Don't Miss!
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- Sports
ಟಿ20 ವಿಶ್ವಕಪ್ ಗೆದ್ದ ಶಫಾಲಿ ವರ್ಮಾ ಪಡೆಗೆ ಬಿಸಿಸಿಐ ಸನ್ಮಾನ: 5 ಕೋಟಿ ರುಪಾಯಿ ಬಹುಮಾನ
- News
ತಂಬಾಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಧಿಕಾರಿ ತೆಗೆದುಕೊಂಡ ಕ್ರಮಗಳು, ಇಲ್ಲಿದೆ ವಿವರ
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ತೆಲುಗು ನಟನ ಜೊತೆ ನಟಿ ಸಂಜನಾ ಗಲ್ರಾನಿ ಸಹೋದರಿ ಡೇಟಿಂಗ್?
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ. ಕನ್ನಡ ಸಿನಿಮಾಗಳಿಗಿಂತ ಹೆಚ್ಚಾಗಿ ನಿಕ್ಕಿ ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳಿನಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿರುವ ನಿಕ್ಕಿ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.
Recommended Video
ನಟಿ ನಿಕ್ಕಿ ಗಲ್ರಾನಿ ಪ್ರೀತಿಯಲ್ಲಿ ಬಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಅಲ್ಲದೆ ಸದ್ಯದಲ್ಲೇ ಮದುವೆಯಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ. ಅಂದ್ಹಾಗೆ ನಿಕ್ಕಿ ಹೃದಯ ಕದ್ದ ಚೋರ ತೆಲುಗು ನಟ ಆದಿ ಪಿಣಿಶೆಟ್ಟಿ. ಕೆಲವು ವರ್ಷಗಳಿಂದ ನಿಕ್ಕಿ ಮತ್ತು ಆದಿ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು, ಇಬ್ಬರು ಮದುವೆಯಾಗಲು ನಿರ್ಧರಿಸಿದ್ದಾರೆ ಎನ್ನುವ ಮಾತು ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಮುಂದೆ ಓದಿ...

ಮದುವೆ ಆಗಲು ನಿರ್ಧರಿಸಿರುವ ನಿಕ್ಕಿ
ನಿಕ್ಕಿ ಮತ್ತು ಅದಿ ಇಬ್ಬರು 2016ರಲ್ಲಿ ರಿಲೀಸ್ ಆದ 'ಮಲಪು' ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಸಿನಿಮಾ ನಂತರ ಇಬ್ಬರು ಉತ್ತಮ ಸ್ನೇಹಿತರಾಗಿದ್ದರು. ಇದೆ ಸ್ನೇಹ ಪ್ರೀತಿಗೆ ತಿರುಗಿ ಈಗ ಮದುವೆ ಆಗಲು ನಿರ್ಧರಿಸಿದ್ದಾರಂತೆ. ಅಲ್ಲದೆ ಇಬ್ಬರ ಮದುವೆಗೆ ಎರಡು ಕುಟುಂಬದವರ ಒಪ್ಪಿಗೆಯೂ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದ ನಟಿ
ಇಬ್ಬರ ಪ್ರೀತಿ ಪ್ರೇಮದ ವಿಚಾರ ದಿಢೀರನೆ ಸದ್ದು ಮಾಡಲು ಕಾರಣ, ಇತ್ತೀಚಿಗೆ ಆದಿ ತಂದೆಯ ಹುಟ್ಟುಹಬ್ಬದ ಸಂಭ್ರಮಾಚರಣೆ. ಆದಿ ತಂದೆ ರವಿ ರಾಜ ಪಿಣಿಶೆಟ್ಟಿ ಕೂಡ ಚಿತ್ರರಂಗದಲ್ಲಿ ಆಕ್ವೀಟ್ ಆಗಿದ್ದಾರೆ. ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚಿಗೆ ರವಿರಾಜ್ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಕ್ಕಿ ಕಾಣಿಸಿಕೊಂಡಿದ್ದರು.

ಬೆಂಗಳೂರಿನಿಂದ ಚೆನ್ನೈಗೆ ಹೋಗಿದ್ದ ನಿಕ್ಕಿ
ಆದಿ ಕುಟುಂಬದವರು ಬಿಟ್ಟರೆ ಬೇರೆ ಯಾರು ಹುಟ್ಟುಹಬ್ಬದ ಸಂಭ್ರಮದಲ್ಲಿ ಇರಲಿಲ್ಲ. ಆದರೆ ನಿಕ್ಕಿ ಕಾಣಿಸಿಕೊಂಡಿರುವುದು ಅನುಮಾನಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಿದ್ದಂತೆ ಆಗಿದೆ. ಅಲ್ಲದೆ ಲಾಕ್ ಡೌನ್ ನಲ್ಲಿ ನಟಿ ನಿಕ್ಕಿ ಗಲ್ರಾನಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆದರೆ ಆದಿ ತಂದೆಯ ಹುಟ್ಟುಹಬ್ಬಕ್ಕಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಿದ್ದಾರೆ. ಹಾಗಾಗಿ ನಡುವಿನ ಪ್ರೀತಿ ವಿಚಾರ ಮತ್ತಷ್ಟು ಸದ್ದು ಮಾಡಲು ಕಾರಣವಾಗಿದೆ. ಈ ಬಗ್ಗೆ ನಿಕ್ಕಿ ಆಗಲಿ ಅಥವಾ ಆದಿ ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

ನಿಕ್ಕಿ ಗಲ್ರಾನಿ ಸಿನಿಮಾಗಳು
ನಿಕ್ಕಿ ಗಲ್ರಾನಿ ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲಿಯೂ ನಟಿಸಿದ್ದಾರೆ. 1983 ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಿಕ್ಕಿ ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡದಲ್ಲಿ ಅಜಿತ್, ಜಂಬೂ ಸವಾರಿ, ಸಿದ್ಧಾರ್ಥ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಮಲಯಾಳಂನ ಒಂದು ಸಿನಿಮಾ ಮತ್ತು ತಮಿಳಿನ ರಾಜವಂಶಂ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.