ಕೋವಿಡ್ ಲಸಿಕೆ ಪಡೆದ ನಟ ಸೂರ್ಯ ಮತ್ತು ಜ್ಯೋತಿಕಾ ದಂಪತಿ
ಕೊರೊನಾ ಎರಡನೇ ಅಲೆಯ ಭೀಕರತೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. 2ನೇ ಅಲೆಯಿಂದ ದೇಶದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ರಾಜ್ಯದಲ್ಲೂ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಲಸಿಕೆಯೊಂದೆ ಪರಿಹಾರವಾಗಿದೆ. ಹಾಗಾಗಿ ಅನೇಕರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.
ಅನೇಕ ಸಿನಿ ಸೆಲೆಬ್ರಿಟಿಗಳು ಸಹ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಸಾಕಷ್ಟು ನಟ, ನಟಿಯರು ಲಸಿಕೆ ಹಾಕಿಸಿಕೊಂಡಿದ್ದಾರೆ. ಇದೀಗ ತಮಿಳು ನಟ ಸೂರ್ಯ ಮತ್ತು ನಟಿ ಜ್ಯೋತಿಕಾ ಮೊದಲ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.
ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಸಿಕಿಸಿಕೊಂಡ ಬಳಿಕ ಸೂರ್ಯ ತನ್ನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ "ವ್ಯಾಕ್ಸಿನೇಟೆಡ್" ಎಂದು ಬರೆದುಕೊಂಡಿದ್ದಾರೆ. ಸೂರ್ಯ ದಂಪತಿಯ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಮೆಚ್ಚುಗೆ ಹರಿದುಬರುತ್ತಿದೆ.

ಈಗಾಗಲೇ ಖ್ಯಾತ ಕಲಾವಿದರಾದ ರಜನಿಕಾಂತ್, ಕಮಲ್ ಹಾಸನ್, ಮಹೇಶ್ ಬಾಬು, ಕೀರ್ತಿ ಸುರೇಶ್, ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ಲಸಿಕೆ ಪಡೆದು ಅಭಿಮಾನಿಗಳಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನು ನಟ ಸೂರ್ಯ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಸೂರ್ಯ 40 (ತಾತ್ಕಾಲಿಕ ಹೆಸರು) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸನ್ ಪಿಕ್ಟರ್ಸ್ ಬಂಡವಾಳ ಹೂಡಿದೆ. ಪ್ರಿಯಾಂಕಾ ಅತುಲ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಇನ್ನು ನಟಿ ಜ್ಯೋತಿಕಾ ಸಹ ಮದುವೆ ಬಳಿಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊನೆಯದಾಗಿ ಪೋನ್ಮಗಲ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. 2020ರಲ್ಲಿ ಸಿನಿಮಾ ರಿಲೀಸ್ ಆಗಿದೆ. ಅಭಿಮಾನಿಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.


Click it and Unblock the Notifications











