ಚುನಾವಣೆ ಮುಗಿದ ಬಳಿಕ ಮತ್ತೆ ಚಿತ್ರೀಕರಣಕ್ಕೆ ಹೊರಟ ಸೂಪರ್ ಸ್ಟಾರ್ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಮತ್ತೆ ಚಿತ್ರೀಕರಣಕ್ಕೆ ಹೊರಟಿದ್ದಾರೆ. ತಮಿಳುನಾಡಿನ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಜನಿಕಾಂತ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಬಹುನಿರೀಕ್ಷೆಯ ಅಣ್ಣಾತೆ ಸಿನಿಮಾದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯುತ್ತಿದೆ.
ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ ಕಳೆದ ಡಿಸೆಂಬರ್ ನಲ್ಲಿ ಕೆಲವು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಬಳಿಕ ಮತ್ತೆ ಚಿತ್ರೀಕರಣ ಸ್ಥಗಿತಗೊಳಿಸಲಾಗಿತ್ತು. ಅದೇ ಸಮಯದಲ್ಲಿ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಕೆಲವು ದಿನಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.
ಕಳೆದ ತಿಂಗಳು ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿದ್ದ ಸಿನಿಮಾತಂಡ ಕೊಂಚ ಬ್ರೇಕ್ ಪಡೆದಿತ್ತು. ಇದೀಗ ಚುನಾವಣೆ ಮುಗಿಸಿ ಮತ್ತೆ ಶೂಟಿಂಗ್ ಶುರುಮಾಡಿದ್ದು ಸೂಪರ್ ಸ್ಟಾರ್ ಹೈದರಾಬಾದ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಬಹಿರಂಗ ಮಾಡಲಾಗಿದೆ. ಸಿನಿಮಾ ನವೆಂಬರ್ 14ರಂದು ತೆರೆಗೆ ಬರುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಆದ ಬಳಿಕ ಚಿತ್ರೀಕರಣ ಬೇಗ ಮುಗಿಸಲು ಸಿನಿಮಾತಂಡ ಪ್ಲಾನ್ ಮಾಡಿದೆ.

ಸದ್ಯ ರಜನಿಕಾಂತ್ ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ತೆರಳಿದ್ದಾರೆ. ಚಿತ್ರದಲ್ಲಿ ನಾಯಕಿಯರಾಗಿ ನಯನತಾರಾ, ಖುಷ್ಬೂ, ಮೀನಾ ಮತ್ತು ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಕೊರೊನಾ ಮುನ್ನಚ್ಚರಿಯೊಂದಿಗೆ ಚಿತ್ರೀಕರಣದಲ್ಲಿ ಇಡೀ ತಂಡ ಭಾಗಿಯಾಗಿದೆ.
ಈಗಾಗಲೇ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಸೂಪರ್ ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸದ್ಯದಲ್ಲೇ ಹೈದರಾಬಾದ್ ಚಿತ್ರೀಕರಣ ಮುಗಿಸಿ ಚೆನ್ನೈಗೆ ವಾಪಸ್ ಆಗಲಿದ್ದಾರೆ.


Click it and Unblock the Notifications











