ರಜನಿಕಾಂತ್ ನಟನೆಯ 'ಅನ್ನಾತೆ' ಚಿತ್ರದ ಬಿಡುಗಡೆ ದಿನಾಂಕ ನಿಗದಿ
ರಜನಿಕಾಂತ್ ನಟನೆಯ ಬಹು ನಿರೀಕ್ಷಿತ 'ಅನ್ನಾತೆ' ಚಿತ್ರದ ಬಿಡುಗಡೆ ದಿನಾಂಕವನ್ನು ನಿರ್ಮಾಣ ಸಂಸ್ಥೆ ಪ್ರಕಟಿಸಿದೆ. ಕೆಲವು ನಿರ್ದಿಷ್ಟ ನಿಬಂಧನೆಗಳೊಂದಿಗೆ ಸಿನಿಮಾಗಳ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮೇ 12ರಿಂದ ಆರಂಭಿಸಬಹುದು ಎಂದು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಮಂಗಳವಾರದಿಂದ ಚಿತ್ರರಂಗದ ವಿವಿಧ ಚಟುವಟಿಕೆಗಳು ಆರಂಭವಾಗಿದೆ.
Recommended Video
ರಜನಿಕಾಂತ್ ನಟನೆಯ 'ಅನ್ನಾತೆ' ಚಿತ್ರವನ್ನು 2021ರ ಪೊಂಗಲ್ ಹಬ್ಬದ ವೇಳೆ ತೆರೆಗೆ ತರುವುದಾಗಿ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಅಧಿಕೃತ ಘೋಷಣೆ ಮಾಡಿದೆ. ಈ ಬಗ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಅದು ವಿಡಿಯೋವೊಂದನ್ನು ಪ್ರಕಟಿಸಿದ್ದು, ಸಿನಿಮಾ ಬಿಡುಗಡೆಯ ದಿನಾಂಕವನ್ನು ಖಚಿತಪಡಿಸಿದೆ.

ಲಾಕ್ ಡೌನ್ ಆರಂಭಕ್ಕೂ ಕೆಲವು ದಿನಗಳ ಮುನ್ನವಷ್ಟೇ ಚಿತ್ರತಂಡ, ಫಸ್ಟ್ ಲುಕ್ ಪೋಸ್ಟರ್‌ಅನ್ನು ಬಿಡುಗಡೆ ಮಾಡಿತ್ತು. ಸಿರುತೈ ಶಿವ ನಿರ್ದೇಶನದ ಚಿತ್ರದಲ್ಲಿ ಖುಷ್ಬೂ, ನಯನತಾರಾ, ಕೀರ್ತಿ ಸುರೇಶ್, ಮೀನಾ, ಪ್ರಕಾಶ್ ರಾಜ್, ಸೂರಿ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಕಳೆದ ವರ್ಷದ ಡಿಸೆಂಬರ್‌ನಲ್ಲಿ ಈ ಚಿತ್ರ ಸೆಟ್ಟೇರಿತ್ತು. ಹೈದರಾಬಾದ್‌ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಕೆಲವು ಪ್ರಮುಖ ಭಾಗಗಳನ್ನು ಚಿತ್ರೀಕರಿಸಲಾಗಿತ್ತು. ಕೀರ್ತಿ ಸುರೇಶ್ ಈ ಚಿತ್ರದಲ್ಲಿ ರಜನಿಕಾಂತ್ ಮಗಳ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ.


Click it and Unblock the Notifications











