ಚಿತ್ರರಂಗದಲ್ಲಿ ವಿಷಾದ; ಯುವನಟಿ ದೀಪಾ ಆತ್ಮಹತ್ಯೆಗೆ ಶರಣು!

ಚಿತ್ರರಂಗದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಪೌಲಿನ್ ಜೆಸ್ಸಿಕಾ ಎಂದೇ ಖ್ಯಾತರಾಗಿದ್ದ ತಮಿಳು ನಟಿ ದೀಪಾ ತಮ್ಮ 29ನೇ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ, ಭಾನುವಾರ ಮಧ್ಯಾಹ್ನ ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನ ಕೋಣೆಯಲ್ಲಿ ಆಕೆ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಾಳೆ. ವೈಯಕ್ತಿಕ ಕಾರಣಗಳಿಂದ ನೊಂದು ದೀಪಾ ಈ ತೀವ್ರ ನಿರ್ಧಾರ ತೆಗೆದುಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರೇಮ ವೈಫಲ್ಯದಿಂದ ಯುವ ನಟಿ ದೀಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಕಳೆದ ಕೆಲ ವರ್ಷಗಳಿಂದ ಒಂಟಿ ಜೀವನ ನಡೆಸುತ್ತಿದ್ದ ದೀಪಾ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ನೇಹಿತರು ತಿಳಿಸಿದ್ದಾರೆ. ದೀಪಾ ಅವರ ಕುಟುಂಬಸ್ಥರು ಆಕೆಯನ್ನು ಸಂಪರ್ಕಿಸಲು ಕರೆ ಮಾಡಿದಾಗ ಆಕೆ ಫೋನ್ ತೆಗೆಯಲಿಲ್ಲ. ಆಕೆ ವಾಸವಿದ್ದ ಫ್ಲಾಟ್‌ಗೆ ಸ್ನೇಹಿತ ಪ್ರಭಾಕರನ್ ಹೋಗಿ ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ದೀಪಾ ಕಾಣಿಸಿದ್ದಾಳೆ . ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Tamil Actress Deepa Found dead at Chennai Flat Suspect Love Affair

ದೀಪಾ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ ಎನ್ನಲಾಗಿದೆ. ಇದರಲ್ಲಿ ಅವಳು ತನ್ನ ಜೀವನದ ಕೊನೆಯವರೆಗೂ ಅವನನ್ನು ಪ್ರೀತಿಸುತ್ತಲೇ ಇರುತ್ತೇನೆ ಎಂದು ಬರೆದಿದ್ದಾಳೆ, ಆದರೆ ಆತನ ಹೆಸರನ್ನು ಮಾತ್ರ ಉಲ್ಲೇಖಿಸಿಲ್ಲ. ದೀಪಾ ಅನೇಕ ತಮಿಳು ಚಿತ್ರಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದಾರೆ.

ಸಣ್ಣ ಪಾತ್ರಗಳಲ್ಲಿ ನಟಿಸಿದರೂ ಪ್ರೇಕ್ಷಕರ ಗಮನ ಸೆಳೆದಿದ್ದರು. ಇದೇ ವರ್ಷ ಮೇ 27ಕ್ಕೆ ಬಿಡುಗಡೆಯಾದ 'ವಾಯ್ದಾ' ಚಿತ್ರದ ಲೀಡ್‌ ರೋಲ್‌ನಲ್ಲಿ ಈಕೆ ನಟಿಸಿದ್ದಳು. ಇನ್ನು ಸೂಪರ್ ಹಿಟ್ 'ತುಪ್ಪಾರಿವಾಲನ್' ಚಿತ್ರದಲ್ಲೂ ಬಣ್ಣ ಹಚ್ಚಿದ್ದಳು.

Tamil Actress Deepa Found dead at Chennai Flat Suspect Love Affair

ಕೆಲ ದಿನಗಳ ಹಿಂದಷ್ಟೇ ತಮಿಳು ಸಿನಿಮಾ ಗೀತರಚನೆಕಾರ ಕಬಿಲನ್ ಅರ ಮಗಳು ತೂರಿಗಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪೋಷಕರು ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಒತ್ತಾಯಿಸಿದ್ದ ಆಕೆ ಈ ನಿರ್ಧಾರ ಕೈಗೊಂಡಿದ್ದಳು ಎನ್ನಲಾಗಿತ್ತು. ಇದೀಗ ದೀಪಾ ಆತ್ಮಹತ್ಯೆ ತಮಿಳು ಚಿತ್ರರಂಗಕ್ಕೆ ಆಘಾತ ತಂದಿದೆ. ಇನ್ನು ಇತ್ತೀಚೆಗೆ ತೆಲುಗು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಸಾಯಿ ಕುಮಾರ್ ಎಂಬ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ತಂಡದಲ್ಲಿ ಕೆಲಸ ಮಾಡುತ್ತಿದ್ದ ಸಾಯಿ ಕುಮಾರ್ ಸಾಲಭಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.

More from Filmibeat

English summary
Tamil Actress Deepa Found dead at Chennai Flat, Note Also Recovered. Deepa whose real name is Pauline Jessica has acted in a few films in small roles including in Thupparivalan Movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X