ಮೇಕೆದಾಟು ಆಣೆಕಟ್ಟು ವಿವಾದ; ಮೋದಿ ಜೊತೆ 20 ನಿಮಿಷ ವಿಜಯ್ ಚರ್ಚೆ.. 7 ಡಿಮ್ಯಾಂಡ್ ಇಟ್ಟ ದಳಪತಿ
ಮೇಕೆದಾಟು ಆಣೆಕಟ್ಟು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಅಗ್ನಿ ಪರೀಕ್ಷೆ ಎದುರಾಗಿದೆ. ಈ ಬೆನ್ನಲ್ಲೇ ವಿಜಯ್ ತಮ್ಮ ಅಧಿಕಾರಿಗಳಿಗೆ ಕಾನೂನು ಹೋರಾಟ ಮುಂದುವರೆಸುವಂತೆ ಸೂಚನೆಯನ್ನು ನೀಡಿದ್ದಾರೆ. ಇದರ ಹಿಂದೇನೆ ಪ್ರಧಾನಿ ನರೇಂದ್ರ ಮೋದಿಯನ್ನು ಇಂದು (ಮೇ 27) ನವ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಪ್ರಧಾನಿ ಮೋದಿಯೊಂದಿಗೆ ಸುಮಾರು 20 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ವಿಜಯ್ ಹಲವು ಡಿಮ್ಯಾಂಡ್‌ಗಳನ್ನು ಇಟ್ಟುಕೊಂಡು ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ. ತಮಿಳು ಮಾಧ್ಯಮಗಳು ವರದಿ ಮಾಡಿದಂತೆ ಪ್ರಧಾನಿ ಮೋದಿಯೊಂದಿಗೆ ವಿಜಯ್ ಸುಮಾರು 20 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ.

ಮೋದ-ವಿಜಯ್ ಅವರ ಈ ಮಹತ್ವದ ಸಭೆಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸುಮಾರು ಏಳು ಡಿಮ್ಯಾಂಡ್‌ಗಳನ್ನು ಇಟ್ಟಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ಮುಂದೆ ಪ್ರಮುಖ ಅಭಿವೃದ್ಧಿ ಬೇಡಿಕೆಗಳನ್ನು ಮುಂದಿಟ್ಟಿದ್ದು, ತಮಿಳುನಾಡು ಸರ್ಕಾರವೇ ಈ ಬಗ್ಗೆ ವಿವರವಾದ ಮಾಹಿತಿಯನ್ನೂ ಪ್ರಕಟಿಸಿದೆ. ಹಾಗಿದ್ದರೆ, ಕೇಂದ್ರದ ಮುಂದಿಟ್ಟ ಆ 7 ಬೇಡಿಕೆಗಳು ಏನು? ತಿಳಿಯುವುದಕ್ಕೆ ಮುಂದೆ ಓದಿ.
ತಮಿಳುನಾಡು ಸಿಎಂ ಜೋಸೆಫ್ ವಿಜಯ್ ದೆಹಲಿಗೆ ಕೇವಲ ಮೇಕೆದಾಟು ವಿಷಯವನ್ನಷ್ಟೇ ಇಟ್ಟುಕೊಂಡಿ ಹೋಗಿಲ್ಲ. ಅದರೊಂದಿಗೆ ಬರೋಬ್ಬರಿ 7 ಡಿಮ್ಯಾಂಡ್‌ಗಳನ್ನು ಇಟ್ಟುಕೊಂಡು ಭೇಟಿ ಮಾಡಿದ್ದರು. ಪ್ರಧಾನಿ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಇಟ್ಟಿದ್ದಾರೆ. ಅದರಲ್ಲಿ ಮೊದಲನೆಯದು ಮೇಕೆದಾಟು ಆಣೆಕಟ್ಟು ವಿವಾದ.
ಡಿಕೆ ಶಿವಕುಮಾರ್ ಮೇಕೆದಾಟು ಅಣೆಕಟ್ಟು ವಿಚಾರ ಪ್ರಸ್ತಾಪಿಸುತ್ತಿದ್ದಂತೆ ತಮಿಳುನಾಡು ಸಿಎಂ ವಿಜಯ್ ಅಲರ್ಟ್ ಆಗಿದ್ದಾರೆ. ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದು, ಕಾವೇರಿ ನದಿ ನೀರು ವಿವಾದ ನ್ಯಾಯಮಂಡಳಿ (CWDT) ಮತ್ತು ಸುಪ್ರೀಂ ಕೋರ್ಟ್ ತೀರ್ಪಿಗೆ ಸಂಪೂರ್ಣ ವಿರುದ್ಧವಾಗಿದೆ. ಇದು ತಮಿಳುನಾಡು ರೈತರಲ್ಲಿ ಆತಂಕ ಹೆಚ್ಚಿಸಿದೆ. ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಅನುಮತಿ ಪಡೆಯದೆ ಈ ಯೋಜನೆ ಅನುಮೋದಿಸದೆ ಇರುವಂತೆ ಜಲ ಶಕ್ತಿ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹಾಗೇ ಸುಧಾರಿತ ಮಧ್ಯಮ ಯುದ್ಧ ವಿಮಾನ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ (AMCA), ವೈಮಾನಿಕ ವ್ಯವಸ್ಥೆಗಳ ಕೇಂದ್ರಗಳನ್ನು (CABS) ತಮಿಳುನಾಡಿ ಸ್ಥಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮೂರನೆಯದ್ದು, ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಬಂಧನದ ಬಗ್ಗೆ ಚರ್ಚಿಸಿದ್ದಾರೆ. ಮೀನುಗಾರರು ಹಾಗೂ ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡಲು ಶ್ರೀಲಂಕಾಗೆ ಭಾರತ ಒತ್ತಾಯ ಮಾಡಬೇಕು ಎಂದು ಪ್ರಧಾನಮಂತ್ರಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಹಾಗೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಬಂದರುಗಳು, ಹೆದ್ದಾರಿಗಳು, ರೈಲ್ವೆ ಮಾರ್ಗಗಳು, ಮತ್ತು ಕೈಗಾರಿಕಾ ಕಾರಿಡಾರ್‌ಗಳಿಗೆ ಆದ್ಯತೆ ನೀಡುವಂತೆ, ಹಣಕಾಸು ವಿಚಾರದಲ್ಲಿ ಹಂಚಿಕೆ ಮಾಡುವಂತೆ ಆಗ್ರಹಿಸಿದ್ದಾರೆ. ಹಾಗೇ ರಾಷ್ಟ್ರೀಯ ಪ್ರಾಮುಖ್ಯತೆಯ ಶಿಕ್ಷಣ ಸಂಸ್ಥೆಗಳನ್ನು ತಮಿಳುನಾಡಿನಲ್ಲಿ ಸ್ಥಾಪಿಸುವಂತೆ ಕೇಂದ್ರ ಹಣಕಾಸು ಸಚಿವೆಯಲ್ಲಿ ಮನವಿ ಮಾಡಿದ್ದಾರೆ. ಇನ್ನು ಹೊಸೂರು, ಕೊಯಮತ್ತೂರು, ಮದುರೈ ನಗರಗಳ ಸಾರ್ವಜನಿಕ ಸಾರಿಗೆ ಸುಧಾರಣೆಗಾಗಿ ಮೆಟ್ರೋ ರೈಲು ಯೋಜನೆಗಳಿಗೆ ಹಣಕಾಸು ನೆರವು ನೀಡುವಂತೆ ನಿರ್ಮಲಾ ಸೀತಾರಾಮನ್ ಅವರನ್ನು ಕೋರಿದ್ದಾರೆ.


Click it and Unblock the Notifications
