ರುಕ್ಮಿಣಿ ವಸಂತ್ ಹೊಸ ಸಿನಿಮಾ ಟೀಸರ್ ರಿಲೀಸ್; ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ತೆರೆಗೆ

ಸೌತ್ ಸಿನಿದುನಿಯಾದಲ್ಲಿ ದಿಢೀರ್ ಕ್ರೇಜ್ ಸೃಷ್ಟಿಸಿಕೊಂಡ ಬೆಡಗಿ ರುಕ್ಮಿಣಿ ವಸಂತ್. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಚೆಲುವೆ ಇದೀಗ ಪರಭಾಷೆ ಸಿನಿಮಾಗಳಲ್ಲಿ ಕೂಡ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಜ್ಯೂ. ಎನ್‌ಟಿಆರ್‌, ಪ್ರಶಾಂತ್ ನೀಲ್ ಚಿತ್ರಕ್ಕೆ ನಾಯಕಿಯಾಗುತ್ತಾರೆ ಎನ್ನಲಾಗ್ತಿದೆ.

ಕಳೆದ ವರ್ಷ ರುಕ್ಮಿಣಿ ನಟಿಸಿದ 3 ಸಿನಿಮಾಗಳು ತೆರೆಗೆ ಬಂದಿತ್ತು. 'ಬಘೀರ' ಚಿತ್ರದಲ್ಲಿ ಶ್ರೀಮುರಳಿ ಜೋಡಿ ಡಾ. ಸ್ನೇಹಾ ಆಗಿ ಮಿಂಚಿದ್ದರು. ಬಳಿಕ ಶಿವಣ್ಣ ನಟನೆಯ 'ಭೈರತಿ ರಣಗಲ್' ಚಿತ್ರದಲ್ಲಿ ಡಾ. ವೈಶಾಲಿ ಆಗಿ ಕಾಣಿಸಿಕೊಂಡಿದ್ದರು. ನಡುವೆ 'ಅಪ್ಪುಡೋ ಇಪ್ಪುಡೋ ಎಪುಡೊ' ಎನ್ನುವ ತೆಲುಗು ಚಿತ್ರವೊಂದರಲ್ಲಿ ನಟಿಸಿ ಗಮನ ಸೆಳೆದಿದ್ದರು. ಆ ಸಿನಿಮಾ ಅಷ್ಟಾಗಿ ಸದ್ದು ಮಾಡಲಿಲ್ಲ.

Sivakarthikeyan and Rukmini Vasanth starrer Madharasi Title Glimpse released

'ಬಘೀರ' ಹಾಗೂ 'ಭೈರತಿ ರಣಗಲ್' ಚಿತ್ರಗಳು ಬ್ಲಾಕ್‌ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ಇನ್ನು ತಮಿಳಿನಲ್ಲಿ ಶಿವಕಾರ್ತಿಕೇಯನ್ ಚಿತ್ರಕ್ಕೆ ರುಕ್ಮಿಣಿ ಆಯ್ಕೆ ಆಗಿದ್ದರು. ಸದ್ಯ ಆ ಚಿತ್ರದ ಟೈಟಲ್ ರಿವೀಲ್ ಆಗಿದೆ. ಸಣ್ಣ ಟೀಸರ್ ಕೂಡ ರಿಲೀಸ್ ಆಗಿ ಸದ್ದು ಮಾಡ್ತಿದೆ. ಚಿತ್ರಕ್ಕೆ 'ಮದರಾಸಿ' ಎಂಬ ಟೈಟಲ್ ಫಿಕ್ಸ್ ಆಗಿದೆ.

ಎ. ಆರ್ ಮುರುಗದಾಸ್ 'ಮದರಾಸಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಅವರು ಕೊಟ್ಟಿಕೊಟ್ಟಿದ್ದಾರೆ. ಇನ್ನು ಕಳೆದ ವರ್ಷ 'ಅಮರನ್' ಚಿತ್ರದಲ್ಲಿ ನಟಿಸಿ ಶಿವಕಾರ್ತಿಕೇಯನ್ ಸದ್ದು ಮಾಡಿದ್ದರು. ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರ ಮನಗೆದ್ದಿದ್ದರು. ಇದೀಗ ಇಂತಹ ಕ್ರೇಜಿ ಕಾಂಬಿನೇಷನ್ ಚಿತ್ರದಲ್ಲಿ ಸ್ಯಾಂಡಲ್‌ವುಡ್ ಕ್ರೇಜಿ ಹೀರೊಯಿನ್ ರುಕ್ಮಿಣಿ ನಟಿಸಿರುವುದು ವಿಶೇಷ.

Sivakarthikeyan and Rukmini Vasanth starrer Madharasi Title Glimpse released

ವಿದ್ಯುತ್ ಜಮ್ವಾಲ್, ಬಿಜು ಮೆನನ್, ವಿಕ್ರಾಂತ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಅಂದಾಜು 200 ಕೋಟಿ ರೂ. ಬಜೆಟ್‌ನಲ್ಲಿ ಬಹಳ ಅದ್ಧೂರಿಯಾಗಿ 'ಮದರಾಸಿ' ಸಿನಿಮಾ ನಿರ್ಮಾಣ ಆಗುತ್ತಿದೆ. ತಮಿಳು ಜೊತೆಗೆ ಕನ್ನಡ ಸೇರಿ 5 ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಅನಿರುದ್ಧ್ ರವಿಚಂದನ್ ಮ್ಯೂಸಿಕ್ ಈ ಆಕ್ಷನ್ ಎಂಟರ್‌ಟೈನರ್ ಚಿತ್ರಕ್ಕಿದೆ. ಟೀಸರ್ ಸಣ್ಣ ಝಲಕ್‌ನಲ್ಲಿ ರಾಕ್‌ಸ್ಟರ್ ರೀತಿ ಗಿಟಾರ್ ಹಿಡಿದು ರುಕ್ಮಿಣಿ ಮಿಂಚಿದ್ದಾರೆ.

ದಕ್ಷಿಣ ಭಾರತದವರನ್ನು ಉತ್ತರ ಭಾರತದವರು 'ಮದರಾಸಿ' ಎಂದು ಕರೆಯುತ್ತಾರೆ. ಅದೇ ಟೈಟಲ್‌ನಲ್ಲಿ ಸಿನಿಮಾ ಕಟ್ಟಿಕೊಡಲಾಗುತ್ತಿದೆ. ಚೆನ್ನೈ, ಪಾಂಡಿಚೇರಿ ಸೇರಿದಂತೆ ಹಲವು ಭಾಗಗಳಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಕಳೆದ ದೀಪಾವಳಿ ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡಲು ಪ್ರಯತ್ನಿಸಲಾಗಿತ್ತು. ಆದರೆ ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲೇ ಸಿನಿಮಾ ತೆರೆಗೆ ಬರುವ ನಿರೀಕ್ಷೆಯಿದೆ.

'ಏಸ್' ಎನ್ನುವ ಮತ್ತೊಂದು ತಮಿಳು ಚಿತ್ರದಲ್ಲಿ ಕೂಡ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ. ವಿಜಯ್ ಸೇತುಪತಿ ಜೊತೆ ಈ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಆ ಚಿತ್ರದ ಚಿತ್ರೀಕರಣ ಕೂಡ ಮುಕ್ತಾಯವಾಗಿದೆ. ಆರುಮುಗ ಕುಮಾರ್ ಚಿತ್ರವನ್ನು ನಿರ್ಮಿಸಿ ನಿರ್ದೇಶನ ಮಾಡುತ್ತಿದ್ದಾರೆ. 6 ವರ್ಷಗಳ ಹಿಂದೆ 'ಬೀರ್‌ಬಲ್' ಚಿತ್ರದ ಮೂಲಕ ರುಕ್ಮಿಣಿ ಚಂದನವನಕ್ಕೆ ಕಾಲಿಟ್ಟಿದ್ದರು.

'ಸಪ್ತಸಾಗರದಾಚೆ ಎಲ್ಲೋ' ಸರಣಿ ಸಿನಿಮಾಗಳಲ್ಲಿ ರಕ್ಷಿತ್ ಶೆಟ್ಟಿ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು. ಪ್ರಿಯಾ ಪಾತ್ರದಲ್ಲಿ ಗಮನ ಸೆಳೆದಿದ್ದರು. ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಜೋಡಿಯಾಗಿ 'ಬಾನದಾರಿಯಲಿ' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ತೆಲುಗು, ತಮಿಳು ಚಿತ್ರರಂಗದಲ್ಲಿ ಕೂಡ ಬಹಳ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ.

More from Filmibeat

English summary
Rukmini Vasanth's Upcoming Panindia film teaser Out now;
Read more about: kollywood rukmini vasanth
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X