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ ರಜನಿಕಾಂತ್ ಸದ್ಯ ಅಣ್ಣಾತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ ಡೌನ್ ಬಳಿಕ ಇನ್ನೂ ಚಿತ್ರೀಕರಣ ಪ್ರಾರಂಭ ಮಾಡಿಲ್ಲ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಮತ್ತೆ ಚಿತ್ರೀಕರಣಕ್ಕೆ ಹೊರಡಲು ಸಜ್ಜಾಗುತ್ತಿದೆ. ನವೆಂಬರ್ ನಿಂದ ಅಣ್ಣಾತೆ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.


Click it and Unblock the Notifications











