For Quick Alerts
  ALLOW NOTIFICATIONS  
  For Daily Alerts

  ರಜನಿಕಾಂತ್‌ಗೆ ದಾದಾ ಸಹೇಬ್ ಫಾಲ್ಕೆ: ಅಪಾರ ಸಂತೋಷದ ಸಂಗತಿ ಎಂದ ಪ್ರಧಾನಿ ಮೋದಿ

  |

  ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ. 2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ.

  Thalaiva Rajnikanth ಗೆ ಒಲಿಯಿತು ಶ್ರೇಷ್ಠ Dada Saheb Phalke ಪ್ರಶಸ್ತಿ | Filmibeat Kannada

  ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.

  ಸೂಪರ್ ಸ್ಟಾರ್ ರಜನಿಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಸೂಪರ್ ಸ್ಟಾರ್ ರಜನಿಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

  ಇನ್ನು ತಲೈವಾಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. 'ತಲೆಮಾರುಗಳಾದ್ಯಂತ ಜನಪ್ರಿಯವಾಗಿರುವ, ಕೆಲವರ ಕೆಲಸ ಹೆಮ್ಮೆಪಡುವಂತೆ ಮಾಡುತ್ತೆ, ವೈವಿಧ್ಯಮಯ ಪಾತ್ರಗಳು ಮತ್ತು ಪ್ರೀತಿಯ ವ್ಯಕ್ತಿತ್ವ ಅದು ಶ್ರೀ ರಜನಿಕಾಂತ್ ಅವರು.'

  'ತಲೈವಾ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿರುವುದು ಆಪಾರ ಸಂತೋಷದ ಸಂಗತಿ. ಅವರಿಗೆ ಅಭಿನಂದನೆಗಳು' ಎಂದಿದ್ದಾರೆ.

  ಇನ್ನು ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿ, 'ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದಿದ್ದಾರೆ.

  ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಹೆಸರಿನಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.

  English summary
  Prime Minister Narendra Modi congratulates Superstar Rajinikanth for Dada Saheb Phalke Award honour.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X