ಕೋವಿಡ್ ಲಸಿಕೆ ಪಡೆದು ನಟ ಕಮಲ್ ಹಾಸನ್ ಹೇಳಿದ್ದೇನು?
ಭಾರತದಲ್ಲಿ ಕೊರೊನಾ ಎರಡನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ಸಿಕ್ಕಿದ್ದು, ಅನೇಕರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಇದೀಗ ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಮೂಲಕ ಭಾರತದಲ್ಲಿ ಲಸಿಕೆ ಹಾಕಿಸಿಕೊಂಡ ಮೊದಲ ಸ್ಟಾರ್ ಕಲಾವಿದ ಎನಿಸಿಕೊಂಡಿದ್ದಾರೆ.
ಇಂದು (ಮಾರ್ಚ್ 2) ಬೆಳಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದು, ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ತಾವು ಮಾತ್ರವಲ್ಲದೆ ಸಮಾಜದ ಬಗ್ಗೆ ಕಾಳಜಿ ಇರುವವರು ಸಹ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಮಲ್ ಹಾಸನ್, 'ಶ್ರೀ ರಾಮಚಂದ್ರ ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಪಡೆದೆ. ನಿಮ್ಮ ಕಾಳಜಿಗೆ ಮಾತ್ರವಲ್ಲದೆ, ಸಮಾಜದ ಬಗ್ಗೆ ಕಾಳಜಿ ಇರುವವರು ಸಹ ಲಸಿಕೆ ಪಡೆಯಿರಿ. ಈಗ ರೋಗದ ವಿರುದ್ಧ ಹೋರಾಡುವ ಲಸಿಕೆ ಪಡೆಯೋಣ. ಮುಂದಿನ ತಿಂಗಳು ಬ್ರಷ್ಟಾಚಾರದ ವಿರುದ್ಧ ಹೋರಾಡುವ ಲಸಿಕೆಗೆ ಸಿದ್ಧರಾಗಿ' ಎಂದು ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಕಮಲ್ ಹಾಸನ್ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಇತ್ತೀಚಿಗಷ್ಟೆ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕಮಲ್ ಹಾಸನ್ ಸದ್ಯ ಸಂಪೂರ್ಣ ಚೇತರಿಸಿಕೊಂಡಿದ್ದು ಮತ್ತೆ ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ.


Click it and Unblock the Notifications











