ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ತೀವ್ರ ಗಂಭೀರ
ಕೊರೊನಾಕ್ಕೆ ತುತ್ತಾಗಿ ತೀವ್ರ ಗಂಭೀರ ಸ್ಥಿತಿಗೆ ಹೋಗಿದ್ದ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೆಲವು ದಿನಗಳ ಹಿಂದೆ ಚೇತರಿಸಿಕೊಂಡಿದ್ದರು. ಆದರೆ ಈಗ ಮತ್ತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಇದೆ, ಅವರು ಕೆಲವೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ಎಂದು ಎಸ್.ಪಿ.ಬಾಲಸುಬ್ರಹ್ಮಣ್ಯಂ ಪುತ್ರ ಕೆಲವು ದಿನಗಳ ಹಿಂದಷ್ಟೆ ಹೇಳಿದ್ದರು. ಆದರೆ ಈಗ ಹಠಾತ್ತನೆ ಬಂದಿರುವ ಸುದ್ದಿಯಂತೆ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5 ರಂದು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವೇ ದಿನಗಳಲ್ಲಿ ಅವರ ಸ್ಥಿತಿ ಗಂಭೀರವಾಯಿತು, ಅವರನ್ನು ಐಸಿಯುಗೆ ಸ್ಥಳಾಂತರಿಸಿ ವೆಂಟಿಲೇಟರ್‌ನಲ್ಲಿಟ್ಟು ಚಿಕಿತ್ಸೆ ಮುಂದುವರೆಸಲಾಯಿತು.

ಬಹು ದಿನಗಳ ಕಾಲ ಗಂಭೀರವಾಗಿಯೇ ಇದ್ದ ಎಸ್.ಬಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಕೆಲವು ಸೆಪ್ಟೆಂಬರ್ ಮೊದಲ ವಾರದಲ್ಲಿ ತುಸು ಚೇತರಿಕೆ ಕಂಡಿತ್ತು. ಸೆಪ್ಟೆಂಬರ್ ಎರಡನೇ ವಾರದ ಹೊತ್ತಿಗೆ ಕೊರೊನಾ ನೆಗೆಟಿವ್ ಆಗಿ, ಎನ್‌ಸಿಬಿ ಮನೆಗೆ ಮರಳಲು ತಯಾರಾಗಿದ್ದರು. ಆದರೆ ಈಗ ಇದ್ದಕ್ಕಿಂದ್ದಂತೆ ಎಸ್‌ಪಿಬಿ ಆರೋಗ್ಯ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದೆ.
Recommended Video
ಸೆಪ್ಟೆಂಬರ್ 24 ರಂದು ಎಂಜಿಎಂ ಆಸ್ಪತ್ರೆ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಪ್ರಕಾರ, ಎಸ್‌ಪಿಬಿ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ. ಎಸ್‌ಪಿಬಿ ಅವರನ್ನು ಗರಿಷ್ಠ ಜೀವರಕ್ಷಕ ವ್ಯವಸ್ಥೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಅತ್ಯಂತ ಗಂಭೀರವಾಗಿದೆ ಎಂದಿದೆ.


Click it and Unblock the Notifications











