Don't Miss!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- News
7th Pay Commission DA: ನೌಕರರಿಗೆ 18 ತಿಂಗಳ ಬಾಕಿ DA ಹಣ ಎಷ್ಟು ಕಂತುಗಳಲ್ಲಿ ಸಿಗಲಿದೆ? ತಿಳಿಯಿರಿ
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
"ಯಾರ್ ಮಗ ಅವ್ರು, ನಟನೆ ಬಗ್ಗೆ ದೂಸ್ರಾ ಮಾತಿಲ್ಲ, KGF, ಕಾಂತಾರ ನಂತರ ವೇದ": ತಮಿಳು ಪ್ರೇಕ್ಷಕರು ಹೇಳಿದಿಷ್ಟು!
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 'ವೇದ' ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣ್ತಿದೆ. ಸಿನಿಮಾ ತಮಿಳಿಗೂ ಡಬ್ ಆಗಿ ಭಾರೀ ಸದ್ದು ಮಾಡ್ತಿದೆ. ಶಿವಣ್ಣ ನಟನೆಯನ್ನು ತಮಿಳು ಪ್ರೇಕ್ಷಕರು ಮೆಚ್ಚಿ ಕೊಂಡಾಡುತ್ತಿದ್ದಾರೆ.
ನಿಧಾನವಾಗಿ ಕನ್ನಡ ಸಿನಿಮಾಗಳು ತಮಿಳುನಾಡಿನಲ್ಲಿ ಸದ್ದು ಮಾಡಲು ಶುರು ಮಾಡಿವೆ. 'KGF', '777 ಚಾರ್ಲಿ', 'ಕಾಂತಾರ' ನಂತರ 'ವೇದ' ಚಿತ್ರಕ್ಕೂ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಕನ್ನಡ ಮಾತ್ರವಲ್ಲದೇ ತಮಿಳು ಭಾಷೆಗೂ ಸಿನಿಮಾ ಡಬ್ ಆಗಿ ರಿಲೀಸ್ ಆಗಿದೆ. ಶಿವಣ್ಣ ತಮಿಳಿನ 'ಜೈಲರ್' ಚಿತ್ರದಲ್ಲಿ ನಟಿಸ್ತಿದ್ದಾರೆ. ಹಾಗಾಗಿ ಸೆಂಚುರಿ ಸ್ಟಾರ್ 'ವೇದ' ಸಿನಿಮಾವನ್ನು ಪ್ರೇಕ್ಷಕರು ಕುತೂಹಲದಿಂದ ನೋಡುತ್ತಿದ್ದಾರೆ. ಸಿನಿಮಾ ಮೇಕಿಂಗ್, ಶಿವಣ್ಣನ ಪರ್ಫಾರ್ಮೆನ್ಸ್ ಹೀಗೆ ಪ್ರತಿಯೊಂದು ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ತಮಿಳು ನೇಟಿವಿಟಿಗೂ 'ವೇದ' ಸಿನಿಮಾ ಹೊಂದಿಕೆ ಆಗುವುದರಿಂದ ಸಹಜವಾಗಿಯೇ ಪ್ರೇಕ್ಷಕರನ್ನು ಸೆಳೆಯುತ್ತಿದೆ.
'ಕಾಂತಾರ
2'
ನೋಡಿದ
ಹಾಗಾಯ್ತು;
'ವೇದ'
ಚಿತ್ರಕ್ಕೆ
ತಮಿಳು
ಪ್ರೇಕ್ಷಕರ
ಜೈಕಾರ!
ಎ. ಹರ್ಷ ನಿರ್ದೇಶನದ ಆಕ್ಷನ್ ಎಂಟರ್‌ಟೈನರ್ 'ವೇದ' ಭಾರೀ ಸದ್ದು ಮಾಡ್ತಿದೆ. ವೀಕೆಂಡ್‌ನಲ್ಲಿ ಸಿನಿಮಾ ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ಶಿವಣ್ಣನ ಪಾತ್ರಕ್ಕೆ ಮಾತ್ರವಲ್ಲದೇ ಎಲ್ಲಾ ಪಾತ್ರಗಳಿಗೂ ಪ್ರಾಮುಖ್ಯತೆ ಇದ್ದು ಎಲ್ಲರೂ ಪೈಪೋಟಿಗೆ ಬಿದ್ದು ನಟಿಸಿದ್ದಾರೆ. ಎಲ್ಲಾ ವಿಭಾಗಗಳಲ್ಲೂ ಸಿನಿಮಾ ಒಳ್ಳೆ ಅಂಕ ಗಿಟ್ಟಿಸಿದೆ.

ತಮಿಳು ಪ್ರೇಕ್ಷಕರ ಬಹುಪರಾಕ್
ಒಂದ್ಕಾಲದಲ್ಲಿ ಕನ್ನಡ ಸಿನಿಮಾಗಳು ತಮಿಳುನಾಡಿನಲ್ಲಿ ರಿಲೀಸ್ ಆಗುವುದೇ ದೊಡ್ಡ ಸಾಹಸ ಎನ್ನುವಂತಿತ್ತು. ಪ್ಯಾನ್ ಇಂಡಿಯಾ ಟ್ರೆಂಡ್ ನಡೀತಿದ್ದು, ಒಳ್ಳೆ ಸಿನಿಮಾಗಳು ಭಾಷೆಯ ಗಡಿಮೀರಿ ಪ್ರೇಕ್ಷಕರನ್ನು ಸೆಳೀತಿದೆ. KGF, ಕಾಂತಾರ ನಂತರ ವೇದ ಚಿತ್ರಕ್ಕೂ ಉತ್ತಮ ಪ್ರತಿಕ್ರಿಯೆ ಸಿಕ್ತಿದೆ. ಕೆಲವೇ ಸ್ಕ್ರೀನ್‌ಗಳಲ್ಲಿ 'ವೇದ' ಸಿನಿಮಾ ರಿಲೀಸ್ ಆಗಿದ್ದರೂ ನಿಧಾನವಾಗಿ ಪ್ರೇಕ್ಷಕರನ್ನು ಸಿನಿಮಾ ಸೆಳೆಯುತ್ತಿದೆ. 'ವೇದ' ಶಿವಣ್ಣನ ಆರ್ಭಟ ನೋಡಿದ ಪ್ರೇಕ್ಷಕರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಶಿವಣ್ಣನ ನಟನೆಗೆ ಫಿದಾ
60ರ ದಶಕದ ಒಂದು ಕಾಲ್ಪನಿಕ ಕಥೆಯನ್ನು 'ವೇದ' ಚಿತ್ರದಲ್ಲಿ ಹೇಳಲಾಗಿದೆ. ಒಂದು ರಿವೇಂಜ್ ಡ್ರಾಮಾವನ್ನು ಬಹಳ ಸೊಗಸಾಗಿ ತೆರೆಗೆ ತಂದಿದ್ದಾರೆ. ಎರಡು ಶೇಡ್‌ಗಳಿರುವ ಪಾತ್ರದಲ್ಲಿ ಶಿವಣ್ಣ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ತಮಿಳು ಪ್ರೇಕ್ಷಕರು ಕೂಡ ಸಿನಿಮಾ ನೋಡಿ ಬಹುಪರಾಕ್ ಹೇಳ್ತಿದ್ದಾರೆ. ಶಿವಣ್ಣನ ನಟನೆ, ಮೇಕಿಂಗ್, ಸಿನಿಮಾಟೋಗ್ರಫಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 'ಕಾಂತಾರ' ರೀತಿಯಲ್ಲೇ ನಿಧಾನವಾಗಿ ಪ್ರೇಕ್ಷಕರನ್ನು ಸೆಳೆಯುವ ಸುಳಿವು ಸಿಕ್ತಿದೆ.

'ಜೈಲರ್' ಚಿತ್ರಕ್ಕಾಗಿ ಕಾತರ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ಜೈಲರ್' ಚಿತ್ರದ ಪ್ರಮುಖ ಪಾತ್ರದಲ್ಲಿ ಶಿವರಾಜ್‌ಕುಮಾರ್ ನಟಿಸ್ತಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಶಿವಣ್ಣ ಈಗಾಗಲೇ ಚಿತ್ರೀಕರಣದಲ್ಲೂ ಭಾಗಿ ಆಗಿ ಬಂದಿದ್ದಾರೆ. 'ವೇದ' ಚಿತ್ರದಲ್ಲಿ ಹ್ಯಾಟ್ರಿಕ್ ಹೀರೊ ನಟನೆ ನೋಡಿ ತಮಿಳು ಪ್ರೇಕ್ಷಕರು ಫಿದಾ ಆಗಿದ್ದಾರೆ. 'ಜೈಲರ್' ಚಿತ್ರದಲ್ಲಿ ರಜನಿಕಾಂತ್- ಶಿವಣ್ಣನನ್ನು ಒಟ್ಟಿಗೆ ತೆರೆಮೇಲೆ ನೋಡಲು ಉತ್ಸುಕರಾಗಿರುವುದಾಗಿ ಹೇಳುತ್ತಿದ್ದಾರೆ.

ವೀಕೆಂಡ್‌ನಲ್ಲಿ ಭರ್ಜರಿ ರೆಸ್ಪಾನ್ಸ್
ಇನ್ನು ಕರ್ನಾಟಕದ 300ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ 'ವೇದ' ಸಿನಿಮಾ ರಿಲೀಸ್ ಆಗಿದೆ. ವೀಕೆಂಡ್‌ನಲ್ಲಿ ಫ್ಯಾಮಿಲಿ ಆಡಿಯನ್ಸ್ ಥಿಯೇಟರ್‌ನತ್ತ ಬರ್ತಿದ್ದಾರೆ. ಶಿವಣ್ಣನ ಜೊತೆಗೆ ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಉಮಾಶ್ರೀ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಗೀತಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಸ್ವತಃ ಗೀತಾ ಶಿವರಾಜ್‌ಕುಮಾರ್ 'ವೇದ' ಸಿನಿಮಾ ನಿರ್ಮಿಸಿದ್ದಾರೆ. ನಗರದ ವಿವಿಧ ಚಿತ್ರಮಂದಿರಗಳಿಗೆ ಶಿವಣ್ಣ ಭೇಟಿ ನೀಡುತ್ತಿದ್ದಾರೆ.