Just In
Don't Miss!
- Education
IIMB Recruitment 2021: ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
- Sports
ಐಪಿಎಲ್ 2021: ಹೊಸ ಆವೃತ್ತಿಗೆ ಸಿದ್ಧತೆ, ಚೆನ್ನೈಗೆ ಬಂದಿಳಿದ ಧೋನಿ, ರಾಯುಡು
- News
ಈ ಬಾರಿಯ 'ಉರಿ ಬೇಸಿಗೆ' ಕುರಿತು ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ
- Finance
ಚಿನ್ನದ ಬೆಲೆ ಇಳಿಕೆ: ಗರಿಷ್ಠ ಮಟ್ಟಕ್ಕಿಂತ 11,500 ರೂ. ಕಡಿಮೆ
- Lifestyle
ರಾತ್ರಿ ವೇಳೆ ಬೇಳೆಕಾಳು ತಿನ್ನಬೇಕೋ ಬೇಡವೋ, ಆಯುರ್ವೇದ ಏನು ಹೇಳುತ್ತದೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಮಲ್ ಹಾಸನ್ ಗೆ ಶಸ್ತ್ರ ಚಿಕಿತ್ಸೆ: ಸರ್ಜರಿ ಬಳಿಕ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಮಕ್ಕಳು
ನಟ ಮತ್ತು ಮಕ್ಕಳ್ ನೀದಿ ಮೈಯಮ್ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರ ಚಿಕಿತ್ಸೆಯ ಬಳಿಕ ಮಕ್ಕಳಾದ ಶ್ರುತಿ ಹಾಸನ್ ಮತ್ತು ಅಕ್ಷರಾ ಹಾಸನ್ ಪತ್ರದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕಮಲ್ ಹಾಸನ್ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಬೆಳಗ್ಗೆ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಎಂದು ಮಕ್ಕಳಾದ ಶ್ರುತಿ ಮತ್ತು ಅಕ್ಷರಾ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ಇನ್ನು ನಾಲ್ಕೈದು ದಿನಗಳು ಆಸ್ಪತ್ರೆಯಲ್ಲಿದ್ದು ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.
ರಾಜಕೀಯ ಮತ್ತು ಸಿನಿಮಾದಿಂದ ದಿಢೀರ್ ಬ್ರೇಕ್ ಪಡೆದ ಕಮಲ್ ಹಾಸನ್: ಕಾರಣವೇನು?
'ನಮ್ಮ ತಂದೆಯ ಆರೋಗ್ಯದ ಬಗ್ಗೆ ಕಾಳಜಿಗೆ, ಎಲ್ಲರ ಪ್ರಾರ್ಥನೆ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಶಸ್ತ್ರ್ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಹೇಳಲು ಸಂತಸವಾಗುತ್ತೆ. ಇಂದು ಬೆಳಗ್ಗೆ ವೈದ್ಯರಾದ ಡಾ.ಮೋಹನ್ ಕುಮಾರ್ ಮತ್ತು ಡಾ. ಜೆ ಎಸ್ ಎನ್ ಮೂರ್ತಿ ಸರ್ಜರಿ ಮಾಡಿದ್ದಾರೆ' ಎಂದು ತಂದೆಯ ಸರ್ಜರಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
'ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಂದೆಯನ್ನು ಉತ್ತಮವಾಗಿ ನೋಡಿಕೊಳ್ಳುತ್ತಿದ್ದಾರೆ. ಉತ್ಸಾಹದಲ್ಲಿದ್ದಾರೆ. ಶೀಘ್ರದಲ್ಲೇ ಗುಣಮುಖರಾಗಿ ಕೆಲಸಕ್ಕೆ ಮರಳಿದ್ದಾರೆ' ಎಂದು ಹೇಳಿದ್ದಾರೆ.
ಶಸ್ತ್ರ ಚಿಕಿತ್ಸೆಯ ಮೊದಲು ಮಾಹಿತಿ ನೀಡಿದ್ದ ಕಮಲ್, ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಬ್ರೇಕ್ ಪಡೆಯುವುದಾಗಿ ಹೇಳಿದ್ದರು. 66 ವರ್ಷದ ನಟ ಹಾಸನ್ ಕಳೆದ 15 ದಿನಗಳಲ್ಲಿ 5,000 ಕಿಮಿ ಓಡಾಡಿರುವುದಾಗಿ ಮಾಹಿತಿ ಹಂಚಿಕೊಂಡಿದ್ದರು. ಏಪ್ರಿಲ್ ಮತ್ತು ಮೇ ನಲ್ಲಿ ಬರುವ ಚುನಾವಣೆಗೂ ಮೊದಲು ಸಂಪೂರ್ಣ ಗುಣಮುಖರಾಗಿ ಮತ್ತೆ ಬರುವುದಾಗಿ ಭರವಸೆ ನೀಡಿದ್ದಾರೆ.
ನಟ ಕಮಲ್ ಹಾಸನ್ ವರ್ಷಗಳ ಹಿಂದೆಯೇ ಅಪಘಾತದಿಂದ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಮತ್ತೊಂದು ಚಿಕಿತ್ಸೆ ಒಳಗಾಗಬೇಕೆಂದು ವೈದ್ಯರು ಸೂಚಿಸಿದ್ದರು. ಆದರೆ ಕೆಲಸದ ಒತ್ತಡದ ನಡುವೆ ಚಿಕಿತ್ಸೆ ಕಡೆ ಗಮನ ಕೊಟ್ಟಿರಲಿಲ್ಲ. ಇದೀಗ ನೋವು ಜಾಸ್ತಿಯಾದ ಕಾರಣ ದಿಢೀರ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಕಮಲ್ ಬೇಗ ಗುಣಮುಖರಾಗಿ ಕೆಲಸಕ್ಕೆ ಮರಳಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.