ತಮಿಳು ನಟ ಸೂರ್ಯಗೆ ಕೊರೊನಾ ಪಾಸಿಟಿವ್

ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಅಲ್ಲದೆ ಇನ್ನೂ ಕೊರೊನಾ ವೈರಸ್ ಹೋಗಿಲ್ಲ, ಜೀವನ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ ಎಂದಿಲ್ಲ ಎಂದು ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿರುವ ಸೂರ್ಯ, 'ನಾನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದೇನೆ. ವೈದ್ಯರಿಂದ ಚಿಕಿತ್ಸೆಪಡೆಯುತ್ತಿದ್ದೇನೆ. ಜೀವನವೂ ಇನ್ನು ಸಹಜ ಸ್ಥಿತಿಗೆ ಬಂದಿಲ್ಲ ಎಂದು ನಾವು ಅರಿತುಕೊಳ್ಳಬೇಕು. ಸುರಕ್ಷತೆಯ ಕಡೆ ಗಮನಕೊಡಬೇಕು. ವೈದ್ಯರಿಗೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.

ನಿರ್ದೇಶಕ ರಾಜಶೇಖರ್ ಪಾಂಡಿಯನ್ ಟ್ವೀಟ್ ಮಾಡಿ, ಸಹೋದರ ಮತ್ತು ಸಹೋದರಿಯರೇ ಅಣ್ಣ ಚೆನ್ನಾಗಿದ್ದಾರೆ. ಯಾರು ಚಿಂತಿಸಬೇಡಿ' ಎಂದು ಹೇಳಿದ್ದಾರೆ.

Tamil Actor Surya tests positive for Coronavirus

ನಟ ಸೂರ್ಯ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಬೇಗ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಿದ್ದಾರೆ.

ಸೂರ್ಯ ಕೊನೆಯದಾಗಿ ಸೂರರೈ ಪೊಟ್ರು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಆಗಿದೆ. ಒಟಿಟಿಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾ ಆಸ್ಕರ್ ರೇಸ್ ನಲ್ಲಿ ಜಾಗ ಪಡೆದಿದೆ.

ಇತ್ತೀಚಿಗಷ್ಟೆ ಸೂರ್ಯ ನಟನೆಯ 40ನೇ ಸಿನಿಮಾ ಅನೌನ್ಸ್ ಆಗಿದ್ದು, ಪಾಂಡಿರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪ್ರಿಯಾಂಕಾ ಮೋಹನ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಚಿತ್ರೀಕರಣಕ್ಕೆ ಸಿದ್ಧರಾಗಿದ್ದ ಸೂರ್ಯಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆ ಇದೆ.

Recommended Video

ವಿದೇಶದಲ್ಲಿ KGF 2 ಗೆ ಎದುರಾಯ್ತು ಅಡ್ಡಿ | Filmibeat Kannada

More from Filmibeat

English summary
Tamil Actor Surya tests positive for Coronavirus.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X